ETV Bharat / state

ನಾಡ ದೇವಿ ಭುವನೇಶ್ವರಿ ದೇವಿಯ ಹೆಸರಿನಲ್ಲಿ ಭವನ ನಿರ್ಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ

author img

By ETV Bharat Karnataka Team

Published : Nov 1, 2023, 10:56 PM IST

Updated : Nov 2, 2023, 8:17 AM IST

68ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ ರವೀಂದ್ರ ಕಲಾಕ್ಷೇತ್ರದಲ್ಲಿ ವಿವಿಧ ಕ್ಷೇತ್ರದ 68 ಜನ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

Etv Bharatcm-siddaramaiah-speech-in-68th-kannada-rajyotsava-award-ceremony
ನಾಡ ದೇವಿ ಭುವನೇಶ್ವರಿ ದೇವಿಯ ಹೆಸರಿನಲ್ಲಿ ಭವನವನ್ನು ನಿರ್ಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು: 68ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಈ ಸಲ ವಿವಿಧ ಕ್ಷೇತ್ರದ 68 ಜನ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜ್ಯೋತ್ಸವ ಪ್ರಶಸ್ತಿ ವಿಜೇತ ನಿಜಗುಣಾನಂದ ಸ್ವಾಮೀಜಿ ಮಾತನಾಡಿ, ರಾಜ್ಯೋತ್ಸವದ ಪ್ರಶಸ್ತಿ ಸಿಕ್ಕಿದ್ದಕ್ಕೆ ತುಂಬಾ ಸಂತಸವಾಗಿದೆ. ಇದು ಮಾತನಾಡುವ ವೇದಿಕೆ ಅಲ್ಲ, ಸಾಧಕರ ವೇದಿಕೆ. ಇದು ಪಾರದರ್ಶಕವಾಗಿ ಕೊಟ್ಟ ಪ್ರಶಸ್ತಿಯಾಗಿದೆ, ಇದು ಜಾತಿಗೆ, ದುಡ್ಡಿಗೆ ಸಿಕ್ಕ ಪ್ರಶಸ್ತಿ ಅಲ್ಲ. ಇದು ಸಾಧನೆ ಮಾಡಿದ ಮಹನೀಯರಿಗೆ ಸಂದ ಪ್ರಶಸ್ತಿ. ನಾನು ಸ್ವಾಮೀಜಿ ಆಗಿ ಪ್ರಶಸ್ತಿ ತೆಗೆದುಕೊಂಡಿಲ್ಲ, ಸಮಾಜ ಸೇವಕನಾಗಿ ಸ್ವೀಕರಿಸಿದ್ದೇನೆ. ಎಲ್ಲಾ ಸಾಧಕರ ಪರವಾಗಿ ಮಾತನಾಡುವುದಕ್ಕೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದರು.

CM Siddaramaiah speech in 68th Kannada Rajyotsava Award Ceremony
68ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಭಾಗಿ

ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, 68 ಜನ ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿದ್ದೇವೆ. 10 ಸಂಘ ಸಂಸ್ಥೆಗಳಿಗೂ ಪ್ರಶಸ್ತಿ ನೀಡಿದ್ದೇವೆ. ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರೈಸಿದೆ. ಹೀಗಾಗಿ ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿದ್ದೇವೆ. ಕರ್ನಾಟಕ ರಾಜ್ಯ 1956 ನವೆಂಬರ್ ಏಕೀಕರಣ ಆಯ್ತು. ಆ ಸಂದರ್ಭದಲ್ಲಿ ಮೈಸೂರು ರಾಜ್ಯ ಅಂತ ಹೆಸರುವಾಸಿಯಾಯಿತು. ದೇವರಾಜ್ ಅರಸ್ ಅವರು ಮೈಸೂರು ರಾಜ್ಯದ ಬದಲಿಗೆ, ಕರ್ನಾಟಕ ರಾಜ್ಯ ಎಂದು ಮರುನಾಮಕರಣ ಮಾಡಿದ್ದಾರೆ ಎಂದರು.

