ETV Bharat / state

ರಾಜ್ಯದ ಗಡಿಭಾಗದಲ್ಲಿ ಪ್ರವಾಹ: ಮಹಾರಾಷ್ಟ್ರ, ತೆಲಂಗಾಣ ಸಿಎಂಗಳಿಗೆ ಬಿಎಸ್​ವೈ ಪತ್ರ

author img

By

Published : Aug 5, 2019, 9:40 PM IST

bsy

ಮಹಾರಾಷ್ಟ್ರ ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್​ಗೆ ಹಾಗೂ ನೀರು ಹರಿಸುವ ಮುನ್ನ ಕರ್ನಾಟಕದ ಅಧಿಕಾರಿಗಳಿಗೆ ತಿಳಿಸುವಂತೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ಗೆ ಅವರಿಗೆ ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಬೆಂಗಳೂರು: ಮಹಾರಾಷ್ಟ್ರ ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತದೆ. ಹಾಗಾಗಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್​ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಮಹಾರಾಷ್ಟ್ರ ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ನೀರು ಬಿಡುಗಡೆ ಹಿನ್ನೆಲೆಯಲ್ಲಿ ಕರ್ನಾಟಕದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯ ಭರ್ತಿಯಾಗಿವೆ. ಅಣೆಕಟ್ಟು ಮತ್ತು ಜನರ ಸುರಕ್ಷತಾ ದೃಷ್ಟಿಯಿಂದ ನಾರಾಯಣಪುರ ಜಲಾಶಯದಿಂದ ಇಂದು 2,75,000 ಕ್ಯೂಸೆಕ್​ ನೀರನ್ನು ಬಿಡುಗಡೆ ಮಾಡಲಾಗಿದೆ. ಈ ದೃಷ್ಟಿಯಿಂದ ಕೃಷ್ಣ ನದಿ ಪಾತ್ರದ ನಿಮ್ಮ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ, ಅಣೆಕಟ್ಟು ಅಧಿಕಾರಿಗಳಿಗೆ ಸೂಕ್ತ ಮುನ್ನೆಚ್ಚರಿಕ ಕ್ರಮ ತೆಗೆದುಕೊಳ್ಳಲು ನಿರ್ದೇಶಿಸುವಂತೆ ತೆಲಂಗಾಣ ಸಿಎಂಗೆ ಪ್ರವಾಹ ಮುನ್ನೆಚ್ಚರಿಕೆ ಕುರಿತು ಯಡಿಯೂರಪ್ಪ ಪತ್ರ ಬರೆದಿದ್ದಾರೆ.

bsy
ಬಿಎಸ್​ವೈ ಬರೆದಿರುವ ಪತ್ರಗಳು

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಹೆಚ್ಚಾಗಿ ನೀರು ಬಿಡುಗಡೆ ಹಿನ್ನೆಲೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ಗೂ ಸಿಎಂ ಯಡಿಯೂರಪ್ಪ ಪತ್ರ ರವಾನಿಸಿದ್ದಾರೆ.

ಕೊಯ್ನಾ ಜಲಾಶಯದ ನೀರಿನ ಹೊರ ಹರಿವು ಕಳೆದ ಎರಡು ದಿನಗಳಿಂದ ಹೆಚ್ಚುತ್ತಿದೆ. ಇದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ತಲೆದೂರಿದೆ. ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಪ್ರವಾಹದಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕೊಯ್ನಾ ಜಲಾಶಯದಿಂದ ಹೊರ ಹರಿವು ನಿಯಂತ್ರಿಸಿ, ನೀರು ಹರಿಸುವ ಮುನ್ನ ಕರ್ನಾಟಕದ ಅಧಿಕಾರಿಗಳಿಗೆ ತಿಳಿಸಿ‌. ಇನ್ಮುಂದೆ ಎರಡು ರಾಜ್ಯಗಳ ನಡುವೆ ಸಮನ್ವಯತೆ ಕಾಯ್ದುಕೊಳ್ಳೋಣ ಎಂದು ಪತ್ರದಲ್ಲಿ ಬಿಎಸ್​ವೈ ಉಲ್ಲೇಖಿಸಿದ್ದಾರೆ.

Intro:



ಬೆಂಗಳೂರು:ಮಹಾರಾಷ್ಟ್ರ ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತದೆ ಹಾಗಾಗಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಮಹಾರಾಷ್ಟ್ರ ಜಲಾಶಯಗಳಿಂದ ಅಪಾರ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಕರ್ನಾಟಕದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯ ಭರ್ತಿಯಾಗಿದ್ದು ಅಣೆಕಟ್ಟು ಮತ್ತು ಜನರ ಸುರಕ್ಷತಾ ದೃಷ್ಟಿಯಿಂದ ನಾರಾಯಣಪುರ ಜಲಾಶಯದಿಂದ ಇಂದು 2,75,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ, ಈ ದೃಷ್ಟಿಯಿಂದ ಕೃಷ್ಣಾ ನದಿ ಪಾತ್ರದ ನಿಮ್ಮ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ, ಅಣೆಕಟ್ಟು ಅಧಿಕಾರಿಗಳಿಗೆ ಸೂಕ್ತ ಮುನ್ನೆಚ್ಚರಿಕ ಕ್ರಮ ತೆಗೆದುಕೊಳ್ಳಲು ನಿರ್ದೇಶಿಸುವಂತೆ ತೆಲಂಗಾಣ ಸಿಎಂಗೆ ಪ್ರವಾಹ ಮುನ್ನೆಚ್ಚರಿಕೆ ಕುರಿತು ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಹೆಚ್ಚಾಗಿ ನೀರು ಬಿಡುಗಡೆ ಹಿನ್ನೆಲೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಗೂ ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಕೊಯ್ನಾ ಜಲಾಶಯದ ನೀರಿನ ಹೊರ ಹರಿವು ಕಳೆದ ಎರಡು ದಿನಗಳಿಂದ ಹೆಚ್ಚುತ್ತಿದೆ ಇದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ತಲೆದೂರಿದೆ, ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ ಪ್ರವಾಹದಿಂದಾಗಿ ಜನ ಜೀವನ ಅಸ್ತವೆಸ್ಥವಾಗಿದೆ,ಕೊಯ್ನಿ ಜಲಾಶಯದಿಂದ ಹೊರ ಹರಿವು ನಿಯಂತ್ರಿಸಿ, ನೀರು ಕಡಿಮೆ ಮಾಡಿ ಇನ್ನೂ ಮುಂದೆ ನೀರು ಹರಿವು ಮುನ್ನ ಕರ್ನಾಟಕದ ಅಧಿಕಾರಿಗಳಿಗೆ ತಿಳಿಸಿ‌ ಇನ್ಮುಂದೆ ಎರಡು ರಾಜ್ಯಗಳ ನಡುವೆ ಸಮನ್ವಯತೆ ಕಾಯ್ದುಕೊಳ್ಳೋಣ ಎಂದು ಪತ್ರ ಬರೆದಿದ್ದಾರೆ.
Body:.Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.