ETV Bharat / state

ಪಿ ವಿ ನರಸಿಂಹ ರಾವ್ ಅವರೊಂದಿಗೆ ಮನಮೋಹನ್ ಸಿಂಗ್​ಗೂ ಭಾರತ ರತ್ನ ನೀಡಿ: ವೀರಪ್ಪ ಮೊಯ್ಲಿ

author img

By

Published : Sep 9, 2020, 4:01 PM IST

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಭಾರತ ರತ್ನ ಪ್ರಶಸ್ತಿ ಪಡೆಯಲು ಪಿ ವಿ ನರಸಿಂಹ ರಾವ್ ಅವರಷ್ಟೇ ಅರ್ಹರು ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.

singh and rao
singh and rao

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾರತೀಯ ರತ್ನ ಪ್ರಶಸ್ತಿ ಪಡೆಯಲು ಅರ್ಹರಾಗಿದ್ದಾರೆ. ಹೀಗಾಗಿ ಪಿ ವಿ ನರಸಿಂಹ ರಾವ್ ಅವರೊಂದಿಗೆ ಮನಮೋಹನ್ ಸಿಂಗ್ ಅವರಿಗೂ ಭಾರತ ರತ್ನ ನೀಡಿ ಗೌರವಿಸಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಪಿ ವಿ ನರಸಿಂಹ ರಾವ್ ಅವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಮರಣೋತ್ತರವಾಗಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ 'ಭಾರತ ರತ್ನ' ನೀಡುವಂತೆ ಕೇಂದ್ರವನ್ನು ಒತ್ತಾಯಿಸಿ ತೆಲಂಗಾಣ ವಿಧಾನಸಭೆ ನಿರ್ಣಯವನ್ನು ಅಂಗೀಕರಿಸಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಭಾರತ ರತ್ನ ಪ್ರಶಸ್ತಿ ಪಡೆಯಲು ಪಿ ವಿ ನರಸಿಂಹ ರಾವ್ ಅವರಷ್ಟೇ ಅರ್ಹರು ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.

"ಈ ಮನ್ನಣೆ ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಇಬ್ಬರಿಗೂ ಸಿಗಬೇಕು. ಇಬ್ಬರಿಗೂ ಭಾರತ ರತ್ನ ಪ್ರಶಸ್ತಿ ನೀಡುವುದು ಸೂಕ್ತವಾಗಿದೆ" ಎಂದು ಅವರು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.