ETV Bharat / state

ಪಿಎಸ್ಐ ಅಕ್ರಮ : ಬ್ಯಾಡರಹಳ್ಳಿ ಸಬ್ ಇನ್‌ಸ್ಪೆಕ್ಟರ್​ನನ್ನು ಬಂಧಿಸಿದ ಸಿಐಡಿ ಅಧಿಕಾರಿಗಳು!

author img

By

Published : Jun 15, 2022, 12:39 PM IST

Bengaluru Sub Inspector arrested over PSI case, PSI recruitment case, Byadarahalli police station news, Bengaluru crime news, ಬೆಂಗಳೂರು ಸಬ್ ಇನ್ಸ್‌ಪೆಕ್ಟರ್ ಬಂಧನ, ಪಿಎಸ್ಐ ಪ್ರಕರಣ, ಪಿಎಸ್ಐ ನೇಮಕಾತಿ ಪ್ರಕರಣ, ಬ್ಯಾಡರಹಳ್ಳಿ ಪೊಲೀಸ್ ಠಾಣೆ ಸುದ್ದಿ, ಬೆಂಗಳೂರು ಅಪರಾಧ ಸುದ್ದಿ,
ಪಿಎಸ್ಐ ಅಕ್ರಮ

ಪಿಎಸ್ಐ ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಬ್‌ಇನ್‌ಸ್ಪೆಕ್ಟರ್​ನನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ..

ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿ ತಂಡ ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಬ್ ಇನ್‌ಸ್ಪೆಕ್ಟರ್​ನನ್ನ ಸಿಐಡಿ ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.

ಮಾಗಡಿಯ ಚಿಕ್ಕಕಲ್ಯ ಗ್ರಾಮದ ಹರೀಶ್ 2019ನೇ ಬ್ಯಾಚ್‌ನ ಪಿಎಸ್ಐ ಆಗಿದ್ದರು. ಕಳೆದ‌ ಮೂರು ವರ್ಷಗಳಿಂದ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಕರಣ ಸಂಬಂಧ ಸಿಐಡಿ ಪೊಲೀಸರು ನೀಡಿದ ದೂರಿನ‌ ಮೇರೆಗೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 14 ಮಂದಿ ಅಭ್ಯರ್ಥಿಗಳ ಪೈಕಿ ದಿಲೀಪ್ ಬಂಧನವಾಗಿತ್ತು. ಈತ ನೀಡಿದ ಸುಳಿವಿನ ಮೇರೆಗೆ ಪಿಎಸ್ಐ ಹರೀಶ್‌ನನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಓದಿ: ಪಿಎಸ್ಐ ನೇಮಕಾತಿಯಲ್ಲಿ ದರ್ಶನ್ ಗೌಡ ಅಕ್ರಮ ನಡೆಸಿರೋದು FSL ನಲ್ಲಿ ಬಹಿರಂಗ?

ದಿಲೀಪ್ ಚಿಕ್ಕಕಲ್ಯ ಗ್ರಾಮದವನಾಗಿದ್ದು‌, ಹಲವು ವರ್ಷಗಳಿಂದ‌ ಪಿಎಸ್ಐ ಹರೀಶ್‌ಗೆ ಪರಿಚಿತನಾಗಿದ್ದ. ವಾಮಮಾರ್ಗದಲ್ಲಿ‌ ಪಿಎಸ್​ಐ ಆಗುವ ಸಲುವಾಗಿ ಲಕ್ಷಾಂತರ ರೂಪಾಯಿಯನ್ನು ಹರೀಶ್ ನೀಡಿರುವುದಾಗಿ ಸಿಐಡಿ ಮುಂದೆ ಹೇಳಿಕೆ‌ ನೀಡಿದ್ದ. ಹರೀಶ್ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಸದ್ಯ ಪಿಎಸ್​ಐನನ್ನು ಬಂಧಿಸಿರುವ ಸಿಐಡಿ ವಿಚಾರಣೆ ಚುರುಕುಗೊಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.