ETV Bharat / state

ನಮ್ಮ ಪಕ್ಷದಲ್ಲಿ ಪ್ರಾಥಮಿಕ ತನಿಖಾ ವರದಿ ಬರುವವರೆಗೂ ಉಚ್ಛಾಟನೆ ಮಾಡುವ ವ್ಯವಸ್ಥೆ ಇಲ್ಲ: ಸಿ.ಟಿ.ರವಿ

author img

By

Published : Mar 7, 2023, 8:39 PM IST

bjp-leader-ct-spoke-about-madal-virupakshappa
ನಮ್ಮ ಪಕ್ಷದಲ್ಲಿ ಪ್ರಾಥಮಿಕ ತನಿಖಾ ವರದಿ ಬರುವವರೆಗೂ ಉಚ್ಛಾಟನೆ ಮಾಡುವ ವ್ಯವಸ್ಥೆ ಇಲ್ಲ: ಸಿ.ಟಿ.ರವಿ

ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಪ್ರಕರಣದ ಕುರಿತು ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯಿಸಿದ್ದಾರೆ. ಪ್ರಾಥಮಿಕ ತನಿಖಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ನಮ್ಮ ಪಕ್ಷದಲ್ಲಿ ಪ್ರಾಥಮಿಕ ತನಿಖಾ ವರದಿ ಬರುವವರೆಗೂ ಉಚ್ಛಾಟನೆ ಮಾಡುವ ವ್ಯವಸ್ಥೆ ಇಲ್ಲ: ಸಿ.ಟಿ.ರವಿ

ಬೆಂಗಳೂರು : ನಮ್ಮ ಪಕ್ಷದಲ್ಲಿ ಪ್ರಾಥಮಿಕ ತನಿಖಾ ವರದಿ ಬರುವವರೆಗೂ ಉಚ್ಛಾಟನೆ ಮಾಡುವ ವ್ಯವಸ್ಥೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ. ಬಿಟಿಎಂ ಬಡಾವಣೆಯಲ್ಲಿ ನಡೆದ ವಿಜಯಸಂಕಲ್ಪ ರಥಯಾತ್ರೆ ವೇಳೆ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪಕ್ಷದಿಂದ ಉಚ್ಛಾಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಕ್ಷಣದವರೆಗೂ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿಲ್ಲ. ಇಡೀ ದೇಶದಲ್ಲಿ ಎಲ್ಲೂ ಕೂಡಾ ಇಂತಹ ವ್ಯವಸ್ಥೆ ಇಲ್ಲ. ಪ್ರಾಥಮಿಕ ತನಿಖಾ ವರದಿ ಬಂದ ಬಳಿಕವೇ ಪಕ್ಷ ಕ್ರಮ ಕೈಗೊಳ್ಳುತ್ತದೆ. ಉಚ್ಛಾಟನೆ ಮಾಡಿದ್ದಾರೆ ಎಂಬ ಬಗ್ಗೆ ಈವರೆಗೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.

ಚನ್ನಗಿರಿ ಕ್ಷೇತ್ರದಲ್ಲಿ ಮೆರವಣಿಗೆ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಡಿ.ಕೆ. ಶಿವಕುಮಾರ್ ದೆಹಲಿಯಿಂದ ಬಂದಾಗ ಮೆರವಣಿಗೆ ಮಾಡಿದ್ದು ಅವರಿಗೆ ಮಾದರಿ ಎನ್ನಿಸಿರಬಹುದು. ಆದರೆ, ಅವರು ಅದನ್ನು ಮಾದರಿಯಾಗಿ ತೆಗೆದುಕೊಳ್ಳಬೇಕಿಲ್ಲ. ನಮ್ಮ ಪಕ್ಷದ ನಾಯಕರ ನಿಲುವನ್ನು ಅನುಸರಿಸಿದರೆ ಸಾಕು ಎಂದು ಹೇಳಿದರು.

ಮಾಡಾಳ್ ಕೋರ್ಟ್ ಸೂಚನೆ ಪಾಲಿಸಲಿ: ವಿಜಯಸಂಕಲ್ಪ ರಥಯಾತ್ರೆ ವೇಳೆ ಮಾತನಾಡಿದ ಸಚಿವ ಆರ್.ಅಶೋಕ್, ಮಾಡಾಳ್ ಗೆ ಮಧ್ಯಂತರ ಜಾಮೀನು ವಿಚಾರವಾಗಿ ಪ್ರತಿಕ್ರಿಯಿಸಿದರು. ಕಾನೂನಿನಲ್ಲಿ ಎಲ್ಲರೂ ಸಮಾನರು. ಯಾರೇ ಆದರೂ ಕಾನೂನನ್ನು ಪಾಲಿಸಲೇಬೇಕು‌. ಅವರು ಕೂಡಲೇ ತನಿಖಾಧಿಕಾರಿ ಎದುರು ಹಾಜರಾಗಿ ವಿಚಾರಣೆ ಎದುರಿಸಲಿ. ಅವರ ಪ್ರಕರಣದಲ್ಲಿ ಸರ್ಕಾರದ ಪಾತ್ರ ಇಲ್ಲ. ಮಾಡಾಳ್ ಅವರು ಕೋರ್ಟ್ ಸೂಚನೆ ಪಾಲಿಸಲಿ ಎಂದರು.

