ETV Bharat / state

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವವರಿಗೂ ಸಿಇಟಿ ಪರೀಕ್ಷೆಗೆ ಅವಕಾಶ..!

author img

By

Published : Apr 27, 2023, 10:41 AM IST

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಯನ್ನು ಮೇ 20 ಮತ್ತು 21 ರಂದು ನಡೆಸಲಿದೆ. ಸಿಇಟಿ ಪರೀಕ್ಷೆಗೆ ಹಾಜರಾಗುವ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ಮೇ 22 ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲು ತಿರ್ಮಾನಿಸಲಾಗಿದೆ.

Karnataka Examination Authority
ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಮೇ 20 ಹಾಗೂ 21ರಂದು ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET Exam) ನಡೆಯಲಿದ್ದು, ಪಿಯುಸಿ ಪೂರಕ ಪರೀಕ್ಷೆ ಬರೆಯಲು ಉದ್ದೇಶಿಸಿರುವವರು ಕೂಡ ಸಿಇಟಿ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಸಿಇಟಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ, ಮೇ 20 ಮತ್ತು 21 ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ. ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಗಳನ್ನು ಮೇ 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದಾರೆ. ಅಂಥವರೂ ಸಿಇಟಿ ಪರೀಕ್ಷೆ ಬರೆಯಬಹುದು, ಪೂರಕ ಪರೀಕ್ಷೆ ಬರೆಯುವವರು ಸಿಇಟಿಗೆ ಹಾಜರಾದರೆ ಮಾತ್ರ ಅವರ ಪೂರಕ ಪಿಯು ಪರೀಕ್ಷೆ ಫಲಿತಾಂಶದ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಪರೀಕ್ಷೆ: ಇಂಜಿನಿಯರಿಂಗ್/ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದ್ರೆ ಬಿಎಸ್ಸಿ (ಕೃಷಿ), ಬಿ.ಎಸ್.ಸಿ (ರೇಷ್ಮೆ ಕೃಷಿ), ಬಿಎಸ್ಸಿ (ತೋಟಗಾರಿಕೆ), ಬಿಎಸ್ಸಿ (ಅರಣ್ಯ) ಬಿ.ಎಸ್.ಬಿ.ಎಸ್.ಕೆ(ಆಹಾರ ಮತ್ತು ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ(ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್) ಸೇರಿದಂತೆ ವಿವಿಧ ಕೋರ್ಸ್​ಗಳ ಪ್ರವೇಶಕ್ಕಾಗಿ ಪರೀಕ್ಷೆ ನಡೆಸಲಾಗುತ್ತದೆ.

ಸಿಇಟಿ ಬಗ್ಗೆ ಕರ್ನಾಟಕ ಸರ್ಕಾರವು, ವೃತ್ತಿಶಿಕ್ಷಣ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಇಂಡಿಯನ್ ಸಿಸ್ಟಮ್ಸ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪತಿ (ಆಯುಶ್), ಇಂಜಿನಿಯರಿಂಗ್ / ವಾಸ್ತುಶಿಲ್ಪ ಕೋರ್ಸ್​ಗಳು, ಫಾರ್ಮ್ ಸೈನ್ಸ್ ಅಂದರೆ ಬಿಎಸ್ಸಿ. (ಕೃಷಿ), ಬಿ.ಎಸ್.ಸಿ. (ರೇಷ್ಮೆ ಕೃಷಿ), ಬಿ.ಎಸ್.ಸಿ (ತೋಟಗಾರಿಕೆ), ಬಿ.ಎಸ್.ಸಿ (ಅರಣ್ಯ), ಬಿ.ಎಸ್.ಸಿ. ಬಿ.ಎಸ್.ಕೆ (ಆಹಾರ ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ (ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್), ಅಕ್ರಿ ಬಯೋ ಟೆಕ್, ಬಿಎಚ್ಎಸ್ಸಿ (ಹೋಮ್ ಸೈನ್ಸ್), ಬಿ.ಟೆಕ್ (ಅಗ್ರಿ ಎಂಗ್ಜಿ) ), B.Sc. (ಅಗ್ರಿ ಮಾರ್ಕೆಟಿಂಗ್ & ಕೋ-ಆಪ್), ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸ್​ ಗಳಿಗೆ ಪ್ರಾಧಿಕಾರವು ಸಿಇಟಿ ಪರೀಕ್ಷೆ ನಡೆಸಲಿದೆ.

ಇದನ್ನೂಓದಿ:ರಾಜ್ಯದಲ್ಲಿ ಮುಂದಿನ 5 ದಿನ ಮಳೆ, ಕೆಲವೆಡೆ ಯೆಲ್ಲೋ ಅಲರ್ಟ್​.. ಹವಾಮಾನ ಇಲಾಖೆ ಮುನ್ಸೂಚನೆ

ಕಳೆದ ವಾರವಷ್ಟೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯುಸಿ ಪರೀಕ್ಷೆ ‌ಇತಿಹಾಸದಲ್ಲಿ ಈ ಬಾರಿ ಶೇ.74.67 ರಷ್ಟು ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಕಳೆದ ಬಾರಿಗಿಂತ ಈ ಬಾರಿ ಶೇ.12.79 ರಷ್ಟು ಹೆಚ್ಚಳವಾಗಿರುವುದು ದಾಖಲೆಯಾಗಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಹಾಗೆಯೇ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.