ETV Bharat / state

ಪದಕ‌ ಗೆಲ್ಲದಿದ್ದರೂ ಭಾರತೀಯರ ಮನಸ್ಸನ್ನು ಮಹಿಳಾ ಹಾಕಿ ತಂಡ ಗೆದ್ದಿದೆ : ಸಿಎಂ‌ ಶ್ಲಾಘನೆ

author img

By

Published : Aug 13, 2021, 10:13 PM IST

indias-womens-hockey-team-coach-ankita-suresh
ಭಾರತ ಮಹಿಳಾ ಹಾಕಿ ತಂಡ

ಹಲವಾರು ವರ್ಷಗಳ ಬಳಿಕ ಓಲಂಪಿಕ್ಸ್​ನಲ್ಲಿ ಮಹಿಳಾ ತಂಡ ಸೆಮಿಫೈನಲ್ ಹಂತಕ್ಕೆ ತಲುಪಿ ಅಮೋಘ ಸಾಧನೆ ಮಾಡಿದೆ. ಒಟ್ಟು ಮೂರು ಜನ ಕೋಚ್​ಗಳ ಪೈಕಿ ಅಂಕಿತಾ ಒಬ್ಬರು. ಕನ್ನಡಿಗರು ಎಂಬುದು ಶ್ಲಾಘನೀಯ ಮತ್ತು ಹೆಮ್ಮೆ ಎಂದು ಅಭಿಪ್ರಾಯಪಟ್ಟರು ಮುಖ್ಯಮಂತ್ರಿಗಳು..

ಬೆಂಗಳೂರು : ಟೋಕಿಯೊ ಒಲಂಪಿಕ್ಸ್ ಟೂರ್ನಿಯಲ್ಲಿ ಭಾರತ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿದೆ. ಪದಕ‌ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಗೆದ್ದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.

India's women's hockey team coach Ankita Suresh
ಭಾರತೀಯ ಮಹಿಳಾ ಹಾಕಿ ತಂಡದ ಕೋಚ್​​ಗೆ ಸಿಎಂ ಸನ್ಮಾನ

ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಲ್ಲಿ ಒಬ್ಬರಾದ ಕೋಚ್ ಕನ್ನಡತಿ ಅಂಕಿತಾರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಅಂಕಿತಾ ಮಡಿಕೇರಿ ಮೂಲದವರು. ಇವರ ತರಬೇತಿಯಲ್ಲಿ ಪಳಗಿದ ದೇಶದ ಮಹಿಳಾ ಹಾಕಿ ತಂಡ ಬಲಿಷ್ಠವಾಗಿದೆ. ಕಳೆದ ಎರಡು ವರ್ಷಗಳಿಂದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಅಂಕಿತಾ ತರಬೇತಿ ನೀಡುತ್ತಿದ್ದಾರೆ.

ಹಲವಾರು ವರ್ಷಗಳ ಬಳಿಕ ಓಲಂಪಿಕ್ಸ್​ನಲ್ಲಿ ಮಹಿಳಾ ತಂಡ ಸೆಮಿಫೈನಲ್ ಹಂತಕ್ಕೆ ತಲುಪಿ ಅಮೋಘ ಸಾಧನೆ ಮಾಡಿದೆ. ಒಟ್ಟು ಮೂರು ಜನ ಕೋಚ್​ಗಳ ಪೈಕಿ ಅಂಕಿತಾ ಒಬ್ಬರು. ಕನ್ನಡಿಗರು ಎಂಬುದು ಶ್ಲಾಘನೀಯ ಮತ್ತು ಹೆಮ್ಮೆ ಎಂದು ಅಭಿಪ್ರಾಯಪಟ್ಟರು ಮುಖ್ಯಮಂತ್ರಿಗಳು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.