ETV Bharat / state

ರಮೇಶ್ ಜಾರಕಿಹೊಳಿ, ಈಶ್ವರಪ್ಪರ ಜೊತೆ ಸಂಪರ್ಕದಲ್ಲಿದ್ದೇನೆ: ಸಿಎಂ ಬೊಮ್ಮಾಯಿ

author img

By

Published : Dec 20, 2022, 1:39 PM IST

Updated : Dec 20, 2022, 3:16 PM IST

ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನಕ್ಕೆ ಭಾಗಿಯಾಗದೆ ಇರುವ ವಿಚಾರವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

cm basavraj bommai talk in belgavi
ಬಸವರಾಜ ಬೊಮ್ಮಾಯಿ

ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಬೆಂಗಳೂರು/ಬೆಳಗಾವಿ: ಸಂಪುಟ ಸೇರ್ಪಡೆ ವಿಚಾರವಾಗಿ ಮುನಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರೂ ಕೂಡ ಸಕಾರಾತ್ಮಕವಾಗಿದ್ದಾರೆ. ಮಿಕ್ಕ ವಿಚಾರಗಳನ್ನು ವೈಯಕ್ತಿಕವಾಗಿ ಹೇಳಲಾಗುವುದು. ಕೆಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.

ವರದಿ ಬಂದ ಬಳಿಕ ಕ್ರಮ: ಮೀಸಲಾತಿ ಸಂಬಂಧ ತುರ್ತಾಗಿ ವರದಿ ಮಂಡಿಸುವಂತೆ ಸರ್ಕಾರ, ಕಾಯಂ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿದೆ. ಆ ವರದಿ ಮಂಡಿಸಿದ ತಕ್ಷಣ ಕಾನೂನಾತ್ಮಕ ಏನು ಮಾಡಬಹುದೋ ಅದನ್ನು ಮಾಡುತ್ತೇವೆ ಎಂದು ತಿಳಿಸಿದರು.

ಡಿಕೆಶಿಗೂ ತಿಳಿದ ವಿಚಾರ: ಇದೇ ವೇಳೆ ಸಿಬಿಐ ದಾಳಿ ಬಗ್ಗೆ ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೆ ಉತ್ತರಿಸುತ್ತಾ ಸಂವಿಧಾನಾತ್ಮಕವಾಗಿ ಸ್ವಾಯತ್ತವಾಗಿರುವ ಸಂಸ್ಥೆ. ಅವರ ಬಳಿ ಇರುವ ಪ್ರಕರಣ ಸಂಬಂಧ ಅವರು ಕ್ರಮ ಕೈಗೊಳ್ಳುತ್ತಾರೆ. ಇದು ಡಿ.ಕೆ.ಶಿವಕುಮಾರ್ ಅವರಿಗೂ ತಿಳಿದಿರುವ ವಿಚಾರ ಎಂದರು.

ಸರ್ಕಾರಕ್ಕೆ ಸಂಬಂಧವಿಲ್ಲ: ಹಲಾಲ್ ಕಟ್ ನಿಷೇಧ ಸಂಬಂಧ ಖಾಸಗಿ ಬಿಲ್ ಮಂಡಿಸುವ ಬಗ್ಗೆ ಪ್ರತಿಕ್ರಿಯಿಸುತ್ತಾ, ಹಲಾಲ್ ವಿಷಯಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದರು. ಜಗತ್ತು ಇದರಿಂದ ಮುಂದೆ ಸಾಗಿದೆ, ಭಾರತವೂ ಇದರಿಂದ ಮುಂದೆ ಸಾಗಿದೆ ಎಂದರು.

ಇದನ್ನೂ ಓದಿ: ಸಾವರ್ಕರ್ ವಿಷಯದಲ್ಲಿ 75 ವರ್ಷದ ಬಳಿಕ ಕಾಂಗ್ರೆಸ್​ಗೆ ಜ್ಞಾನೋದಯವಾಗಿದೆ: ಸಚಿವ ಸುನಿಲ್ ಕುಮಾರ್

Last Updated : Dec 20, 2022, 3:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.