CM Siddaramaiah speech in 68th Kannada Rajyotsava Award Ceremony
ರಾಜ್ಯೋತ್ಸವದಲ್ಲಿ 68 ಜನ ಸಾಧಕರಿಗೆ ಪ್ರಶಸ್ತಿ ಪ್ರದಾನ

ಭಾಷೆ, ನೆಲ, ಜಲ, ಪರಂಪರೆ, ಅಭಿವೃದ್ಧಿ, ವಿಚಾರಧಾರೆಯನ್ನು ರೂಪಿಸುವಂತಹ ಕೆಲಸವನ್ನು ಈ ತಿಂಗಳು ಮಾಡುತ್ತೇವೆ. ಹಂಪಿಯಿಂದ ಈ ಕಾರ್ಯಕ್ರಮ ಆರಂಭವಾಗಲಿದೆ. ಕರ್ನಾಟಕ ಸಂಭ್ರಮ 50 ಎನ್ನುವ ಹೆಸರಿನಲ್ಲಿ ಕಾರ್ಯಕ್ರಮ ಮಾಡಲಾಗುತ್ತದೆ. ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎನ್ನುವ ಘೋಷಾವಾಕ್ಯದೊಂದಿದೆ ಈ ತಿಂಗಳು ಕಾರ್ಯಕ್ರಮ ನಡೆಯಲಿದೆ. 95% ಆಯ್ಕೆಯ ಸಮಿತಿಯವರು ಶಿಫಾರಸ್ಸು ಮಾಡಿದ ಹೆಸರುಗಳನ್ನೆ, ಇಂದು ಪ್ರಶಸ್ತಿಗೆ ಆಯ್ಕೆ ಮಾಡಿಕೊಂಡಿದ್ದೇವೆ. ನಾಡ ದೇವಿ ಭುವನೇಶ್ವರಿ ದೇವಿಯ ಹೆಸರಿನಲ್ಲಿ ಭವನವನ್ನು ನಿರ್ಮಿಸುತ್ತೇವೆ ಎಂದು ತಿಳಿಸಿದರು.

CM Siddaramaiah speech in 68th Kannada Rajyotsava Award Ceremony
ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಸಾಧಕರು

ಬಸವಣ್ಣನನ್ನು ರಾಜ್ಯದ ಸಾಂಸ್ಕೃತಿಕ ನಾಯಕನ್ನಾಗಿ ಘೋಷಣೆ ಕುರಿತು ಚರ್ಚೆ: ಹನ್ನರಡನೇ ಶತಮಾನದಲ್ಲಿ ಸಮಾನತೆಗಾಗಿ ಶ್ರಮಿಸಿದ ಬಸವೇಶ್ವರರನ್ನು ರಾಜ್ಯದ ಸಾಂಸ್ಕೃತಿಕ ನಾಯಕನ್ನಾಗಿ ಘೋಷಣೆ ಮಾಡುವುದು ಹಾಗೂ ಶಾಲಾ - ಕಾಲೇಜುಗಳಲ್ಲಿ ವಚನ ಸಂಸ್ಕೃತಿ ಜಾರಿ ಮಾಡುವ ಸಂಬಂಧ ಸರ್ಕಾರ ಗಂಭೀರವಾಗಿ ಚರ್ಚೆ ನಡೆಸಿದೆ ಎಂದು ಹೇಳಿದರು.

CM Siddaramaiah speech in 68th Kannada Rajyotsava Award Ceremony
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಇಸ್ರೋ ಅಧ್ಯಕ್ಷ ಸೋಮನಾಥ್​

ಕಾರ್ಯಕ್ರಮದ ಹಿನ್ನೆಲೆಯಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾತಂಡಗಳಿಂದ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಡೊಳ್ಳು ಕುಣಿತ, ಕಂಸಾಳೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಮ್ರಕಗಳನ್ನೂ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೂ ಮುನ್ನ ಪ್ರಶಸ್ತಿ ಪಡೆಯಲಿರುವ ಸಾಧಕರನ್ನು ಬಸ್​​ಗಳಲ್ಲಿ ವಿಧಾನಸೌಧಕ್ಕೆ ಕರೆತರಲಾಯಿತು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಧಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಇತರ ಗಣ್ಯರಿಗೆ ಚಹಾ ಕೂಟ ಏರ್ಪಡಿಸಿದ್ದರು.

CM Siddaramaiah speech in 68th Kannada Rajyotsava Award Ceremony
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

CM Siddaramaiah speech in 68th Kannada Rajyotsava Award Ceremony
ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಇದನ್ನೂ ಓದಿ: ಮೈಗೆ ಹಳದಿ, ಕೆಂಪು ಬಣ್ಣ ಬಳಿದುಕೊಂಡು ರಾಜ್ಯೋತ್ಸವ ಆಚರಿಸಿದ ದಾವಣಗೆರೆಯ ರಕ್ತದಾನಿ: ವಿಡಿಯೋ

Last Updated :Nov 2, 2023, 8:17 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.