ETV Bharat / state

ರೆನ್ಯೂಪವರ್​​ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ

author img

By

Published : May 24, 2022, 5:17 PM IST

ರೆನ್ಯೂಪವರ್​​ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ
ರೆನ್ಯೂಪವರ್​​ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ

ರೆನ್ಯೂ ಪವರ್ ಪ್ರೈ.ಲಿ. ಕಂಪನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದೆ..

ದಾವೋಸ್/ಬೆಂಗಳೂರು : ದಾವೋಸ್​​ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದ್ದು, ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

ಮೆಗಾ ಡಾಟಾ ಸೆಂಟರ್ : ಇದಕ್ಕೂ ಮುನ್ನ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಭಾರ್ತಿ ಎಂಟರ್ ಪ್ರೈಸಸ್​​ನ ಅಧ್ಯಕ್ಷ ಹಾಗೂ ಸಿಇಒ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ಇದಕ್ಕೆ ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥ್‌ ನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

ಇದನ್ನೂ ಓದಿ: 'Proud of you Bhagwant' : ಪಂಜಾಬ್ ಆರೋಗ್ಯ​ ಸಚಿವರ ಬಂಧನದ ಬೆನ್ನಲ್ಲೇ ಕೇಜ್ರಿವಾಲ್​ ಮೆಚ್ಚುಗೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.