ETV Bharat / state

ಸಿಂದಗಿ, ಹಾನಗಲ್ ಬೈ ಎಲೆಕ್ಷನ್​: ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

author img

By

Published : Oct 3, 2021, 7:31 PM IST

ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಿಸಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​ಗೂ ಸಿಂದಗಿ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ನೀಡಲಾಗಿದೆ.

bjp appointed incharges for sindagi and hanagal by election
ಚುನಾವಣಾ ಉಸ್ತುವಾರಿಗಳ ನೇಮಿಸಿದ ಬಿಜೆಪಿ

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಆಡಳಿತಾರೂಢ ಪಕ್ಷ ಬಿಜೆಪಿ ಸಚಿವರು, ಶಾಸಕರನ್ನೊಳಗೊಂಡ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿ ಚುನಾವಣಾ ಜವಾಬ್ದಾರಿಯನ್ನು ನೀಡಿದೆ. ರೆಬೆಲ್ ಶಾಸಕ ಯತ್ನಾಳ್​​ಗೂ ಸ್ಥಾನ ಕಲ್ಪಿಸಿ ಅಚ್ಚರಿ ಮೂಡಿಸಿದೆ.

bjp appointed incharges for sindagi and hanagal by election
ಚುನಾವಣಾ ಉಸ್ತುವಾರಿಗಳ ನೇಮಿಸಿದ ಬಿಜೆಪಿ

ಸಿಂದಗಿ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಗಳನ್ನಾಗಿ ಗೋವಿಂದ ಕಾರಜೋಳ, ವಿ. ಸೋಮಣ್ಣ, ಸಿ.ಸಿ. ಪಾಟೀಲ್, ಶಶಿಕಲಾ ಜೊಲ್ಲೆ, ಕೇಂದ್ರದ ಮಾಜಿ ಸಚಿವ ರಮೇಶ್ ಜಿಗಜಿಣಗಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವ ಲಕ್ಷ್ಮಣ ಸವದಿ, ಶಾಸಕರಾದ ಸೋಮನಗೌಡ ಪಾಟೀಲ್, ಎ.ಎಸ್. ಪಾಟೀಲ್ ನಡಹಳ್ಳಿ, ಪಿ. ರಾಜೀವ್, ಶ್ರೀಕಾಂತ ಕುಲಕರ್ಣಿ, ಬಾಬುರಾವ್ ಚಿಂಚನಸೂರು ಅವರನ್ನು ನೇಮಕಗೊಳಿಸಲಾಗಿದೆ.

ಹಾನಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಗಳಾಗಿ ಸಚಿವರಾದ ಮುರುಗೇಶ್ ನಿರಾಣಿ, ಜೆ.ಸಿ. ಮಾಧುಸ್ವಾಮಿ, ಬಿ.ಸಿ. ಪಾಟೀಲ್, ಶಿವರಾಮ್ ಹೆಬ್ಬಾರ್, ಸಂಸದ ಶಿವಕುಮಾರ್ ಉದಾಸಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್. ರವಿಕುಮಾರ್, ಮಹೇಶ್ ಟೆಂಗಿನಕಾಯಿ, ಶಾಸಕರಾದ ರಾಜುಗೌಡ, ನೆಹರು ಓಲೇಕಾರ್, ಎಂ. ಚಂದ್ರಪ್ಪ, ವಿರೂಪಾಕ್ಷಪ್ಪ ಬಳ್ಳಾರಿ, ಅರುಣ್ ಕುಮಾರ್ ಗುತ್ತೂರು ಅವರನ್ನು ನೇಮಕ ಮಾಡಲಾಗಿದೆ.

ಪ್ರಭಾವಿ ಸಚಿವರು, ಸ್ಥಳೀಯ ಶಾಸಕರ ಜೊತೆ ವಲಸಿಗ ಸಚಿವರಿಗೂ ಚುನಾವಣಾ ಉಸ್ತುವಾರಿ ತಂಡದಲ್ಲಿ ಜವಾಬ್ದಾರಿ ನೀಡಲಾಗಿದೆ. ಪದೇ ಪದೇ ನಾಯಕತ್ವದ ವಿರುದ್ಧ ದನಿ ಎತ್ತಿ ಸದ್ದು ಮಾಡುತ್ತಾ ಪಕ್ಷದಿಂದ ಶೋಕಾಸ್ ನೋಟಿಸ್ ಪಡೆದುಕೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​ಗೂ ಅವಕಾಶ ನೀಡಿರುವುದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ:ಹಾನಗಲ್​ನಿಂದ 2, ಸಿಂದಗಿಯಿಂದ 3 ಹೆಸರನ್ನು ಕೇಂದ್ರ ಸಮಿತಿಗೆ ಕಳುಹಿಸಲು ಬಿಜೆಪಿ ಕೋರ್ ಕಮಿಟಿ ನಿರ್ಧಾರ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.