ETV Bharat / state

ಬೆಂಗಳೂರಲ್ಲಿ ಕ್ಯಾಬ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ ಆರೋಪ

author img

By

Published : Sep 22, 2021, 1:50 PM IST

Updated : Sep 22, 2021, 4:06 PM IST

Cab driver attempt rape on Woman In Bengaluru
bengaluru

ಬೆಂಗಳೂರಿನ ಹೆಚ್​ಎಸ್​​ಆರ್ ಲೇಔಟ್​ನಿಂದ ಮುರುಗೇಶಪಾಳ್ಯಕ್ಕೆ ತೆರಳಲು ಯುವತಿಯು ಕ್ಯಾಬ್ ಬುಕ್‌ ಮಾಡಿದ್ದರು. ಗೆಳತಿ ‌ಮನೆಯಲ್ಲಿ ತಡರಾತ್ರಿ ಪಾರ್ಟಿ ಮುಗಿಸಿಕೊಂಡು ಉಬರ್ ಕ್ಯಾಬ್​ನಲ್ಲಿ ಬರುವಾಗ ಚಾಲಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 376 ರಡಿ (ಅತ್ಯಾಚಾರ) ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರು: ಗೆಳತಿ ‌ಮನೆಯಲ್ಲಿ ತಡರಾತ್ರಿ ಪಾರ್ಟಿ ಮುಗಿಸಿಕೊಂಡು ಉಬರ್ ಕ್ಯಾಬ್​ನಲ್ಲಿ ಬರುವಾಗ ಯುವತಿ ಜೊತೆ ಅಸಭ್ಯ ವರ್ತನೆ ತೋರಿ, ಚಾಲಕ ಅತ್ಯಾಚಾರ ನಡೆಸಿರುವ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ಜೀವನಭೀಮಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಿನ್ನೆ ಹೆಚ್​ಎಸ್​ಆರ್​ ಲೇಔಟ್​ನಲ್ಲಿ ಗೆಳತಿ ಮನೆಯಲ್ಲಿ ಪಾರ್ಟಿ ಮುಗಿಸಿ ತಡರಾತ್ರಿ 2 ಗಂಟೆ ವೇಳೆ ಮುರುಗೇಶ್ ಪಾಳ್ಯಕ್ಕೆ ಹೋಗಲು ಕ್ಯಾಬ್ ಬುಕ್ ಮಾಡಿದ್ದಾರೆ. ಇದರಂತೆ ಚಾಲಕ ದೇವರಾಜ್ ಎಂಬಾತ ಯುವತಿಯನ್ನು ಕ್ಯಾಬ್ ಹತ್ತಿಸಿಕೊಂಡಿದ್ದಾನೆ. ಮನೆ ಬಳಿ ಬರುವಾಗ ಚಾಲಕ ಯುವತಿ ಮೇಲೆ ದೈಹಿಕ ದೌರ್ಜನ್ಯ ನಡೆಸಿ, ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಲಕನ ಪತ್ತೆಗೆ ಶೋಧಕಾರ್ಯ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಪಾರ್ಟಿಯಲ್ಲಿ ಯುವತಿ ಮದ್ಯ ಸೇವನೆ ಮಾಡಿದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೇ ದೃಢವಾಗಬೇಕಿದೆ.‌

ಈ ಘಟನೆ ಸಂಬಂಧ ಐಪಿಸಿ ಸೆಕ್ಷನ್ 376ರಡಿ ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡ ರಚಿಸಲಾಗಿದೆ. ಕ್ಯಾಬ್​ ಚಾಲಕ ಆಂಧ್ರಪ್ರದೇಶ ಮೂಲದವನಾಗಿದ್ದು, ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Last Updated :Sep 22, 2021, 4:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.