ETV Bharat / state

CD case: ರಮೇಶ್ ಜಾರಕಿಹೊಳಿ ನಡೆಯ ಹಿಂದಿನ ಮರ್ಮವೇನು?

author img

By

Published : May 27, 2021, 3:41 PM IST

ಇತ್ತೀಚೆಗಷ್ಟೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಇಬ್ಬರ ಸಮ್ಮತಿ ಮೇರೆಗೆ ಲೈಂಗಿಕ ಕ್ರಿಯೆ ನಡೆದಿದೆ‌. ಅದು ಬಲವಂತದಿಂದ ನಡೆದಿದ್ದಲ್ಲ ಎಂದು ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಇದಕ್ಕೆ ಪೂರಕವೆಂಬಂತೆ ಪ್ರಕರಣ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳಿಗೆ ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಕಂಡು ಬಂದಿಲ್ಲ ಎಂದು ಹೇಳಲಾಗ್ತಿದೆ.

ಸಿಡಿ ಪ್ರಕರಣ
ಸಿಡಿ ಪ್ರಕರಣ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಗೆ ಭಾರಿ ಹಿನ್ನಡೆಯಾಗುವ ಸಾಧ್ಯತೆಯಿದೆ.

ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವರ ವಿರುದ್ಧ ಯುವತಿ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಗೆ ನೀಡಿದ್ದರು‌. ಇನ್ನೊಂದೆಡೆ ಈ ಪ್ರಕರಣದ ತನಿಖೆ ಆರಂಭದಲ್ಲಿ ನಕಲಿ ವಿಡಿಯೋ ಹರಿಬಿಟ್ಟು ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿ ಸದಾಶಿವನಗರ ಪೊಲೀಸ್ ಠಾಣೆಗೆ ರಮೇಶ್ ಜಾರಕಿಹೊಳಿ ದೂರು ನೀಡಿದ್ದರು.

ಆದರೆ, ಇತ್ತೀಚೆಗಷ್ಟೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಇಬ್ಬರ ಸಮ್ಮತಿ ಮೇರೆಗೆ ಲೈಂಗಿಕ ಕ್ರಿಯೆ ನಡೆದಿದೆ‌. ಬಲವಂತದಿಂದ ನಡೆದಿದದ್ದಲ್ಲ ಎಂದು ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗ್ತಿದೆ. ಇದಕ್ಕೆ ಪೂರಕವೆಂಬಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳಿಗೆ ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಕಂಡು ಬಂದಿಲ್ಲ. ವಿಡಿಯೋದಲ್ಲಿ ಎಲ್ಲಿಯೂ ಬಲವಂತ ಮಾಡಿರುವುದು ಬೆಳಕಿಗೆ ಬಂದಿಲ್ಲ ಎಂಬುದನ್ನು ಕಂಡುಕೊಂಡಿದ್ದಾರೆ ಎನ್ನಲಾಗ್ತಿದೆ.

ಸೆರೆಯಾಗಿದ್ದ ವಿಡಿಯೋವನ್ನು ರಮೇಶ್ ಜಾರಕಿಹೊಳಿಗೆ ನೇರವಾಗಿ ಯುವತಿಯೇ ಕಳುಹಿಸಿದ್ದಳು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ಡಿಲೀಟ್ ಮಾಡುವುದಾಗಿ ಯುವತಿಯು ರಮೇಶ್​ ಜಾರಕಿಹೊಳಿಗೆ ಮನವೊಲಿಸಿದ್ದಳು ಎಂದು ತಿಳಿದು ಬಂದಿದೆ.

ಅಧಿಕಾರಿಗಳು ವಶಪಡಿಸಿಕೊಂಡಿದ್ದ ಜಾರಕಿಹೊಳಿ ಮೊಬೈಲ್ ಪರಿಶೀಲಿಸಿದಾಗ ಕಾಲ್​ ಡಿಟೇಲ್ಸ್​ನಲ್ಲಿ ಯುವತಿಯೇ ಹೆಚ್ಚು ಬಾರಿ ಕರೆ ಮಾಡಿರುವುದಾಗಿ ಗೊತ್ತಾಗಿದೆ. ಕೆಲ ದಿನಗಳ ಬಳಿಕ‌ ಯುವತಿಯು ಮೂರನೇ ವ್ಯಕ್ತಿಯಿಂದ ರಮೇಶ್ ಜಾರಕಿಹೊಳಿ ಬಳಿ ಹಣಕ್ಕೆ ಬೇಡಿಕೆಯಿಟ್ಟಿದ್ದಳು. ವಿಡಿಯೋ ಹೊರಬರುತ್ತೆ ಎಂದು ಹೆದರಿ ಮಾಜಿ ಸಚಿವ ಆಪ್ತರ ಮೂಲಕ ಹಣ ಕಳಿಸಿಕೊಟ್ಟಿದ್ದರು ಎಂಬುದು ಬೆಳಕಿಗೆ ತಿಳಿದು ಬಂದಿದೆ.
ಇದನ್ನೂ ಓದಿ:ಆಡಳಿತದಲ್ಲಿ ಸಿಎಂ ಪುತ್ರನ ಹಸ್ತಕ್ಷೇಪ: ಸಚಿವ ಸಿ.ಪಿ.ಯೋಗೇಶ್ವರ್ ಅಸಮಾಧಾನ

ಹಣದ ವ್ಯವಹಾರ ಬಳಿಕ ಯುವತಿಯು ರಮೇಶ್ ಸಂಪರ್ಕಕ್ಕೆ ಸಿಕ್ಕಿಲ್ಲ. ಇದಕ್ಕೆ ಪೂರಕವಾಗಿ ಯುವತಿ ಮೊಬೈಲ್ ನಂಬರ್ ಸ್ವಿಚ್​ ಆಫ್ ಆಗಿತ್ತು ಎಂದು ಹೇಳಲಾಗ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.