ETV Bharat / state

ಬಸ್ ದರ ಏರಿಕೆ: ಮರು ಪ್ರಸ್ತಾವನೆ ಸಲ್ಲಿಸಲು ಸಾರಿಗೆ ಅಧಿಕಾರಿಗಳಿಗೆ ಸಿಎಂ ಸೂಚನೆ

author img

By

Published : Jun 24, 2019, 8:40 PM IST

ಡೀಸೆಲ್ ಬೆಲೆ ಹೆಚ್ಚಾಗಿದ್ದರೂ, ಕಳೆದ ನಾಲ್ಕು ವರ್ಷಗಳಿಂದ ಬಸ್ ದರವನ್ನು ಹೆಚ್ಚಿಸದೇ ಇರುವ ಹಿನ್ನೆಲೆಯಲ್ಲಿ ಬಸ್ ದರವನ್ನು ಏರಿಸಬೇಕೆಂಬ ಸಾರಿಗೆ ಇಲಾಖೆ ಪ್ರಸ್ತಾವನೆಯ ಕುರಿತು ಚರ್ಚೆ ನಡೆಸಲಾಯಿತು.

ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಬಸ್ ದರ ಏರಿಕೆ ಅನಿವಾರ್ಯತೆ ಕುರಿತಂತೆ ಸೂಕ್ತ ಸಮರ್ಥನೆಗಳೊಂದಿಗೆ ಮರು ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೀಸೆಲ್ ಬೆಲೆ ಹೆಚ್ಚಾಗಿದ್ದರೂ, ಕಳೆದ ನಾಲ್ಕು ವರ್ಷಗಳಿಂದ ಬಸ್ ದರವನ್ನು ಹೆಚ್ಚಿಸದೇ ಇರುವ ಹಿನ್ನೆಲೆಯಲ್ಲಿ ಬಸ್ ದರವನ್ನು ಏರಿಸಬೇಕೆಂಬ ಸಾರಿಗೆ ಇಲಾಖೆ ಪ್ರಸ್ತಾವನೆಯ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ‌‌ ಸಿಎಂ ಅಧಿಕಾರಿಗಳಿಗೆ ಮರು ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು.

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತಷ್ಟು ಜನಸ್ನೇಹಿಯಾಗಬೇಕು. ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಹಾಗೂ ಬೆಂಗಳೂರು ನಗರದಲ್ಲಿ ಎಲೆಕ್ಟ್ರಿಕಲ್ ಬಸ್ ಗಳನ್ನು ಪರಿಚಯಿಸುವ ಕುರಿತು ವಿವರವಾದ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು. ಶೀಘ್ರದಲ್ಲೇ ಮತ್ತೊಂದು ಸಭೆಗೆ ಸಿಎಂ ಸೂಚನೆ ನೀಡಿದ್ದಾರೆ.

ಶೇಕಡವಾರು ಏರಿಕೆ ಸಂಬಂಧಿಸಿದಂತೆ ಹೊಸ ಪ್ರಸ್ತಾವನೆಗೆ ಸಿಎಂ ಸೂಚಿಸಿದ್ದಾರೆ. ಇನ್ನು ನಷ್ಟದಿಂದ ಹೊರ ಬರುವ ಬಗ್ಗೆ ಸಿಎಂ ಅಧಿಕಾರಿಗಳಲ್ಲಿ ಮಾರ್ಗೋಪಾಯ ಕೇಳಿದ್ದಾರೆ. ಇದೇ ವೇಳೆ ಸಾರಿಗೆ ಸಂಸ್ಥೆಗೆ ಬಾಕಿ ಉಳಿಸಿಕೊಂಡಿರುವ ಮೊತ್ತವನ್ನು ಬಿಡುಗಡೆ ಮಾಡುವಂತೆ ಅಧಿಕಾರಿಗಳು ಮನವಿ‌ ಮಾಡಿದರು. ಮುಂದಿನ ಸಭೆಯಲ್ಲಿ ಬಸ್ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಸಹಮತ ವ್ಯಕ್ತವಾಗಿದೆ. ಇದೇ ವೇಳೆ ಗಾರ್ಮೆಂಟ್ ಕಾರ್ಖಾನೆ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಬಸ್ ಗಳನ್ನು ಬಳಸಿಕೊಳ್ಳಲು ಕಾರ್ಮಿಕ ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ.

ಕಾರ್ಮಿಕರು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸಲು ಬಸ್ ಪಾಸ್ ಗಳನ್ನು ರಿಯಾಯತಿ ದರದಲ್ಲಿ ನೀಡಲಾಗುವುದು ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು. ಬಿ.ಎಂ.ಟಿ. ಸಿಯನ್ನು ಸಂಪೂರ್ಣ ಡಿಜಿಟೈಸ್ ಮಾಡಲು ಕ್ರಮಕೈಗೊಳ್ಳಬೇಕಿದೆ ಎಂದು ಬಿಎಂಟಿಸಿ ಅಧ್ಯಕ್ಷ ಎನ್.ಎ.ಹ್ಯಾರಿಸ್ ತಿಳಿಸಿದರು.
ಹೊಸ ಬಸ್ ಖರೀದಿ, ಹೊಸ ಬಸ್ ನಿಲ್ದಾಣ / ಡಿಪೋಗಳ ನಿರ್ಮಾಣ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಸಾರಿಗೆ ಸಚಿವ ಡಿ.ಸಿ.ತಮಣ್ಣ, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಬಿ.ಬಸವರಾಜು, ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ.ಸಿ.ಕಳಸದ್ ಉಪಸ್ಥಿತರಿದ್ದರು.

