ETV Bharat / state

ಚಡ್ಡಿ ಜಟಾಪಟಿ: ಬಿಜೆಪಿಯಿಂದ ಸಿದ್ದರಾಮಯ್ಯ ಮನೆಗೆ ತೆರಳಿ ಚಡ್ಡಿ ತಲುಪಿಸುವ ಆಂದೋಲನ

author img

By

Published : Jun 7, 2022, 3:02 PM IST

ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ತೆರಳಲಿದ್ದಾರೆ. ಜನರಿಂದ ಸಂಗ್ರಹಿಸಿದ ಚಡ್ಡಿಗಳನ್ನು ಸಿದ್ದರಾಮಯ್ಯ ಅವರಿಗೆ ನೀಡಲಿದ್ದಾರೆ.

Siddaramaiah
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ರಾಜ್ಯ ಎಸ್​​.ಸಿ. ಮೋರ್ಚಾದ ವತಿಯಿಂದ ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ‌ಮನೆಗೆ ತೆರಳಿ ಚಡ್ಡಿ ತಲುಪಿಸುವ ಅಭಿಯಾನ ನಡೆಸಲಾಗುವುದು. ಜನರಿಂದ ಸಂಗ್ರಹಿಸಿದ ಚಡ್ಡಿಗಳನ್ನು ಸಿದ್ದರಾಮಯ್ಯ ಅವರ ಮನೆಗೆ ತಲುಪಿಸುವ ಆಂದೋಲನ ನಡೆಯಲಿದೆ.

ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಬೆಂಗಳೂರಿನ ಗಾಂಧಿ ಭವನದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ತೆರಳಲಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರ್​ಎಸ್​ಎಸ್ ಚಡ್ಡಿ ಸುಡುವ ಹೋರಾಟ ನಡೆಸುವುದಾಗಿ ಘೋಷಿಸಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿಯಿಂದ ಸಿದ್ದರಾಮಯ್ಯ ಮನೆಗೆ ಚಡ್ಡಿ ತಲುಪಿಸುವ ಆಂದೋಲನವನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಇಂದು ಮಧ್ಯಾಹ್ನ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಮನೆಗೆ ತೆರಳಿ ಚಡ್ಡಿಗಳನ್ನು ತಲುಪಿಸುವ ಹೋರಾಟ ನಡೆಸಲಿದ್ದಾರೆ.

ಇದನ್ನೂ ಓದಿ: ಚಡ್ಡಿಯೊಳಗೆ ಏನೂ ಇಲ್ಲ, ಇಬ್ಬರ ಜಗಳದಲ್ಲಿ ಚಡ್ಡಿ ವ್ಯಾಪಾರ ಕುದುರಿದೆಯಷ್ಟೇ: ಕುಮಾರಸ್ವಾಮಿ ವ್ಯಂಗ್ಯ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.