ಭಾರತ್ ಜೋಡೋ ಯಾತ್ರೆ: ಬೆಂಗಳೂರಿನಲ್ಲಿ ಪೂರ್ವ ಸಿದ್ಧತಾ ಸಭೆ, ರಾಹುಲ್ ಗಾಂಧಿ ಆಪ್ತ ಸಹಾಯಕರ ತಂಡ ಭಾಗಿ

author img

By

Published : Sep 24, 2022, 3:14 PM IST

bharat-jodo-yatra-pre-preparation-meeting-at-bengaluru

ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ವಿಗಾಗಿ ರಚಿಸಿರುವ ವಿವಿಧ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ರಾಹುಲ್ ಗಾಂಧಿ ಆಪ್ತ ಸಹಾಯಕರ ತಂಡ ಸಭೆಯಲ್ಲಿ ಪಾಲ್ಗೊಂಡಿತ್ತು.

ಬೆಂಗಳೂರು: ಭಾರತ್ ಜೋಡೋ ಯಾತ್ರೆ ಕುರಿತು ಬೆಂಗಳೂರಿನ ಸದಾಶಿವನಗರದಲ್ಲಿರುವ ಸಂಸದ ಡಿಕೆ ಸುರೇಶ್ ನಿವಾಸದಲ್ಲಿ ಪೂರ್ವತಯಾರಿ ಸಭೆ ನಡೆಯಿತು. ಈ ಕೊನೆ ಹಂತದ ಸಿದ್ಧತಾ ಸಭೆಯಲ್ಲಿ ನೇರವಾಗಿ ರಾಹುಲ್ ಗಾಂಧಿ ತಂಡವೇ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಯಾತ್ರೆಯ ರಾಷ್ಟ್ರೀಯ ಸಂಯೋಜಕ ಕೆಬಿ ಬೈಜು, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಸಂಸದ ಡಿಕೆ ಸುರೇಶ್, ರಾಜ್ಯಸಭೆ ಸದಸ್ಯ ಜಿಸಿ ಚಂದ್ರಶೇಖರ್, ಮಾಜಿ ಸಚಿವರಾದ ಕೆಜೆ ಜಾರ್ಜ್, ದಿನೇಶ್ ಗುಂಡೂರಾವ್, ಪ್ರಿಯಾಂಕ್​ ಖರ್ಗೆ, ಚಲುವರಾಯಸ್ವಾಮಿ, ಹೆಚ್​ಸಿ ಮಹದೇವಪ್ಪ, ವಿಧಾನ ಪರಿಷತ್​ ಸದಸ್ಯ ಎಸ್ ರವಿ, ಮಾಜಿ ಐಎಎಸ್​ ಅಧಿಕಾರಿ ಸಸಿಕಾಂತ್​ ಸೆಂಥಿಲ್​, ಮುಖಂಡರಾದ ರಘುನಂದನ್ ರಾಮಣ್ಣ, ವಿನಯ್ ಕಾರ್ತಿಕ್ ಮತ್ತಿತರರು ಭಾಗವಹಿಸಿದ್ದರು.

bharat-jodo-yatra-pre-preparation-meeting-at-bengaluru
ಭಾರತ್ ಜೋಡೋ ಯಾತ್ರೆ: ಬೆಂಗಳೂರಿನಲ್ಲಿ ಪೂರ್ವ ಸಿದ್ಧತಾ ಸಭೆ, ರಾಹುಲ್ ಗಾಂಧಿ ಆಪ್ತ ಸಹಾಯಕರ ತಂಡ ಭಾಗಿ

ಭಾರತ್ ಜೋಡೋ ಯಾತ್ರೆ ಯಶಸ್ವಿಗಾಗಿ ರಚಿಸಿರುವ ವಿವಿಧ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಗೆ ಆಗಮಿಸಿದ್ದ ರಾಹುಲ್ ಗಾಂಧಿ ಆಪ್ತ ಸಹಾಯಕರ ತಂಡ ಭಾರತ್ ಜೋಡೋ ಸಿದ್ದತೆಗಳ ಬಗ್ಗೆ ಮಾಹಿತಿ ಸಂಗ್ರಹ ಮಾಡಿತು. ರಾಜ್ಯ ನಾಯಕರು ತಮಗೆ ವಹಿಸಿರುವ ಜವಾಬ್ದಾರಿಗಳ ಮಾಹಿತಿ ನೀಡಿದರು.

