ETV Bharat / state

ಖರ್ಗೆ ಅಧ್ಯಕ್ಷರಾದ್ರೂ ಗಾಂಧಿ ಕುಟುಂಬದ ಮುಂದೆ ಜೀ ಹುಜೂರ್ ಸಂಸ್ಕೃತಿ ಬದಲಾಗಿಲ್ಲ: ಬಿಜೆಪಿ

author img

By

Published : Dec 13, 2022, 6:06 PM IST

Updated : Dec 13, 2022, 6:27 PM IST

ಕೆಪಿಸಿಸಿ ನಾಯಕರು ಸ್ವಂತಿಕೆಯನ್ನೇ ಮರೆತು 'ಜೀ ಹುಜೂರ್‌' ಸಂಸ್ಕೃತಿಗೆ ಶರಣಾಗಿದ್ದಾರೆ ಎಂದು ಕಾಂಗ್ರೆಸ್​ ವಿರುದ್ದ ಬಿಜೆಪಿ ನಾಯಕರು ಟ್ವೀಟ್ ಮಾಡಿದ್ದಾರೆ.

ಬಿಜೆಪಿ
ಬಿಜೆಪಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಪಟಾಲಂ ದಿಲ್ಲಿಯಲ್ಲಿದೆ. ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಅವರೇ ಎಐಸಿಸಿ ಅಧ್ಯಕ್ಷರಾಗಿದ್ದರೂ ನಿರ್ಧಾರಕ್ಕೆ ಈಗಲೂ ಗಾಂಧಿ ಕುಟುಂಬಕ್ಕೇ ಜೋತು ಬಿದ್ದಿರುವ ಕೆಪಿಸಿಸಿ ನಾಯಕರು ಸ್ವಂತಿಕೆಯನ್ನೇ ಮರೆತು 'ಜೀ ಹುಜೂರ್‌' ಸಂಸ್ಕೃತಿಗೆ ಶರಣಾಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, 2013 ರಿಂದ 2018ರವರೆಗೆ ಏನಾಗಿತ್ತು ನೆನಪಿಸಿಕೊಳ್ಳಿ. ಕೆ ಸಿ ವೇಣುಗೋಪಾಲ್ ಎಂಬ ಸೋನಿಯಾ ಗಾಂಧಿಯವರ ಅಂಚೆಯಣ್ಣನ ಪಾದಾರವಿಂದಗಳಿಗೆ ರಾಜ್ಯದ ಅಂದಿನ ಕಾಂಗ್ರೆಸ್‌ ಸರ್ಕಾರವನ್ನು ಅರ್ಪಿಸಲಾಗಿತ್ತು. ಸಿದ್ದರಾಮಯ್ಯನವರು ಕನ್ನಡ ಅಸ್ಮಿತೆಯನ್ನು ಅವರ ಮುಂದೆ ನೈವೇದ್ಯಕ್ಕಿಟ್ಟಿದ್ದರು. ಈಗ ಅಧಿಕಾರವಿಲ್ಲದಿದ್ದರೂ ಅದೇ ಸಂಸ್ಕೃತಿ ಮರುಕಳಿಸಿದೆ. ಈಗ ಅಧಿಕಾರವಿಲ್ಲದೇ ರಾಜಸ್ಥಾನದ ಹೊರತಾಗಿ ನೀರಿನಿಂದ ಹೊರತೆಗೆದ ಮೀನಿನಂತಾಗಿರುವ ಎಐಸಿಸಿ ಸಂಪತ್ಭರಿತವಾಗಿರುವ ನಮ್ಮ ರಾಜ್ಯವನ್ನು ತಮ್ಮ ನಾಯಕರ ತಿಜೋರಿಗಳನ್ನು ತುಂಬಿಸಿಕೊಳ್ಳಲು ಎಟಿಎಂನಂತೆ ಬಳಸಿಕೊಳ್ಳಲು ತುದಿಗಾಲಲ್ಲಿ ನಿಂತಿದೆ ಎಂದು ವಾಗ್ದಾಳಿ ನಡೆಸಿದೆ.

  • ಕರ್ನಾಟಕ ಕಾಂಗ್ರೆಸ್‌ ಪಟಾಲಂ ದಿಲ್ಲಿಯಲ್ಲಿದೆ. ಕನ್ನಡಿಗ @khargeರವರೇ ಅಧ್ಯಕ್ಷರಾಗಿದ್ದರೂ ನಿರ್ಧಾರಕ್ಕೆ ಈಗಲೂ ಗಾಂಧಿ ಕುಟುಂಬಕ್ಕೇ ಜೋತು ಬಿದ್ದಿರುವ @INCKarnatakaದ ನಾಯಕರು ಸ್ವಂತಿಕೆಯನ್ನೇ ಮರೆತು "ಜೀ ಹುಜೂರ್‌" ಸಂಸ್ಕೃತಿಗೆ ಶರಣಾಗಿದ್ದಾರೆ.
    1/5

    — BJP Karnataka (@BJP4Karnataka) December 13, 2022 " class="align-text-top noRightClick twitterSection" data=" ">

ರಾಜ್ಯಾಧ್ಯಕ್ಷರಿಂದ ಹಿಡಿದು ಯುವ ಕಾಂಗ್ರೆಸ್‌ ಅಧ್ಯಕ್ಷರವರೆಗೂ ಬೇಲ್‌ ಮೇಲೆ ಬಾಳು ಸಾಗಿಸುತ್ತಿರುವ ಕೆಪಿಸಿಸಿ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪಕ್ಕದ ರಾಜ್ಯದಿಂದ ನಾಯಕರನ್ನು ಆಮದು ಮಾಡಿಕೊಂಡು ಅವರಿಂದಲೂ ರಾಜ್ಯವನ್ನು ಲೂಟಿ ಹೊಡೆಸಿ ಗೃಹಮಂತ್ರಿಗಳನ್ನಾಗಿಯೂ ಮಾಡಿದ್ದರು. ಡಬಲ್‌ ಎಂಜಿನ್‌ ವೇಗದ ಅಭಿವೃದ್ಧಿಯನ್ನು ರಾಜ್ಯಕ್ಕೆ ನೀಡಲು ತಲೆಕೆಳಗಾಗಿ ನಿಂತರೂ ಸಾಧ್ಯವಾಗದ ಕೆಪಿಸಿಸಿ ಯಾವ ಮಟ್ಟಕ್ಕಾದರೂ ಇಳಿದು ಅಧಿಕಾರಕ್ಕೆ ಬಂದು ರಾಜ್ಯವನ್ನು ಎಟಿಎಂ ಆಗಿ ಮಾಡಿಕೊಂಡು ಲೂಟಿ ಹೊಡೆಯಲು ಹವಣಿಸುತ್ತಿದೆ. ಕನ್ನಡಿಗರು ಇದನ್ನು ಎಂದಿಗೂ ಸಾಧ್ಯವಾಗಿಸುವುದಿಲ್ಲ ಎಂದು ಟಾಂಗ್ ನೀಡಿದೆ.

ಇದನ್ನೂ ಓದಿ: ಕಾಂಗ್ರೆಸ್​ಗೂ ಘಜ್ನಿ ಸಂತತಿಗೂ ಬಹಳ ಸಾಮ್ಯತೆ ಇದೆ: ರಾಜ್ಯ ಬಿಜೆಪಿ

Last Updated : Dec 13, 2022, 6:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.