ETV Bharat / state

ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ: ಮೊದಲು ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಕಾಂಗ್ರೆಸ್​ ಕ್ಯಾಂಪೇನ್​

author img

By

Published : Nov 15, 2022, 12:45 PM IST

Updated : Nov 15, 2022, 1:33 PM IST

ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ: ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್​ ಕ್ಯಾಂಪೇನ್​
Congress campaign against BJP in social media against painting of classrooms in saffron colour

ರಾಜ್ಯದೆಲ್ಲೆಡೆ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಶೌಚಾಲಯವಿಲ್ಲದೇ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ಸಿಎಂ ಅಂಕಲ್​, ಶಾಲೆಗೆ ಕೇಸರಿ ಬಣ್ಣ ಬಳಿಯುವ ಮೊದಲು ಶೌಚಾಲಯ ನಿರ್ಮಿಸಿ, ಶುದ್ಧ ಕುಡಿಯುವ ನೀರು ಮತ್ತು ಸೌಲಭ್ಯಗಳ ವ್ಯವಸ್ಥೆ ಮಾಡಿ. ಈ ಮೂಲಕ ಮಕ್ಕಳನ್ನು ಸರ್ಕಾರಿ ಶಾಲೆಯತ್ತ ಸೆಳೆಯಿರಿ ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿದೆ.

ಬೆಂಗಳೂರು: ರಾಜ್ಯದಲ್ಲಿ 'ವಿವೇಕ ಯೋಜನೆ' ಅಡಿ ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯಲು ಮುಂದಾಗಿರುವ ರಾಜ್ಯ ಸರ್ಕಾರದ ಯೋಜನೆ ವಿರುದ್ಧ ಈಗಾಗಲೇ ಕಾಂಗ್ರೆಸ್​​ ವಾಗ್ದಾಳಿ ನಡೆಸಿದೆ. ಈ ಬೆನ್ನಲ್ಲೇ ಇದೀಗ ಈ ಯೋಜನೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹೊಸ ಹೋರಾಟಕ್ಕೆ ಮುಂದಾಗಿದೆ.

'ಸಿಎಂ ಅಂಕಲ್'​ ಹ್ಯಾಷ್​ ಟ್ಯಾಗ್​ ಅಡಿ ಕಾಂಗ್ರೆಸ್​ ಕ್ಯಾಂಪೇನ್​ ಮುಂದಾಗಿದ್ದು, ಶಾಲಾ ಕೊಠಡಿಗೆ ಬಣ್ಣ ಬಳಿಯುವ ಬದಲು ಮೊದಲು ಶೌಚಾಲಯ ನಿರ್ಮಿಸಿ ಎಂದು ಸಿಎಂ ಬಸವರಾಜ ಬೊಮ್ಮಯಿ ಅವರಿಗೆ ಮನವಿ ಮಾಡಿದೆ. ಈ ಹೋರಾಟದುದ್ದಕ್ಕೂ ಕಾಂಗ್ರೆಸ್​​, ಶಾಲಾ ಮಕ್ಕಳ ಪರವಾಗಿ ಮುಖ್ಯಮಂತ್ರಿಗಳಿಗೆ ಪ್ರಶ್ನೆಗಳನ್ನು ಮಾಡಲಿದೆ.

ರಾಜ್ಯದೆಲ್ಲೆಡೆ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಶೌಚಾಲಯವಿಲ್ಲದೇ ಮಕ್ಕಳು ತೊಂದರೆ ಅನುಭಿಸುತ್ತಿದ್ದಾರೆ. ಸಿಎಂ ಅಂಕಲ್​, ಶಾಲೆಗೆ ಕೇಸರಿ ಬಣ್ಣ ಬಳಿಯುವ ಮೊದಲು ಶೌಚಾಲಯ ನಿರ್ಮಿಸಿ, ಶುದ್ಧ ಕುಡಿಯುವ ನೀರು ಮತ್ತು ಸೌಲಭ್ಯಗಳ ವ್ಯವಸ್ಥೆ ಮಾಡಿ. ಈ ಮೂಲಕ ಮಕ್ಕಳನ್ನು ಸರ್ಕಾರಿ ಶಾಲೆಯತ್ತ ಸೆಳೆಯಿರಿ ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿದೆ.

