ಮಲೆಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ : ಸಿಎಂ ಬಸವರಾಜ ಬೊಮ್ಮಾಯಿ

author img

By

Published : Sep 22, 2021, 6:53 PM IST

ಸಿಎಂ ಬಸವರಾಜ ಬೊಮ್ಮಾಯಿ

ಹರಕೆ ಹೊತ್ತ ಮಂದಿ ಕಾಲ್ನಡಿಗೆಯಲ್ಲಿ ಬೆಟ್ಟಕ್ಕೆ ಬಂದು ತಮ್ಮ ಹರಕೆ ಪೂರೈಸಿಕೊಳ್ಳುವ ಪದ್ದತಿ ನೂರಾರು ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಈ ನಿಟ್ಟಿನಲ್ಲಿ ಬೆಟ್ಟದಲ್ಲಿ ಪ್ರಾಧಿಕಾರ ರಚಿಸಿ, ಅಭಿವೃದ್ಧಿ ಕಾರ್ಯಗಳನ್ನು ಹಾಗೂ ಬಹಳಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರ್ಕಾರ ಈ ನಿಟ್ಟಿನಲ್ಲಿ ಎಲ್ಲ ರೀತಿಯ ನೆರವು, ಸಹಕಾರ ನೀಡಲು ಸದಾ ಸಿದ್ಧವಿದೆ..

ಬೆಂಗಳೂರು : ದಕ್ಷಿಣ ಕರ್ನಾಟಕದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆಮಹದೇಶ್ವರದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಮಲೆಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಮಲೆಮಹದೇಶ್ವರ ದಕ್ಷಿಣ ಕರ್ನಾಟಕದ ಪ್ರಸಿದ್ಧ ಕ್ಷೇತ್ರ, ಹಳೆ ಮೈಸೂರು ಭಾಗದ ಜನರು ಹೆಚ್ಚಾಗಿ ನಡೆದುಕೊಳ್ಳುವ ದೇವಸ್ಥಾನ. ಈ ಕ್ಷೇತ್ರದ ಅಭಿವೃದ್ಧಿಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಕೊಡುಗೆ ದೊಡ್ಡದಿದೆ ಎಂದರು.

ಹಿಂದೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿ.ಸೋಮಣ್ಣ ಹಾಗೂ ಸುರೇಶ್‌ಕುಮಾರ್ ಅವರು ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮಲೆಮಹದೇಶ್ವರ ಬೆಟ್ಟದ ಅಭಿವೃದ್ಧಿಗೆ ಈಗಾಗಲೇ ಪ್ರಾಧಿಕಾರ ಯೋಜನೆ ರೂಪಿಸಿರುವುದನ್ನು ಜಾರಿಗೊಳಿಸಲು ಎಲ್ಲ ರೀತಿಯ ಕ್ರಮಕೈಗೊಳ್ಳಲಾಗುವುದು. ಮುಂದಿನ ಐದು ವರ್ಷದಲ್ಲಿ ಮಲೆಮಹದೇಶ್ವರ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮಲೆಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಮಲೆಮಹದೇಶ್ವರ ಬೆಟ್ಟಕ್ಕೆ ತನ್ನದೆ ಆದ ಭವ್ಯ ಪರಂಪರೆ ಹಾಗೂ ಇತಿಹಾಸವಿದೆ. ಮಲೆಮಹದೇಶ್ವರರ ಬಗೆಗೆ ಇರುವ ಜಾನಪದ ಕಾವ್ಯಗಳು ನೂರಾರು. ಮಲೆ ಮಾದಪ್ಪನ ಕಂಡರೆ ಭಕ್ತರಿಗೆ ಸಾಕಷ್ಟು ಭಯ-ಭಕ್ತಿ ಇದೆ.

ಹರಕೆ ಹೊತ್ತ ಮಂದಿ ಕಾಲ್ನಡಿಗೆಯಲ್ಲಿ ಬೆಟ್ಟಕ್ಕೆ ಬಂದು ತಮ್ಮ ಹರಕೆ ಪೂರೈಸಿಕೊಳ್ಳುವ ಪದ್ದತಿ ನೂರಾರು ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಈ ನಿಟ್ಟಿನಲ್ಲಿ ಬೆಟ್ಟದಲ್ಲಿ ಪ್ರಾಧಿಕಾರ ರಚಿಸಿ, ಅಭಿವೃದ್ಧಿ ಕಾರ್ಯಗಳನ್ನು ಹಾಗೂ ಬಹಳಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರ್ಕಾರ ಈ ನಿಟ್ಟಿನಲ್ಲಿ ಎಲ್ಲ ರೀತಿಯ ನೆರವು, ಸಹಕಾರ ನೀಡಲು ಸದಾ ಸಿದ್ಧವಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಲೆಮಹದೇಶ್ವರ ಬೆಟ್ಟದಲ್ಲಿ 20 ಎಕರೆ ಪ್ರದೇಶದಲ್ಲಿ 100 ಅಡಿ ಎತ್ತರದ ಮಾದಪ್ಪನ ಪ್ರತಿಮೆ ನಿರ್ಮಾಣ ಕಾಮಗಾರಿ ಪ್ರಗತಿ ಕುರಿತು ಚರ್ಚಿಸಲಾಯಿತು. ಮಲೆಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಯೋಜನೆ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.