ETV Bharat / state

ಕಾಂಗ್ರೆಸ್ ಅಧಿಕಾರಕ್ಕೇರಲು ಬಿಡಲ್ಲ, ನೂರಕ್ಕೆ ನೂರರಷ್ಟು ಮತ್ತೊಮ್ಮೆ ಬಿಜೆಪಿಗೆ ಅಧಿಕಾರ: ಯಡಿಯೂರಪ್ಪ

author img

By

Published : Jul 21, 2022, 11:56 AM IST

former cm bsy
ಮಾಜಿ ಸಿಎಂ ಯಡಿಯೂರಪ್ಪ

ಮುಂದಿನ ಚುನಾವಣೆಯಲ್ಲೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ - ಕಾಂಗ್ರೆಸ್​ ಅಧಿಕಾರಕ್ಕೇರಲು ಬಿಡಲ್ಲ- ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಿದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಟವೆಲ್ ಹಾಕುತ್ತಿರುವ ಕಾಂಗ್ರೆಸ್ ನಾಯಕರ ಆಸೆ ಈಡೇರಲ್ಲ, ಅದಕ್ಕೆ ನಾವು ಅವಕಾಶವನ್ನೂ ನೀಡಲ್ಲ. ರಾಜ್ಯದಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಆರ್. ಪೇಟೆ ಮತ್ತು ಸುತ್ತಮುತ್ತ ಪ್ರವಾಸ ಮಾಡಿಕೊಂಡು ಬರುತ್ತೇನೆ, ಕೆ.ಆರ್. ಪೇಟೆಯಲ್ಲಿ ಬಹಳ ಶ್ರಮ ಹಾಕಿ ವಿಜಯೇಂದ್ರನ ಪ್ರಯತ್ನದಿಂದ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಈಗ ನಾರಾಯಣ ಗೌಡರು ಜಿಲ್ಲೆಯಲ್ಲಿ ಮೂರ್ನಾಲ್ಕು ಕ್ಷೇತ್ರ ಗೆಲ್ಲುವ ವಾತಾವರಣ ಸೃಷ್ಟಿಸಿದ್ದಾರೆ. ಹೀಗಾಗಿ ಬಹಳ ದೊಡ್ಡ ಪ್ರಮಾಣದಲ್ಲಿ ಇಂದು ಸಭೆ ಆಗುತ್ತಿದ್ದು, ಅದರಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು.

ಮುಖ್ಯಮಂತ್ರಿ ಸ್ಥಾನದ ಅಪೇಕ್ಷೆ ವ್ಯಕ್ತಪಡಿಸಿರುವ ಕಾಂಗ್ರೆಸ್​ನವರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದ ರೀತಿಯಲ್ಲಿ ನಾನು ಮುಖ್ಯಮಂತ್ರಿ, ನೀನು ಮುಖ್ಯಮಂತ್ರಿ ಅಂತಾ ಬಡಿದಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರು ಮುಖ್ಯಮಂತ್ರಿ ಆಗಲು ನಾವು ಬಿಡುವುದಿಲ್ಲ. ಬಿಜೆಪಿಯವರೇ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದರು.

ನೂರಕ್ಕೆ ನೂರರಷ್ಟು ಬಹುಮತದಿಂದ ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಯಡಿಯೂರಪ್ಪ ತಿಳಿಸಿದರು.

ಇದನ್ನೂ ಓದಿ..ಹೆಚ್​ಡಿಕೆ, ಹೆಚ್​ಡಿಡಿ ಅವರಿಗೆ ಅವಕಾಶ ನೀಡಿದ್ದೀರಿ, ನನಗೂ ನೀಡಿ: ಸಮುದಾಯಕ್ಕೆ ಡಿಕೆಶಿ ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.