ETV Bharat / state

ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ- ಸಿಎಂ

author img

By ETV Bharat Karnataka Team

Published : Dec 11, 2023, 6:16 PM IST

Updated : Dec 12, 2023, 3:53 PM IST

ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಪ್ರಕರಣ ಸಂಬಂಧ ಎಕ್ಸ್​​ನಲ್ಲಿ ಪೋಸ್ಟ್​ ಮಾಡಿರುವ ಸಿಎಂ, ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮ ಸರ್ಕಾರದ್ದು ಎಂದು ಸಿಎಂ ಹೇಳಿದ್ದಾರೆ. ಇನ್ನೊಂದೆಡೆ ಗೃಹಸಚಿವ ಜಿ.ಪರಮೇಶ್ವರ್ ಅವರು​ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಮಹಿಳೆಯ ಆರೋಗ್ಯ ವಿಚಾರಿಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಚಿವರು, 24 ವರ್ಷದ ಯುವಕ ಯುವತಿಯನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾನೆ. ಹುಡುಗ ಹುಡುಗಿ ಪ್ರೀತಿಸುತ್ತಿದ್ದರು ಎನ್ನುವ ಮಾಹಿತಿ ಇದೆ. ಇದರಿಂದ ಯುವಕನ ತಾಯಿ ಮೇಲೆ ಯುವತಿ ಕುಟುಂಬದವರು ಹಲ್ಲೆ ಮಾಡಿದ್ದಾರೆ. ಸುಮಾರು 8 ರಿಂದ 10 ಜನ ಹಲ್ಲೆ ಮಾಡಿ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿದ್ದಾರೆ. ಸದ್ಯ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪೊಲೀಸರು 7 ಜನರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳನ್ನು ಬಂಧಿಸಬೇಕಿದೆ. ಅವರನ್ನೂ ಸಹ ಪೊಲೀಸರು ಬಂಧನ ಮಾಡುತ್ತಾರೆ ಎಂದು ಗೃಹ ಸಚಿವರು ಇದೇ ವೇಳೆ ಹೇಳಿದರು.

  • ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.

    ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ…

    — CM of Karnataka (@CMofKarnataka) December 11, 2023 " class="align-text-top noRightClick twitterSection" data=" ">

ಓಡಿ ಹೋಗಿರುವ ಯುವಕ ಯುವತಿಯನ್ನು ಪೊಲೀಸರು ಹುಡುಕಾಡುತ್ತಿದ್ದು, ಇಂತಹ ಘಟನೆಗಳು ಆಗಬಾರದು, ಪೊಲೀಸರಿಗೆ ದೂರು ನೀಡಿದ್ದರೆ ಪೊಲೀಸರೇ ಕ್ರಮ ತೆಗೆದುಕೊಳ್ಳುತ್ತಿದ್ದರು. ಅಥವಾ ಊರಲ್ಲಿ ಹಿರಿಯರು ಮಾತನಾಡಿಕೊಂಡು ಬಗೆಹರಿಸಬಹದಿತ್ತು. ಆದರೆ, ಇದೊಂದು ಅಮಾನವೀಯ ಘಟನೆ ಎಂದು ಜಿ.ಪರಮೇಶ್ವರ್ ತಿಳಿಸಿದರು.

ಆಸ್ಪತ್ರೆಯಿಂದ ನೇರವಾಗಿ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ಜಿ.ಪರಮೇಶ್ವರ್ ಪರಿಶೀಲನೆ ನಡೆಸಿದರು. ಈ ವೇಳೆ ಯುವತಿಯ ಜೊತೆ ಓಡಿ ಹೋಗಿರುವ ಯುವಕನ ಅಜ್ಜಿ ಘಟನೆಯ ಬಗ್ಗೆ ಪರಮೇಶ್ವರ್​ ಅವರಿಗೆ ಮಾಹಿತಿ ನೀಡಿದರು. ಈ ಸಂದರ್ಭ ಸಚಿವರ ಕಾಲಿಗೆ ಬಿದ್ದು ಅಜ್ಜಿ ಕಣ್ಣೀರು ಹಾಕಿ, ಮೈಮೇಲೆ ಇರುವ ಬಂಗಾರವನ್ನು ತೆಗೆದುಕೊಂಡು ಹೋಗಿದ್ದಾರೆ. ಬೆತ್ತಲೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಅಳಲುತೊಡಿಕೊಂಡರು. ಅಜ್ಜಿಯನ್ನು ಸಚಿವರು ಸಮಾಧಾನಪಡಿಸಲು ಯತ್ನಿಸಿದರು. ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಇದನ್ನೂ ಓದಿ : ಮಗನ 'ಪ್ರೀತಿ', ತಾಯಿಗೆ ಶಿಕ್ಷೆ; ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ

Last Updated :Dec 12, 2023, 3:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.