ETV Bharat / state

ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ಕಾಮಗಾರಿ ಪರಿಶೀಲಿಸಿದ ಸಿಎಂ

author img

By

Published : Nov 15, 2021, 10:07 AM IST

200 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಭವನ (Karnataka Bhavan) ನಿರ್ಮಾಣವಾಗುತ್ತಿದೆ. ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಗೊಳಿಸಿ ಕರ್ನಾಟಕ ಭವನ ಲೋಕಾರ್ಪಣೆ ಮಾಡುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಿಎಂ ಸೂಚಿಸಿದರು.

cm-basavaraj-bommai-inspected-tirumala-karnataka-bhavan-work
ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ಕಾಮಗಾರಿ ಪರಿಶೀಲಿಸಿದ ಸಿಎಂ

ಬೆಂಗಳೂರು/ತಿರುಪತಿ: ಆಂಧ್ರಪ್ರದೇಶದ ತಿರುಮಲದಲ್ಲಿ(Tirumala) ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ (Karnataka Bhavan) ಕಟ್ಟಡವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಸೂಚನೆ ನೀಡಿದರು.

ತಿರುಪತಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಇಂದು ತಿರುಮಲದ ವೆಂಕಟೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ನಿರ್ಮಾಣದ ಕಟ್ಟಡ ಕಾಮಗಾರಿ ಪರಿಶೀಲಿಸಿದರು. 200 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಭವನ (Karnataka Bhavan work) ನಿರ್ಮಾಣವಾಗುತ್ತಿದೆ. ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಗೊಳಿಸಿ ಕರ್ನಾಟಕ ಭವನವನ್ನು ಲೋಕಾರ್ಪಣೆ ಮಾಡುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಿಎಂ ಸೂಚಿಸಿದರು.

CM Basavaraj bommai inspected Tirumala Karnataka Bhavan Work
ಕಾಮಗಾರಿ ಪರಿಶೀಲಿಸಿದ ಸಿಎಂ ಬೊಮ್ಮಾಯಿ

ಸಚಿವರಾದ ಡಾ. ಕೆ ಸುಧಾಕರ್ (Misister k sudhakar), ಮುನಿರತ್ನ, ಬಿಡಿಎ ಅಧ್ಯಕ್ಷ ಎಸ್ಆರ್ ವಿಶ್ವನಾಥ್ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಗುಪ್ತ ವಾರ್ತೆ ಇಲಾಖೆಯ ಎಡಿಜಿಪಿ ದಯಾನಂದ್, ಟಿಟಿಡಿ ನಿರ್ದೇಶಕ ಎಂ‌ಎನ್ ಶಶಿಧರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಎಂಎಲ್​ಸಿ ಚುನಾವಣೆ: ಬಿಜೆಪಿ ಟಿಕೆಟ್ ಆಕಾಂಕ್ಷಿ ತನ್ನತ್ತ ಸೆಳೆಯಲು ಮುಂದಾದ ಕಾಂಗ್ರೆಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.