ETV Bharat / state

ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಗಳಾಗಿ ಮನ್ಸೂಕ್ ಮಾಂಡವಿಯಾ, ಅಣ್ಣಾಮಲೈ ನೇಮಕ

author img

By

Published : Feb 4, 2023, 10:56 AM IST

Updated : Feb 4, 2023, 10:28 PM IST

ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕ ಮಾಡಿದ್ದು, ಸಹ ಉಸ್ತುವಾರಿ ಆಗಿ ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯಾ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ನೇಮಕಗೊಳಿಸಲಾಗಿದೆ.

BJP appointed to Incharge  BJP appointed to INcharge and Co INcharge  upcoming Karnataka Election 2023  ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ  ಸಹ ಉಸ್ತುವಾರಿ ನೇಮಕ  ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್  ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ  ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ  ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
ಸಹ ಉಸ್ತುವಾರಿ ನೇಮಕ

ಬೆಂಗಳೂರು: ಮೇ ತಿಂಗಳಿನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಾಲೀಮು ಆರಂಭಿಸಿರುವ ಬಿಜೆಪಿ ಹೈಕಮಾಂಡ್ ಚುನಾವಣಾ ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳ ನೇಮಕ ಮಾಡಿದೆ. ಈ ಮೂಲಕ ಚುನಾವಣಾ ಪ್ರಚಾರ ಕಾರ್ಯಕ್ಕೆ ಅಧಿಕೃತ ಚಾಲನೆ ಸಿಕ್ಕಂತದಾಗಿದೆ. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕ ಮಾಡಿದ್ದು, ಸಹ ಉಸ್ತುವಾರಿಗಳಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯಾ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ನೇಮಕಗೊಳಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ‌ ನಡ್ಡಾ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ರಾಜ್ಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿ ರಾಜ್ಯ ರಾಜಕಾರಣದ ಮೇಲೆ ಹಿಡಿತ ಹೊಂದಿರುವ ಧರ್ಮೇಂದ್ರ ಪ್ರಧಾನ್, ರಾಜ್ಯದ ನಾಯಕರು, ಸಂಘಟನೆ, ರಾಜ್ಯದ ರಾಜಕೀಯ ಚಿತ್ರಣದ ಬಗ್ಗೆ ಹೆಚ್ಚಿನ ಮಾಹಿತಿ ಹೊಂದಿದ್ದಾರೆ. ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿರುವ ಹೈಕಮಾಂಡ್ ಪ್ರಧಾನ್​ಗೆ ಚುನಾವಣಾ ಪ್ರಭಾರಿ ಸ್ಥಾನ ನೀಡಿದೆ. ಆರೋಗ್ಯ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿ ಕೋವಿಡ್ ಸಮಯದಲ್ಲಿ ಉತ್ತಮ ಸಾಧನೆ ತೋರಿ ರಾಜ್ಯದ ಕೋವಿಡ್ ನಿರ್ವಹಣೆಗೆ ಸಹಕಾರ ನೀಡಿದ್ದ ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯಾ ಅವರನ್ನು ಸಹ ಪ್ರಭಾರಿಯನ್ನಾಗಿ ನೇಮಿಸಿದೆ. ಇವರ ಜೊತೆ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕರ್ನಾಟಕದಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಗಮನ ಸೆಳೆದಿದ್ದು, ತಮ್ಮದೇ ಆದ ಫ್ಯಾನ್ ಫಾಲೋಯಿಂಗ್ ಹೊಂದಿದ್ದಾರೆ. ಅಲ್ಲದೆ ತಮಿಳು ಭಾಷಿಕರ ಸೆಳೆಯಲು ಪೂರಕವಾಗಿ ಅಣ್ಣಾಮಲೈಗೆ ಸಹ ಪ್ರಭಾರಿ ಸ್ಥಾನ ನೀಡಲಾಗಿದೆ ಎನ್ನಲಾಗಿದೆ.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರು ರಾಜ್ಯ ಪ್ರವಾಸಕ್ಕೆ ಆಗಮಿಸುತ್ತಿದ್ದು ಚುನಾವಣಾ ಪ್ರಚಾರ ಕಾರ್ಯಕ್ಕೆ ಮೊದಲ ಹಂತದ ಚಾಲನೆ ನೀಡಿದ್ದಾರೆ. ಇದೀಗ ಚುನಾವಣೆಗೆ ಪ್ರಭಾರಿ, ಸಹಪ್ರಭಾರಿ ನೇಮಕಗೊಳಿಸಿ ಅಧಿಕೃತವಾಗಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡುತ್ತಿದೆ. ಅಭ್ಯರ್ಥಿಗಳ ಆಯ್ಕೆ, ವೀಕ್ಷಕರ ನೇಮಕ, ಕ್ಷೇತ್ರವಾರು ಅಭಿಪ್ರಾಯ ಸಂಗ್ರಹ ಸೇರಿದಂತೆ ಚುನಾವಣಾ ಪ್ರಕ್ರಿಯೆ ಸಂಬಂಧ ನಡೆಯುವ ಪ್ರಚಾರ ಕಾರ್ಯ ಸೇರಿ ಎಲ್ಲ ವಿಚಾರಗಳ ಬಗ್ಗೆ ಇನ್ಮುಂದೆ ಚುನಾವಣಾ ಉಸ್ತುವಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ.

