ETV Bharat / state

ಟಿಪ್ಪು ಜಯಂತಿಗೆ ಕಳೆದ ಬಾರಿಗಿಂತ ಹೆಚ್ಚು ಖರ್ಚು ಮಾಡುತ್ತೇವೆ: ಜಮೀರ್ ಟಾಂಗ್

author img

By

Published : Jul 30, 2019, 6:50 PM IST

ಟಿಪ್ಪು ಜಯಂತಿಯನ್ನು ರದ್ದುಗೊಳಿಸುವಂತೆ ಶಾಸಕ ಕೆ.ಜಿ.ಬೋಪಯ್ಯ ಪತ್ರ ಬರೆದಿದ್ದ ಪತ್ರಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಜಯಂತಿ ರದ್ದುಗೊಳಿಸಿ ಆದೇಶ ಹೊರಡಿಸಿದರು. ಬಿಜೆಪಿ ಸರ್ಕಾರ ತೆಗೆದುಕೊಂಡ ನಿರ್ಧಾರದ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

Congress expressing outrage

ಬೆಂಗಳೂರು: ಹಿಂದಿನ ಕಾಂಗ್ರೆಸ್​ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಿ ಇಂದು ಆದೇಶ ಹೊರಡಿಸಿರುವ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಲ್ಪಸಂಖ್ಯಾತರ ಮೇಲಿನ ದ್ವೇಷ: ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಟಿಪ್ಪು ಜಯಂತಿ ಆಚರಣೆ ಮಾಡುವುದನ್ನು ಬಿಜೆಪಿ ರದ್ದು ಮಾಡಿರುವುದು ಅಪರಾಧ. ಅಲ್ಪಸಂಖ್ಯಾತರು ಮಾತ್ರವಲ್ಲ, ಅಂದಿನ ಮೈಸೂರು ರಾಜ್ಯದಲ್ಲಿ ರಾಜರಾಗಿದ್ದವರು. ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ವೀರ ಮೈಸೂರು ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕೆಎಸ್ಆರ್​​ಗೆ ಫೌಂಡೇಷನ್ ಹಾಕಿದವರೂ ಅವರೇ. ಅಂತಹವರ ಜಯಂತಿ ಆಚರಿಸಲು ತೀರ್ಮಾನಿಸಿದ್ದೆವು. ಬಿಜೆಪಿಯವರು ದುರುದ್ದೇಶ ಮತ್ತು ಅಲ್ಪಸಂಖ್ಯಾತರ ಮೇಲಿನ ದ್ವೇಷದಿಂದ ಈ ರೀತಿ ಮಾಡಿದ್ದಾರೆ. ಅದಕ್ಕೆ ವಿರೋಧಿಸುತ್ತೇನೆ ಎಂದು ಖಾರವಾಗಿ ಹೇಳಿದ್ದಾರೆ.

BJP orders cancellation of Tipu Jayanthi
ಸರ್ಕಾರ ಆದೇಶ ಹೊರಡಿಸಿದ ಪತ್ರ

ಇದಕ್ಕೆ ರೋಷನ್ ಬೇಗ್​ ಉತ್ತರಿಸಬೇಕು: ಶಾಸಕ ಜಮೀರ್ ಅಹಮದ್ ಮಾತನಾಡಿ, ಟಿಪ್ಪು ಜಯಂತಿ ನಿಷೇಧಿಸಿದ ಕುರಿತು ಶಾಸಕ ರೋಷನ್ ಬೇಗ್ ಉತ್ತರಿಸಬೇಕು. ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರೋಕೆ ಹೋಗಿ ಅವರ ಬಾಗಿಲಲ್ಲಿ ನಿಂತಿದ್ದಾರೆ. ಈಗ ರೋಷನ್ ಬೇಗ್ ಮಾತಾಡಲೇಬೇಕು. ಬಿಜೆಪಿ ಸರ್ಕಾರ ಬಂದ್ರೆ ನಿಷೇಧ ಮಾಡ್ತಾರೆ ಅಂತಾ ಗೊತ್ತಿತ್ತು. ಆದರೆ ಇಷ್ಟು ಬೇಗ ನಿಷೇಧ ಮಾಡ್ತಾರೆ ಅಂತಾ ಗೊತ್ತಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಟಿಪ್ಪು ಜಯಂತಿ ರದ್ದುಪಡಿಸಿದರ ಕುರಿತು ಕಾಂಗ್ರೆಸ್​ ನಾಯಕರ ಅಭಿಪ್ರಾಯ

ಕ್ಯಾಬಿನೆಟ್​ನಲ್ಲಿ ಯಾವುದೇ ಚರ್ಚೆ ಮಾಡದೇ ನಿರ್ಧಾರ ಕೈಗೊಂಡಿದ್ದಾರೆ. ನಾಳೆ ಐಎಂಎ ವಿಚಾರಣೆಗೆ ಕರೆದಿದ್ದಾರೆ. ಧೈರ್ಯದಿಂದ ಹೋಗ್ತಿನಿ. ಹಾಗೆ ಟಿಪ್ಪು ಜಯಂತಿ ಅತ್ಯಂತ ವಿಜೃಂಭಣೆಯಿಂದ ಸಂಭ್ರಮಾಚರಣೆ ಮಾಡುತ್ತೇವೆ. ಕಳೆದ ಬಾರಿಗಿಂತಲು ಜಾಸ್ತಿ ಖರ್ಚು ಮಾಡುತ್ತೇವೆ ಎಂದು ಜಮೀರ್ ಟಾಂಗ್ ಕೊಟ್ಟಿದ್ದಾರೆ.

ಬಿಜೆಪಿ ಕೋಮುವಾದ ಪಕ್ಷ. ರಾಜಕೀಯ ಲಾಭಕ್ಕೆ ಈ ರೀತಿ ಮಾಡುತ್ತಿದೆ. ಧರ್ಮವನ್ನು ಸ್ವಾರ್ಥಕ್ಕೆ ಉಪಯೋಗಿಸುತ್ತಿದ್ದಾರೆ. ಇದೇನು ಆಶ್ಚರ್ಯ ಅಲ್ಲ. ಮೊದಲಿಂದಲೇ ಗೊತ್ತಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಕಿಡಿಕಾರಿದ್ದಾರೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಟಿಪ್ಪು ಜಯಂತಿ ರದ್ದುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಪತ್ರಕ್ಕೆ ಸ್ಪಂದಿಸಿರುವ ಸಿಎಂ ಯಡಿಯೂರಪ್ಪ ಅವರು ರದ್ದುಗೊಳಿಸಿ ಆದೇಶ ಹೊರಡಿಸಿದರು.

Intro:Body:

2 tippu jayanti reaction.txt   



close


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.