ETV Bharat / state

ಬೆಂಗಳೂರು: ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ, ವ್ಯಕ್ತಿ ಸಾವು

author img

By

Published : Oct 4, 2020, 7:36 AM IST

Updated : Oct 4, 2020, 8:16 AM IST

ಬೆಂಗಳೂರಲ್ಲಿ ತಡರಾತ್ರಿ ಮಲ್ಲೇಶ್ವರಂನಲ್ಲಿ ಭೀಕರ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿವೋರ್ವ ಮೃತಪಟ್ಟಿದ್ದಾನೆ.

Car accident Death one person In Bangalore
ಕಾರು ಅಪಘಾತದಲ್ಲಿ ವ್ಯಕ್ತಿ ಸಾವು

ಬೆಂಗಳೂರು: ಕಾರು ರಸ್ತೆಯ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿವೋರ್ವ ಸಾವನ್ನಪ್ಪಿರುವ ಘಟನೆ ನಗರದ ಮಲ್ಲೇಶ್ವರಂ ಮುಖ್ಯರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ವಿಜಯನಗರ ನಿವಾಸಿ ರಜತ್ (27) ಎಂಬಾತ ಸಾವನ್ನಪ್ಪಿದ್ದಾನೆ. ಮಧ್ಯರಾತ್ರಿ 1.30ರ ಸುಮಾರಿಗೆ KA 02, MQ 0422 ಸಂಖ್ಯೆಯ ಕಾರಿನಲ್ಲಿ ಮಲ್ಲೇಶ್ವರಂ ರಸ್ತೆ ಮಾರ್ಗವಾಗಿ ರಜತ್​ ತೆರಳುತ್ತಿದ್ದ. ಆದರೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಆಗ ಗಂಭೀರವಾಗಿ ಗಾಯಗೊಂಡಿದ್ದ ರಜತ್​​ನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವಾಗ, ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.

ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ, ವ್ಯಕ್ತಿ ಸಾವು

ಸದ್ಯ ಮೃತದೇಹವನ್ನು ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೈ ಸ್ಪೀಡ್ ನಿಂದ ಈ ಘಟನೆ ನಡೆದಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

Last Updated : Oct 4, 2020, 8:16 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.