ದೇಶದಲ್ಲಿ ಕೈಗಾರಿಕಾ ಮತ್ತು ವೈಜ್ಞಾನಿಕ ಕ್ರಾಂತಿಗೆ ಕಾರಣರಾದ ಸ್ವಾಮಿ ವಿವೇಕನಾಂದ ಹೆಸರಿನಲ್ಲಿ ಸರ್ಕಾರ ಯೋಜನೆಯನ್ನು ಕಾರ್ಯರೂಪಕ್ಕೆ ತರುತ್ತಿದೆ. ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಕಾರ್ಯಕ್ರಮ ನಡೆಸುವಂತೆ ಕೋರಿದೆ.

  • ಶಾಲೆಗಳಿಗೆ ಕೇಸರಿ ಬಣ್ಣ ಬಳಿಯಲು ವಿವೇಕಾನಂದರ ನೆಪ ಹೇಳುವ ಸರ್ಕಾರ ವಿವೇಕಾನಂದರ ನೈಜ ತತ್ವಗಳನ್ನು ಜಾರಿಗೊಳಿಸಲು ಮುಂದಾಗುತ್ತಿಲ್ಲವೇಕೆ?

    ಜೇಮ್‌ಶೇಟ್ ಜಿ ಟಾಟಾ ಅವರ ಮೂಲಕ ಭಾರತದ ಕೈಗಾರಿಕೆ & ವೈಜ್ಞಾನಿಕ ಕ್ರಾಂತಿಗೆ ವಿವೇಕಾನಂದರು ಕಾರಣರಾಗಿದ್ದರು.#ಸಿಎಂಅಂಕಲ್
    ಮಕ್ಕಳಲ್ಲಿ ವೈಜ್ಞಾನಿಕ ಮನಭಾವ ಮೂಡಿಸುವಲ್ಲಿ ತಾವು ಕೆಲಸ ಮಾಡ್ತಿಲ್ಲವೇಕೆ? pic.twitter.com/ZpsNTiM9wI

    — Karnataka Congress (@INCKarnataka) November 14, 2022 " class="align-text-top noRightClick twitterSection" data=" ">

ಮಕ್ಕಳಿಗೆ ಉತ್ತಮ ಕಲಿಕೆ ಇಲ್ಲ, ಮಧ್ಯಾಹ್ನದ ಊಟ ಕೂಡ ಸರಿಯಾಗಿ ಸಿಗುತ್ತಿಲ್ಲ. ಈ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತಿರಾ? ಅಪೌಷ್ಠಿಕ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆ ಸರಿಯಾಗಿ ಅನುಷ್ಠಾನ ಆಗುತ್ತಿಲ್ಲ. ಮೊಟ್ಟೆ ವಿತರಣೆ ಬಗ್ಗೆ ಕ್ರಮ ಕೈಗೊಳ್ಳಿ, ಮೊಟ್ಟೆ ಖರೀದಿಯಲ್ಲೂ ಭ್ರಷ್ಟಾಚಾರಕ್ಕೆ ಅವಕಾಶ ನೀಡಬೇಡಿ ಎಂದು ಸರ್ಕಾರವನ್ನು ಟೀಕಿಸಿದೆ.

ರಾಜ್ಯ ಬಿಜೆಪಿ ಸರ್ಕಾರ ವಿವೇಕ ಯೋಜನೆ ಅಡಿ ರಾಜ್ಯದ 8,100 ಶಾಲಾ ಕೊಠಡಿಗೆ ಕೇಸರಿ ಬಣ್ಣ ಬಳಿಯಲು ಮುಂದಾಗಿದೆ. ಇದರ ಜೊತೆಗೆ ಸರ್ಕಾರ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಕ್ಲಾಸ್​ 11, 12ನೇ ತರಗತಿ ಮಕ್ಕಳಿಗೆ ಧ್ಯಾನದ ಕ್ಲಾಸ್​ ಆರಂಭಿಸಲು ಮುಂದಾಗಿದೆ.

ಇದನ್ನೂ ಓದಿ: ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವ ಸರ್ಕಾರದ ಆಶಯಕ್ಕೆ ಕಾಂಗ್ರೆಸ್ ನಾಯಕರ ಆಕ್ರೋಶ

Last Updated :Nov 15, 2022, 1:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.