ETV Bharat / state

ಉಪ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿಯಿಂದ ಹೆಸರು ಪ್ರಕಟ : ಅರುಣ್ ಸಿಂಗ್

author img

By

Published : Mar 20, 2021, 11:32 AM IST

ಏ.17ಕ್ಕೆ ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳ ಹೆಸರನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಪ್ರಕಟಿಸಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಅರಣ್ ಸಿಂಗ್
Arun singh

ಬೆಂಗಳೂರು: ಉಪ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಪ್ರಕಟಿಸಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ, ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲಾಯಿತು. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕಾಂಕ್ಷಿ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳಿಸಿಕೊಡಲಿದ್ದು, ಪಟ್ಟಿಯನ್ನು ಪರಿಶೀಲಿಸಿ ಪಕ್ಷದ ಚುನಾವಣಾ ಸಮಿತಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಿದೆ ಎಂದರು.

ಓದಿ: ಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಿಕೆಟ್​ ಫಿಕ್ಸ್​​ ​: ಬೆಳಗಾವಿ, ಬಸವಕಲ್ಯಾಣ ಅಭ್ಯರ್ಥಿ ಆಯ್ಕೆ ಜವಾಬ್ದಾರಿ ಕಟೀಲ್ ಹೆಗಲಿಗೆ

ಪಕ್ಷ ಸಂಘಟನೆ, ಪಕ್ಷ ಬಲವರ್ಧನೆ, ಮುಂಬರುವ ದಿನಗಳಲ್ಲಿ ಏನೆಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎನ್ನುವ ಕುರಿತು ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಅರುಣ್ ಸಿಂಗ್ ಸ್ಪಷ್ಟಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.