ETV Bharat / state

ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಗುದ್ದಿದ ಬಿಎಂಟಿಸಿ ಬಸ್​

author img

By

Published : Dec 15, 2022, 8:59 AM IST

ಸಿಮೆಂಟ್ ಬ್ಲಾಕ್ ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್​ಗೆ ಬಿಎಂಟಿಸಿ ಬಸ್​ ಡಿಕ್ಕಿ ಹೊಡೆದಿದ್ದು, ಬಳಿಕ ರಸ್ತೆ ಪಕ್ಕದಲ್ಲೇ ನಿಂತಿದ್ದ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಜಂಗಲ್ ಪಾಳ್ಯ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಬಿಎಂಟಿಸಿ ಬಸ್​
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್​

ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್​

ಆನೇಕಲ್: ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಬಿಎಂಟಿಸಿ‌ ಬಸ್ ಗುದ್ದಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಜಂಗಲ್ ಪಾಳ್ಯ ಮುಖ್ಯ ರಸ್ತೆಯಲ್ಲಿ ಕಳೆದ ರಾತ್ರಿ‌ ನಡೆದಿದೆ.

ಚಾಲಕನ‌ ಅಜಾಗರೂಕತೆಯಿಂದ ಸಿಮೆಂಟ್ ಬ್ಲಾಕ್​ ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್​ಗೆ ಬಿಎಂಟಿಸಿ ಬಸ್​ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಪಕ್ಕದಲ್ಲೇ ನಿಂತಿದ್ದ ವಿದ್ಯುತ್ ಕಂಬಕ್ಕೆ ಗುದ್ದಿದೆ. ಪರಿಣಾಮ ವಿದ್ಯುತ್ ಕಂಬ ಜಖಂಗೊಂಡಿದ್ದು, ಟ್ರ್ಯಾಕ್ಟರ್ ಚಾಲಕನ‌ ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ ಸ್ಫೋಟ: ಚಾಲಕ ಸಜೀವ ದಹನ, ಹತ್ತಿರದ ಹೋಟೆಲ್​ ಭಸ್ಮ

ಬನ್ನೇರುಘಟ್ಟದಿಂದ ಜಿಗಣಿ ಎಪಿಸಿ ಸರ್ಕಲ್​ಗೆ ಸಂಚರಿಸುವ ಬಸ್ ಇದಾಗಿದ್ದು, ಬಿಎಂಟಿಸಿ ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ‌ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಇನ್ನೂ ಅಪಘಾತ ಸಂಭವಿಸುತ್ತಿದ್ದಂತೆ ಬಿಎಂಟಿಸಿ ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಬೈಕ್​ಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ: ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.