ನಾಲ್ಕು ಸ್ತರದ ಪ್ರಕ್ರಿಯೆ: ರಾಜ್ಯ ವಿಧಾನಸಭಾ ಚುನಾವಣಾ ಅಖಾಡಕ್ಕೆ ಭರ್ಜರಿ ತಾಲೀಮು ಆರಂಭಿಸಿರುವ ರಾಜ್ಯ ಬಿಜೆಪಿ ನಾಯಕರು ಟಿಕೆಟ್ ಹಂಚಿಕೆ ವಿಚಾರದಲ್ಲಿ ನಾಲ್ಕು ಸ್ತರದ ಆಯ್ಕೆ ಪ್ರಕ್ರಿಯೆಗೆ ಮುಂದಾಗಿದ್ದಾರೆ. ಈ ಕುರಿತು ರಾಜ್ಯದ ಕೋರ್ ಕಮಿಟಿ ಮಹತ್ವದ ನಿರ್ಧಾರ ಕೈಗೊಂಡಿದೆ. ಅಲ್ಲದೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸುವ ನಿರ್ಧಾರ ಕೈಗೊಂಡಿದೆ.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಷಯದ ಮಾನದಂಡದ ಪ್ರಸ್ತಾಪವಾಯಿತು. ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆದಿದೆ. ಅಂತಿಮವಾಗಿ ಅಭ್ಯರ್ಥಿಗಳ ಆಯ್ಕೆಗೆ ನಾಲ್ಕು ಸ್ತರದ ಪ್ರಕ್ರಿಯೆ ನಿಗದಿಪಡಿಸಲಾಯಿತು.

ತಾಲೂಕು ಘಟಕದಿಂದ ಜಿಲ್ಲಾ ಘಟಕಕ್ಕೆ ಸಂಭಾವ್ಯರ ಹೆಸರು ಕಳುಹಿಸಬೇಕು. ಕನಿಷ್ಠ ಮೂರು ಹೆಸರು ಇರುವಂತೆ ಸಂಭಾವ್ಯರ ಹೆಸರು ಕಳುಹಿಸಬೇಕು. ಶಾಸಕರು ಇರುವ ಕ್ಷೇತ್ರಗಳಲ್ಲಿಯೂ ಕೂಡಾ ಶಾಸಕರ ಹೆಸರು ಸೇರಿದಂತೆ ಸಂಭಾವ್ಯರ ಮೂರು ಹೆಸರನ್ನು ಜಿಲ್ಲಾ ಘಟಕದಿಂದ ರಾಜ್ಯ ಘಟಕಕ್ಕೆ ಕಳುಹಿಸಬೇಕು. ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಈ ಪಟ್ಟಿಗಳನ್ನು ಚರ್ಚಿಸಿ ಪರಿಶೀಲಿಸಿ ಬಳಿಕ ಕೇಂದ್ರೀಯ ಚುನಾವಣಾ ಸಮಿತಿಗೆ ಕಳುಹಿಸಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಗಿದೆ.

ಓದಿ: ಸತತ ಮೂರನೇ ಬಾರಿ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

Last Updated : Feb 4, 2023, 10:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.