ETV Bharat / state

ಚಾರ್‌ ಧಾಮ್‌ ಯಾತ್ರೆ ಅರ್ಜಿ ಸಲ್ಲಿಕೆ ಜನವರಿ 31ರ ವರೆಗೆ ವಿಸ್ತರಣೆ

author img

By

Published : Dec 30, 2022, 6:18 AM IST

ಚಾರ್‌ ಧಾಮ್‌ ಯಾತ್ರೆ ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆ ಪಡೆದುಕೊಳ್ಳುವುದಕ್ಕೆ ಅವಕಾಶ ನೀಡುವಂತೆ ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಹಲವಾರು ಶಾಸಕರಿಂದ ಸಚಿವರಿಗೆ ಮನವಿ- ಸರಕಾರದ ಸಹಾಯಧನ ಪಡೆಯಲು ಅರ್ಜಿ ಸಲ್ಲಿಕೆ ಅವಧಿ ಜನವರಿ 31, 2023 ರ ವರೆಗೆ ವಿಸ್ತರಣೆ

Minister Sasikala Jolle
ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು:ಚಾರ್‌ಧಾಮ್‌ ಯಾತ್ರೆಯನ್ನು ಕೈಗೊಂಡ ರಾಜ್ಯದ ಯಾತ್ರಾರ್ಥಿಗಳಿಗೆ ನೀಡಲಾಗುವ ಸರ್ಕಾರದ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವೆ ಶಶಿಕಲಾ ಜೊಲ್ಲೆ ಅವರ ಸೂಚನೆಯ ಮೇರೆಗೆ ಜನವರಿ 31, 2023 ರ ವರೆಗೆ ವಿಸ್ತರಿಸಿದೆ.

ಕರ್ನಾಟಕ ರಾಜ್ಯದಿಂದ ಪ್ರಪ್ರಥಮ ಬಾರಿಗೆ ಚಾರ್‌ಧಾಮ್‌ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ 20 ಸಾವಿರದಂತೆ ಸರಕಾರದ ಸಹಾಯಧನವನ್ನು ನೀಡುತ್ತಿದೆ. ಇದಕ್ಕೆ ಡಿಸೆಂಬರ್‌ 1 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಈ ಬಾರಿ ಚಾರ್‌ಧಾಮ್‌ ಯಾತ್ರೆಯನ್ನು ಕೈಗೊಳ್ಳುವ ಸಂದರ್ಭದಲ್ಲಿ ಜನಸಂದಣಿ ಹೆಚ್ಚಾಗಿದ್ದರಿಂದ ಹಾಗೂ ತಾಂತ್ರಿಕ ಕಾರಣಗಳಿಂದ ಯಾತ್ರಾರ್ಥಿಗಳು ಅಗತ್ಯ ದಾಖಲೆ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗಿರಲಿಲ್ಲ.

ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆ ಪಡೆದುಕೊಳ್ಳುವುದಕ್ಕೆ ಅವಕಾಶ ನೀಡುವಂತೆ ಬೆಳಗಾವಿಯ ಅಧಿವೇಶನದಲ್ಲಿ ಹಲವಾರು ಶಾಸಕರು ಸಚಿವರಿಗೆ ಮನವಿ ಮಾಡಿದ್ದರು. ಹೆಚ್ಚಿನ ಜನರು ಅರ್ಜಿ ಸಲ್ಲಿಸಲಿ ಎನ್ನುವ ಉದ್ದೇಶದಿಂದ ಹಾಗೂ ಅಗತ್ಯ ದಾಖಲೆಗಳನ್ನ ಕ್ರೋಢೀಕರಿಸಲು ಅವಕಾಶ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.


ಈಗ ಅರ್ಜಿ ಸಲ್ಲಿಕೆಗೆ ಇದ್ದಂತಹ ಸಮಸ್ಯೆಗಳನ್ನು ನಿವಾರಿಸಲಾಗಿದ್ದು, ಅರ್ಜಿ ಸಲ್ಲಿಕೆಯ ದಿನಾಂಕವನ್ನು ಒಂದು ತಿಂಗಳು ಕಾಲ (ಜನವರಿ 31, 2023) ವಿಸ್ತರಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವೆ ಶಶಿಕಲಾ ಜೊಲ್ಲೆ ಅವರು, ಚಾರ್‌ಧಾಮ್‌ ಯಾತ್ರೆಗೆ ಸಹಾಯಧನ ನೀಡುವುದು ನಮ್ಮ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು.

ಹೆಚ್ಚಿನ ಯಾತ್ರಾರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಲು ಅವಕಾಶ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಜನವರಿ 31,2023 ರ ತನಕ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂಓದಿ: ಪಂಚಮಸಾಲಿ ಸಮಾಜದ ಮೀಸಲಾತಿ ಸ್ಪಷ್ಟವಾಗಿಲ್ಲ: ಜಯಮೃತ್ಯುಂಜಯ ಶ್ರೀ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.