ಮೊದಲು ತನಿಖಾಧಿಕಾರಿ ಎದುರು ಹಾಜರಾಗಿ ಅವರ ಅಹವಾಲು ಹೇಳಲಿ. ತಪ್ಪು ಯಾರೇ ಮಾಡಿದ್ರೂ ಶಿಕ್ಷೆ ಆಗಬೇಕು‌. ಕೋರ್ಟ್ ಯಾವ ಸೂಚನೆ ಕೊಡುತ್ತೋ ಅದನ್ನು ಸರ್ಕಾರ ಪಾಲಿಸಲಿದೆ. ಮಾಡಾಳ್ ವಿರುದ್ಧ ಪಕ್ಷದಿಂದ ಶಿಸ್ತುಕ್ರಮ ಆಗದ ವಿಚಾರವಾಗಿ ಮಾತನಾಡಿ, ಇದರ ಬಗ್ಗೆ ವರಿಷ್ಠರಿಗೆ ಮಾಹಿತಿ ಕೊಡಲಾಗಿದೆ. ಶಿಸ್ತುಕ್ರಮ ವಿಚಾರ ಕೇಂದ್ರದ ಗಮನದಲ್ಲಿದೆ ಎಂದು ತಿಳಿಸಿದರು.

ಸ್ವಕ್ಷೇತ್ರಕ್ಕೆ ಆಗಮಿಸಿದ ವಿರೂಪಾಕ್ಷಪ್ಪ : ಮಧ್ಯಂತರ ಜಾಮೀನು ಸಿಕ್ಕಿರುವ ಹಿನ್ನೆಲೆ ನಾಪತ್ತೆಯಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಇಂದು ತಮ್ಮ ಸ್ವಕ್ಷೇತ್ರ ಚನ್ನಗಿರಿ ಆಗಮಿಸಿದ್ದಾರೆ. ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಬೆಂಬಲಿಗರು ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಚನ್ನೇಶಪುರ ಗ್ರಾಮದಲ್ಲಿನ ಚನ್ನಕೇಶವ ದೇವಾಲಯಕ್ಕೆ ತೆರಳಿದ ಅವರು ಅಲ್ಲಿ ಪೂಜೆ ಸಲ್ಲಿಸಿದರು.

ಕಳೆದ ಗುರುವಾರ ನಡೆದ ಲೋಕಾಯುಕ್ತ ದಾಳಿ ಬಳಿಕ ಶಾಸಕ ಮಾಡಾಳ್ ಎಲ್ಲೂ ಕಾಣಿಸಕೊಂಡಿರಲಿಲ್ಲ. ಇನ್ನು ಮಾಡಾಳ್ ವಿರೂಪಾಕ್ಷಪ್ಪ ಕೆಎಸ್‌ಡಿಎಲ್‌ನ ಅಧ್ಯಕ್ಷರಾಗಿದ್ದರು. ಇದಕ್ಕೆ ಕಚ್ಚಾವಸ್ತು ಪೂರೈಕೆಗಾಗಿ ಗುತ್ತಿಗೆದಾರರಿಗೆ 80 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಶಾಸಕರ ಮೇಲೆ ಇತ್ತು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಲೋಕಾಯುಕ್ತ ಪೊಲೀಸರು ಶಾಸಕರ ಪುತ್ರ ಮಾಡಾಳ್ ಪ್ರಶಾಂತ್ 40 ಲಕ್ಷ ರೂಪಾಯಿ ಲಂಚ ಪಡೆಯುವ ವೇಳೆ ದಾಳಿ ನಡೆಸಿ ಬಂಧಿಸಿದ್ದರು. ಬಳಿಕ ಕೋರ್ಟ್​, ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಸದ್ಯ ಶಾಸಕ ಮಾಡಾಳ್ ಅವರಿಗೆ ಹೈಕೋರ್ಟ್ ವಿಚಾರಣೆ ನಡೆಸಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ : ಸ್ವಕ್ಷೇತ್ರದಲ್ಲಿ ಮಾಡಾಳ್ ವಿರೂಪಾಕ್ಷಪ್ಪಗೆ ಅದ್ಧೂರಿ ಸ್ವಾಗತ: ದೋಷ ಮುಕ್ತನಾಗುವೆ ಎಂದು ಕಣ್ಣೀರು ಹಾಕಿದ ಶಾಸಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.