ETV Bharat / state

ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ

author img

By

Published : Sep 27, 2022, 10:13 AM IST

Updated : Sep 27, 2022, 4:08 PM IST

Kn_bng_01_acc
ದೀಪಕ್​ ಕಾರು ಅಪಘಾತ

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನಕ್ಕೆ ಕುಟುಂಬಸ್ಥರು ಮುಂದಾಗಿದ್ದಾರೆ.

ಬೆಂಗಳೂರು: ಅಪಘಾತವಾಗಿ ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಆತನ ಕುಟುಂಬ ನೋವಿನಲ್ಲಿಯೂ ಸಾರ್ಥಕತೆ ಮೆರೆದಿದೆ. ದೀಪಕ್(26) ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಇತರರ ಬಾಳಿಗೆ ಯುವಕ ಬೆಳಕಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಗಂಗೊಂಡನಹಳ್ಳಿಯ ದೀಪಕ್ ಸೆ.25 ರಂದು ನೈಸ್ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ನಿಂತಿದ್ದ ಕ್ಯಾಂಟರಿಗೆ ದೀಪಕ್ ಅವರ ಕಾರು ಡಿಕ್ಕಿ ಹೊಡೆದಿತ್ತು. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೀಪಕ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ದುರಾದೃಷ್ಟ ಎಂಬಂತೆ ಇಂದು ಅವರ ಮೆದುಳು ನಿಷ್ಕ್ರಿಯಗೊಂಡಿದೆ.

Kn_bng_01_acc
ಮೆದುಳು ನಿಷ್ಕ್ರಿಯಗೊಂಡ ಯುವಕ

ಮೆದುಳು ನಿಷ್ಕ್ರಿಯೆಗೊಂಡ ಹಿನ್ನೆಲೆ ದೀಪಕ್​ ಅವರ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಮುಂದಾಗಿದ್ದು, ಕಿಡ್ನಿ, ಕಣ್ಣು, ಚರ್ಮ ಸೇರಿದಂತೆ ಇತರೆ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಲಾಗಿದೆ. ಸದ್ಯ ಆರ್.ಆರ್.ನಗರದ ಎಸ್.ಎಸ್ ಸ್ಪರ್ಶ್ ಆಸ್ಪತ್ರೆಯಲ್ಲಿ ದೀಪಕ್ ಅವರ ಮೃತದೇಹವಿದ್ದು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಗುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಂಗಾಂಗ ದಾನ ಮಾಡಿ ಹಲವು ಮಕ್ಕಳ ಬಾಳಿಗೆ ಬೆಳಕಾದ 16 ತಿಂಗಳ ಕಂದಮ್ಮ

Last Updated :Sep 27, 2022, 4:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.