Intro:Cm meetingBody:KN_BNG_06_24_BUSRATEHIKE_PROPOSALCM_SCRIPT_VENKAT_7201951

ಬಸ್ ದರ ಏರಿಕೆ: ಮರು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಬಸ್ ದರ ಏರಿಕೆ ಅನಿವಾರ್ಯತೆ ಕುರಿತಂತೆ ಸೂಕ್ತ ಸಮರ್ಥನೆಗಳೊಂದಿಗೆ ಮರು ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೀಸೆಲ್ ಬೆಲೆ ಹೆಚ್ಚಾಗಿದ್ದರೂ, ಕಳೆದ ನಾಲ್ಕು ವರ್ಷಗಳಿಂದ ಬಸ್ ದರವನ್ನು ಹೆಚ್ಚಿಸದೇ ಇರುವ ಹಿನ್ನೆಲೆಯಲ್ಲಿ ಬಸ್ ದರವನ್ನು ಏರಿಸಬೇಕೆಂಬ ಸಾರಿಗೆ ಇಲಾಖೆ ಪ್ರಸ್ತಾ ವನೆಯ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ‌‌ ಸಿಎಂ ಅಧಿಕಾರಿಗಳಿಗೆ ಮರು ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು.

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತಷ್ಟು ಜನಸ್ನೇಹಿಯಾಗಬೇಕು. ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಹಾಗೂ ಬೆಂಗಳೂರು ನಗರದಲ್ಲಿ ಎಲೆಕ್ಟ್ರಿಕಲ್ ಬಸ್ ಗಳನ್ನು ಪರಿಚಯಿಸುವ ಕುರಿತು ವಿವರವಾದ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಶೀಘ್ರದಲ್ಲೇ ಮತ್ತೊಂದು ಸಭೆಗೆ ಸಿಎಂ ಸೂಚನೆ ನೀಡಿದ್ದಾರೆ. ಶೇಕಡವಾರು ಏರಿಕೆ ಸಂಬಂಧಿಸಿದಂತೆ ಹೊಸ ಪ್ರಸ್ತಾವನೆಗೆ ಸಿಎಂ ಸೂಚಿಸಿದ್ದಾರೆ. ಇನ್ನು ನಷ್ಟದಿಂದ ಹೊರ ಬರುವ ಬಗ್ಗೆ ಸಿಎಂ ಅಧಿಕಾರಿಗಳಲ್ಲಿ ಮಾರ್ಗೋಪಾಯ ಕೇಳಿದ್ದಾರೆ.

ಇದೇ ವೇಳೆ ಸಾರಿಗೆ ಸಂಸ್ಥೆಗೆ ಬಾಕಿ ಉಳಿಸಿಕೊಂಡಿರುವ ಮೊತ್ತವನ್ನು ಬಿಡುಗಡೆ ಮಾಡುವಂತೆ ಅಧಿಕಾರಿಗಳು ಮನವಿ‌ ಮಾಡಿದರು. ಮುಂದಿನ ಸಭೆಯಲ್ಲಿ ಬಸ್ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಸಹಮತ ವ್ಯಕ್ತವಾಗಿದೆ.

ಇದೇ ವೇಳೆ ಗಾರ್ಮೆಂಟ್ ಕಾರ್ಖಾನೆ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಬಸ್ ಗಳನ್ನು ಬಳಸಿಕೊಳ್ಳಲು ಕಾರ್ಮಿಕ ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಕಾರ್ಮಿಕರು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸಲು ಬಸ್ ಪಾಸ್ ಗಳನ್ನು ರಿಯಾಯತಿ ದರದಲ್ಲಿ ನೀಡಲಾಗುವುದು ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ಬಿ.ಎಂ.ಟಿ. ಸಿಯನ್ನು ಸಂಪೂರ್ಣ ಡಿಜಿಟೈಸ್ ಮಾಡಲು ಕ್ರಮಕೈಗೊಳ್ಳಬೇಕಿದೆ ಎಂದು ಬಿಎಂಟಿಸಿ ಅಧ್ಯಕ್ಷ ಎನ್.ಎ.ಹ್ಯಾರಿಸ್ ತಿಳಿಸಿದರು.
ಹೊಸ ಬಸ್ ಖರೀದಿ, ಹೊಸ ಬಸ್ ನಿಲ್ದಾಣ / ಡಿಪೋಗಳ ನಿರ್ಮಾಣ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಸಾರಿಗೆ ಸಚಿವ ಡಿ.ಸಿ.ತಮಣ್ಣ, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಬಿ.ಬಸವರಾಜು, ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ.ಸಿ.ಕಳಸದ್ ಉಪಸ್ಥಿತರಿದ್ದರು.Conclusion:Venkat

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.