ETV Bharat / state

ಮಿಣಿ ಮಿಣಿ  ಇಟ್ಟುಕೊಂಡು ಬಿಜೆಪಿ ಹೇಡಿಗಳ ಕೆಲಸ ಮಾಡುತ್ತಿದೆ: ಕುಮಾರಸ್ವಾಮಿ ವಾಗ್ದಾಳಿ

author img

By

Published : Jan 28, 2020, 5:55 PM IST

ಮಂಗಳೂರು ಬಾಂಬ್​ ಪ್ರಕರಣದಲ್ಲಿ ಕುಮಾರಸ್ವಾಮಿ ಮಿಣಿ ಮಿಣಿ ಪೌಡರ್​​ ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಅದು ವೈರಲ್​ ಆಗಿತ್ತು. ಇನ್ನು ಈ ಬಗ್ಗೆ ಹೆಚ್​​ಡಿಕೆ ಕಿಡಿ ಕಾರಿದ್ದು, ಇದನ್ನು ಇಟ್ಟುಕೊಂಡು ಬಿಜೆಪಿ ಹೇಡಿಗಳ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

Kumaraswamy
ಕುಮಾರಸ್ವಾಮಿ

ಬೆಂಗಳೂರು: ದೇಶದಲ್ಲಿ ಇಂದು ನಡೆಯುತ್ತಿರುವುದು ಕುಟಿಲ ರಾಜಕಾರಣ. ಅದರ ಭಾಗವೇ ಕೊಂಕು ಟ್ರೋಲ್​ಗಳು. ಒಬ್ಬ ನಾಯಕನ ವಿರುದ್ಧ ಎದುರು ನಿಂತು ಹೋರಾಡಲಾಗದ ಹೇಡಿಗಳು ಗೇಲಿ, ಅಪಹಾಸ್ಯ ತಂತ್ರದ ಮೂಲಕ ನಾಯಕನ‌ ಹನನಕ್ಕೆ ನಿಲ್ಲುತ್ತಾರೆ. ಮಿಣಿ ಮಿಣಿ ಎಂಬ ಶಬ್ಧ ಇಟ್ಟುಕೊಂಡು ಬಿಜೆಪಿ‌ ಮಾಡುತ್ತಿರುವುದು ಅದೇ ಹೇಡಿಗಳ ಕೆಲಸ‌ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

  • ದೇಶದಲ್ಲಿ ಇಂದು ನಡೆಯುತ್ತಿರುವುದು ಕುಟಿಲ ರಾಜಕಾರಣ. ಅದರ ಭಾಗವೇ ಕೊಂಕು, ಟ್ರೋಲ್ಗಳು. ಒಬ್ಬ ನಾಯಕನ ವಿರುದ್ಧ ಎದುರು ನಿಂತು ಹೋರಾಡಲಾಗದ ಹೇಡಿಗಳು ಗೇಲಿ, ಅಪಹಾಸ್ಯದ ತಂತ್ರದ ಮೂಲಕ ನಾಯಕನ‌ ಹನನಕ್ಕೆ ನಿಲ್ಲುತ್ತಾರೆ. ಮಿಣಿ ಮಿಣಿ ಎಂಬ ಶಬ್ಧ ಇಟ್ಟುಕೊಂಡು ಬಿಜೆಪಿ‌ ಮಾಡುತ್ತಿರುವುದು ಅದೇ ಹೇಡಿಗಳ ಕೆಲಸ‌.
    1/4

    — H D Kumaraswamy (@hd_kumaraswamy) January 28, 2020 " class="align-text-top noRightClick twitterSection" data=" ">
  • ನಾನು ಹಿಂದೆಯೇ ಹೇಳಿದಂತೆ, ಪಾಕಿಸ್ತಾನ, ನಾಜಿ ಜೀನ್ ಹೊಂದಿರುವ ಬಿಜೆಪಿಗೆ ಕನ್ನಡದ ಮೂಲ ನಿವಾಸಿ ಸಮುದಾಯದ ನಾಯಕರನ್ನು ಕಂಡರೆ ಉರಿ. ಅದಕ್ಕೇ ಈ ಮಣ್ಣಿನ ಮೂಲ ನಿವಾಸಿ ಸಮುದಾಯದ ಪ್ರತಿನಿಧಿಯಾದ ನನ್ನನ್ನು ಹಣಿಯಲು ಪ್ರಯತ್ನಿಸುತ್ತಿದೆ. ಎದುರಲ್ಲಿ‌ ನಿಂತು ಹೋರಾಡಲಾಗದೇ ಗೇಲಿ ಮೂಲಕ ಹಣಿಯಲು ನಿಂತಿದೆ ಬಿಜೆಪಿ.
    2/4

    — H D Kumaraswamy (@hd_kumaraswamy) January 28, 2020 " class="align-text-top noRightClick twitterSection" data=" ">

