ETV Bharat / state

'ಎಐಸಿಸಿ ಅಧ್ಯಕ್ಷ ಸ್ಥಾನದ ಕಗ್ಗಂಟು ಬಗೆಹರಿಸದವರು ಸಿದ್ದು-ಡಿಕೆಶಿ ನಡುವಿನ ಸಿಎಂ ಗಾದಿ ಕಾದಾಟ ಪರಿಹರಿಸ್ತಾರಾ?'

author img

By

Published : Jun 28, 2022, 6:36 PM IST

ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ‌.

BJP Tweet against congress
ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್

ಬೆಂಗಳೂರು: ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಕಗ್ಗಂಟನ್ನು ಬಗೆಹರಿಸಲಾಗದವರು ರಾಜ್ಯದ ಮುಖ್ಯಮಂತ್ರಿ ಕುರ್ಚಿಯ ಕಾದಾಟವನ್ನು ಬಗೆಹರಿಸುವರೇ? ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ‌. ಕಾಂಗ್ರೆಸ್ ನಾಯಕರ ವಿರುದ್ಧ ಸರಣಿ ಟ್ವೀಟ್ ಮಾಡಿ ಟೀಕಿಸಿರುವ ಬಿಜೆಪಿ, ಜಗತ್ತಿನ ಕಣ್ಣಿಗೆ ಮಣ್ಣೆರೆಚಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಒಂದೇ ಕಾರಿನಲ್ಲಿ ಬರುವುದೇನು, ಜೊತೆಯಾಗಿ ಎತ್ತಿನ ಗಾಡಿ ಓಡಿಸುವುದೇನು, ಚಿಂತನ ಶಿಬಿರದಲ್ಲಿ ಫೋಟೋಗೆ ಪೋಸ್‌ ಕೊಟ್ಟಿದ್ದೇನು! ಮುಖವಾಡ ಕಳಚುತ್ತಿದೆ, ಸೃಷ್ಟಿಯಾದ ಕಂದಕ ಲೋಕಕ್ಕೆ ಸಾರಿ ಸಾರಿ ಹೇಳುತ್ತಿದೆ, ಇದು #SidduVsDKS ಕದನವೆಂದು. ಕಾಂಗ್ರೆಸ್ ಈಗ ಬೂದಿ ಮುಚ್ಚಿದ ಕೆಂಡ! ಎಂದು ಟೀಕಿಸಿದೆ.

  • ಕೈ ನಾಯಕರು ಪದೇ ಪದೇ ದೆಹಲಿಯ 10 ಜನ್‌ಪಥ್‌ ದರ್ಶನ ಮಾಡುತ್ತಿದ್ದಾರೆ.

    ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಹತ್ತಿಕೊಂಡ ಕಿಡಿಯನ್ನು ನಕಲಿ ಗಾಂಧಿ ಕುಟುಂಬಕ್ಕೂ ಬಗೆಹರಿಸಲು ಸಾಧ್ಯವಾಗುತ್ತಿಲ್ಲ.

    ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಕಗ್ಗಂಟನ್ನು ಬಗೆ ಹರಿಸಲಾಗದವರು ರಾಜ್ಯದ ಸಿಎಂ ಕುರ್ಚಿಯ ಕಾದಾಟವನ್ನು ಬಗೆಹರಿಸುವರೇ?#SidduVsDKS

    — BJP Karnataka (@BJP4Karnataka) June 28, 2022 " class="align-text-top noRightClick twitterSection" data=" ">

ಸಿದ್ದುಗೆ ಏಕಾಂಗಿತನ ಕಾಡುತ್ತಿದೆ: ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಪಕ್ಷದಲ್ಲಿ ಏಕಾಂಗಿತನ ಕಾಡುತ್ತಿದೆ. ಕಾಂಗ್ರೆಸ್ಸಿನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ. ಡಿ.ಕೆ ಶಿವಕುಮಾರ್ ಅವರಿಂದ ಸಿಎಂ ಸ್ಥಾನಕ್ಕೆ ಪ್ರಬಲ ಲಾಬಿ ಎದುರಾಗುತ್ತಿದೆ. ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವಿನ ಕಲಹ ಈಗ ಬೇರೆ ಹಂತ ತಲುಪುತ್ತಿದೆ, ಸಿದ್ದರಾಮಯ್ಯ ವಿರೋಧಿ ಪಾಳಯ ಜಾಗೃತಗೊಂಡಿದೆ. ಕಾಂಗ್ರೆಸ್ ಪಕ್ಷದಲ್ಲಿ ಡಿಕೆಶಿ ವರ್ಚಸ್ಸು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಡಿಕೆಶಿ ವರ್ಚಸ್ಸಿನ ಪ್ರಭಾ ವಲಯವನ್ನು ತಗ್ಗಿಸಲು ಸಿದ್ದರಾಮಯ್ಯ ಹೆಣಗಾಡುತ್ತಿದ್ದಾರೆ. ಇದಕ್ಕಾಗಿ ಶಕ್ತಿ ಪ್ರದರ್ಶನ ಸಮಾರಂಭದ ಸಿದ್ಧತೆ ಆರಂಭವಾಗಿದೆ. ಅಭಿಮಾನಿ ಬಳಗದ ಈ ಸಮಾರಂಭ ಯಾರಿಗೆ ಠಕ್ಕರ್‌ ನೀಡಲು ಆಯೋಜಿಸಲಾಗಿದೆ? ಎಂದು ಬಿಜೆಪಿ ಪ್ರಶ್ನಿಸಿದೆ.

ಇದನ್ನೂ ಓದಿ: ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರ್ಕಾರಕ್ಕೆ ದರ ಏರಿಸುವ ನೈತಿಕ ಹಕ್ಕಿಲ್ಲ: ಹೆಚ್​ಡಿಕೆ ಕಿಡಿ

ಕೈ ನಾಯಕರು ಪದೇ ಪದೇ ದೆಹಲಿಯ 10 ಜನ್‌ಪಥ್‌ ದರ್ಶನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನಡುವೆ ಹತ್ತಿಕೊಂಡ ಕಿಡಿಯನ್ನು ನಕಲಿ ಗಾಂಧಿ ಕುಟುಂಬಕ್ಕೂ ಬಗೆಹರಿಸಲು ಸಾಧ್ಯವಾಗುತ್ತಿಲ್ಲ. ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಕಗ್ಗಂಟನ್ನು ಬಗೆಹರಿಸಲಾಗದವರು ರಾಜ್ಯದ ಸಿಎಂ ಕುರ್ಚಿಯ ಕಾದಾಟವನ್ನು ಬಗೆಹರಿಸುವರೇ? ಎಂದು ಬಿಜೆಪಿ ಕುಹಕವಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.