ETV Bharat / state

ಯೋಗಿ ಪದಗ್ರಹಣ: ಒಟ್ಟಿಗೆ ಯುಪಿಗೆ ತೆರಳಿದ ಸಿಎಂ ಬೊಮ್ಮಾಯಿ, ಗೋವಾ ಸಿಎಂ ಸಾವಂತ್

author img

By

Published : Mar 25, 2022, 10:31 AM IST

ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ವಿಮಾನದಲ್ಲಿ ಲಖನೌಗೆ ತೆರಳಿದ್ದಾರೆ.

cm-basavaraj-bommai-leave-for-uttar-pradesh-for-cm-yogi-oath-taking-ceremony
ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಕಾರ್ಯಕ್ರಮ

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ವಿಮಾನದಲ್ಲಿ ಲಖನೌಗೆ ಪ್ರಯಾಣ ಬೆಳೆಸಿದ್ದಾರೆ. ಲಖನೌದ ಅಟಲ್​ ಬಿಹಾರಿ ವಾಜಪೇಯಿ ಏಕತಾ ಕ್ರಿಕೆಟ್ ಮೈದಾನದಲ್ಲಿ ಇಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪದಗ್ರಹಣ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸುವಂತೆ ಯೋಗಿ ಆದಿತ್ಯನಾಥ್ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೆಚ್​​ಎಎಲ್ ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶದ ಲಖನೌಗೆ ತೆರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಆಗಮಿಸಿದ್ದರು. ಅಲ್ಲಿಂದ ನೇರವಾಗಿ ಹೆಚ್ಎಎಲ್ ಏರ್‌ಪೋರ್ಟ್​ಗೆ ತೆರಳಿದ್ದು, ಸಿಎಂ ಬೊಮ್ಮಾಯಿ ಜೊತೆ ವಿಶೇಷ ವಿಮಾನ ಏರಿ ಯುಪಿಗೆ ಪ್ರಯಾಣಿಸಿದ್ದಾರೆ.

ಪ್ರವಾಸಕ್ಕೂ ಮುನ್ನ ಬೆಂಗಳೂರಿನ ಆರ್​​ಟಿ ನಗರದಲ್ಲಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಕಾರ್ಯಕ್ರಮ ಇದೆ‌. ಅದರಲ್ಲಿ‌ ಭಾಗವಹಿಸಲು ಹೋಗುತ್ತಿದ್ದೇನೆ, ಇವತ್ತು ರಾತ್ರಿಯೇ ಕಾರ್ಯಕ್ರಮ ಮುಗಿಸಿ ವಾಪಸ್ ಬರುತ್ತೇನೆ ಎಂದು ತಿಳಿಸಿದರು. ಶಾಲಾ ಪಠ್ಯ ಪರಿಷ್ಕರಣೆ ಬಗ್ಗೆ ಮಾತನಾಡದ ಸಿಎಂ, ಅದರ ಬಗ್ಗೆ ಶಿಕ್ಷಣ ಸಚಿವರು ಮಾಹಿತಿ ನೀಡಲಿದ್ದಾರೆ ಎಂದು ಹೇಳಿ‌ ಹೊರಟರು.

ಹೆಚ್ಎಎಲ್​ಗೆ ಹೊರಟ ಸಿಎಂ ಜೊತೆಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತೆರಳಿದ್ದು, ಪಠ್ಯ ಪರಿಷ್ಕರಣೆ ಕುರಿತ ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ, ಹೆಚ್ಎಎಲ್​ನಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ ಮಾಡಿ, ವಾಪಸ್ ಬಂದ ನಂತರ ಅವರು ಪಠ್ಯ ಪರಿಷ್ಕರಣೆ ಕುರಿತು ಸ್ಪಷ್ಟೀಕರಣ ನೀಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಇಂದು ಉತ್ತರ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಯೋಗಿ ಪ್ರಮಾಣ ವಚನ ಸ್ವೀಕಾರ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.