ಈ ಕುರಿತು ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಕುಮಾರಸ್ವಾಮಿ, ನಾನು ಹಿಂದೆಯೇ ಹೇಳಿದಂತೆ, ಪಾಕಿಸ್ತಾನ, ನಾಜಿ ಜೀನ್ ಹೊಂದಿರುವ ಬಿಜೆಪಿಗೆ ಕನ್ನಡದ ಮೂಲ ನಿವಾಸಿ ಸಮುದಾಯದ ನಾಯಕರನ್ನು ಕಂಡರೆ ಉರಿ. ಅದಕ್ಕೆ ಈ ಮಣ್ಣಿನ ಮೂಲ ನಿವಾಸಿ ಸಮುದಾಯದ ಪ್ರತಿನಿಧಿಯಾದ ನನ್ನನ್ನು ಹೆಣೆಯಲು ಪ್ರಯತ್ನಿಸುತ್ತಿದೆ. ಎದುರಲ್ಲಿ‌ ನಿಂತು ಹೋರಾಡಲಾಗದೇ ಗೇಲಿ ಮೂಲಕ ಹೆಣೆಯಲು ನಿಂತಿದೆ ಬಿಜೆಪಿ ಎಂದು ಕಿಡಿಕಾರಿದ್ದಾರೆ.

  • ನಾನು ಸುಳ್ಳಾಡಿಲ್ಲ, ನಿಂದನಾತ್ಮಕ ಪದ ಬಳಸಿಲ್ಲ‌. ಪತ್ರಿಕೆಯೊಂದರ ವರದಿ ಓದಿ ಸತ್ಯ ಮಾತಾಡಿದ್ದೇನೆ. ಆದಿತ್ಯ 'ರಾವ್' ಎಂಬ ಉಗ್ರನ ರಕ್ಷಣೆಗೆ ನಿಂತಿರುವ ಬಿಜೆಪಿ ನನ್ನ ಸತ್ಯದ ಮಾತನ್ನೇ ಗೇಲಿ‌ ಮಾಡುತ್ತಿದೆ. ಬಿಜೆಪಿ ಸತ್ಯ, ಧರ್ಮಗಳ ವಿರೋಧಿ.
    3/4

    — H D Kumaraswamy (@hd_kumaraswamy) January 28, 2020 " class="align-text-top noRightClick twitterSection" data=" ">
  • ಗ್ರಾಮೀಣ ಕನ್ನಡದಲ್ಲಿ ಹೊಳೆಯುವ ಪದಾರ್ಥಕ್ಕೆ ಮಿಣಿಮಿಣಿ ಎನ್ನಲಾಗುತ್ತದೆ. ಅದು ಶುದ್ಧ ಕನ್ನಡ, ಗ್ರಾಮೀಣ ಪದ. ಅದನ್ನೇ ಅಪಮಾನಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದರೆ ಅದು ಕನ್ನಡಕ್ಕೆ, ಗ್ರಾಮೀಣ ಕರ್ನಾಟಕಕ್ಕೆ ಮಾಡಿದ ಅಪಮಾನ. ಎಷ್ಟೇ ಆಗಲಿ ಬಿಜೆಪಿಗರ ಜೀನ್ ಪಾಕಿಸ್ತಾನದ್ದಲ್ಲವೇ. ಅದಕ್ಕೇ ಅವರಿಗೆ ಕನ್ನಡದ ಪದಗಳು ತಾತ್ಸಾರ.
    4/4

    — H D Kumaraswamy (@hd_kumaraswamy) January 28, 2020 " class="align-text-top noRightClick twitterSection" data=" ">

ನಾನು ಸುಳ್ಳಾಡಿಲ್ಲ, ನಿಂದನಾತ್ಮಕ ಪದ ಬಳಸಿಲ್ಲ. ಪತ್ರಿಕೆಯೊಂದರ ವರದಿ ಓದಿ ಸತ್ಯ ಮಾತಾಡಿದ್ದೇನೆ. ಆದಿತ್ಯ 'ರಾವ್' ಎಂಬ ಉಗ್ರನ ರಕ್ಷಣೆಗೆ ನಿಂತಿರುವ ಬಿಜೆಪಿ ನನ್ನ ಸತ್ಯದ ಮಾತನ್ನೇ ಗೇಲಿ‌ ಮಾಡುತ್ತಿದೆ. ಬಿಜೆಪಿ ಸತ್ಯ, ಧರ್ಮಗಳ ವಿರೋಧಿ ಎಂದು ಟೀಕಿಸಿದ್ದಾರೆ. ಗ್ರಾಮೀಣ ಕನ್ನಡದಲ್ಲಿ ಹೊಳೆಯುವ ಪದಾರ್ಥಕ್ಕೆ ಮಿಣಿಮಿಣಿ ಎನ್ನಲಾಗುತ್ತದೆ. ಅದು ಶುದ್ಧ ಕನ್ನಡ, ಗ್ರಾಮೀಣ ಪದ. ಅದನ್ನೇ ಅಪಮಾನಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದರೆ ಅದು ಕನ್ನಡಕ್ಕೆ, ಗ್ರಾಮೀಣ ಕರ್ನಾಟಕಕ್ಕೆ ಮಾಡಿದ ಅಪಮಾನ.

ಎಷ್ಟೇ ಆಗಲಿ ಬಿಜೆಪಿಗರ ಜೀನ್ ಪಾಕಿಸ್ತಾನದ್ದಲ್ಲವೇ. ಅದಕ್ಕೇ ಅವರಿಗೆ ಕನ್ನಡದ ಪದಗಳು ತಾತ್ಸಾರ ಎಂದು ಕಿಡಿಕಾರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.