ರಾಹುಲ್ ಗಾಂಧಿ ರಾಷ್ಟ್ರದಾದ್ಯಂತ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ, ಕರ್ನಾಟಕದಲ್ಲಿ ಅತ್ಯಂತ ಯಶಸ್ವಿಯಾಗಿಸುವ ಜವಾಬ್ದಾರಿ ರಾಜ್ಯ ಕಾಂಗ್ರೆಸ್ ನಾಯಕರ ಮೇಲಿದೆ. ಅದರಲ್ಲೂ ಮುಖ್ಯವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಈ ಹಿನ್ನೆಲೆ ರಾಜ್ಯದ ವಿವಿಧ ಭಾಗಗಳಿಗೆ ಸಂಚರಿಸಿ ಪೂರ್ವ ಸಿದ್ಧತೆ ಸಭೆ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷರು ಪ್ರತಿ ಹಂತದಲ್ಲಿಯೂ ಕಾರ್ಯಕ್ರಮದ ಯಶಸ್ವಿಗಾಗಿ ಕಾರ್ಯತಂತ್ರ ರೂಪಿಸುತ್ತಿದ್ದಾರೆ.

bharat-jodo-yatra-pre-preparation-meeting-at-bengaluru
ಭಾರತ್ ಜೋಡೋ ಯಾತ್ರೆ: ಬೆಂಗಳೂರಿನಲ್ಲಿ ಪೂರ್ವ ಸಿದ್ಧತಾ ಸಭೆ, ರಾಹುಲ್ ಗಾಂಧಿ ಆಪ್ತ ಸಹಾಯಕರ ತಂಡ ಭಾಗಿ

ಸೆಪ್ಟೆಂಬರ್ ಅಂತ್ಯದಲ್ಲಿ ಚಾಮರಾಜನಗರ ಮೂಲಕ ಕರ್ನಾಟಕವನ್ನು ಪ್ರವೇಶಿಸಲಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ 21 ದಿನ ರಾಜ್ಯದಲ್ಲಿ ಸಂಚಾರ ನಡೆಸಲಿದೆ. ಒಟ್ಟು 500 ಕಿಮೀ ಪಾದಯಾತ್ರೆ ಮಧ್ಯ ಕರ್ನಾಟಕದಲ್ಲಿ ನಡೆಯಲಿದ್ದು, ರಾಜ್ಯ ಕಾಂಗ್ರೆಸ್ ನಾಯಕರಿಗೆ ಜಿಲ್ಲಾವಾರು ಜವಾಬ್ದಾರಿ ಸಹ ಹಂಚಿಕೆ ಮಾಡಲಾಗಿದೆ. 21 ದಿನ ಬಳಿಕ ರಾಯಚೂರು ಮೂಲಕ ಯಾತ್ರೆ ಪಕ್ಕದ ತೆಲಂಗಾಣಕ್ಕೆ ಪ್ರಯಾಣ ಬೆಳೆಸಲಿದೆ.

ಇದನ್ನೂ ಓದಿ: ಸೆ.30ರಿಂದ ರಾಜ್ಯದಲ್ಲಿ ಭಾರತ್ ಜೋಡೋ: ರಾಹುಲ್ ಗಾಂಧಿಗೆ ಸೋನಿಯಾ, ಪ್ರಿಯಾಂಕಾ ಗಾಂಧಿ ಸಾಥ್: ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.