ETV Bharat / state

ಚುನಾವಣೆಗೂ ಮುನ್ನ ಸಿಎಂ ಘೋಷಣೆ ಮಾಡುವ ಸಂಪ್ರದಾಯ ಕಾಂಗ್ರೆಸ್​ನಲ್ಲಿಲ್ಲ: ಬಿ.ಎಂ.ಪಾಟೀಲ್

author img

By

Published : Mar 19, 2022, 2:26 PM IST

ಕಾಂಗ್ರೆಸ್​ನಲ್ಲಿ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡುವ ಸಂಪ್ರದಾಯವಿಲ್ಲ. ಪಂಚ ರಾಜ್ಯಗಳ ಚುನಾವಣೆಯಲ್ಲಿ ಅನಿವಾರ್ಯವಾದ ಕಾರಣ ಪಂಜಾಬ್​ನಲ್ಲಿ ಮಾತ್ರ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದ್ರು. ಕರ್ನಾಟಕದಲ್ಲಿ ಆ ಸನ್ನಿವೇಶ ಇಲ್ಲ ಎಂದು ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಬಿ.ಎಂ.ಪಾಟೀಲ್
ಬಿ.ಎಂ.ಪಾಟೀಲ್

ಬೆಂಗಳೂರು: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆಲ್ಲುವುದು ಖಚಿತ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ದೊಡ್ಡ ಸವಾಲು ನಮ್ಮ ಮುಂದೆ ಇದೆ. ಕಾಂಗ್ರೆಸ್​ನಲ್ಲಿ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡುವ ಸಂಪ್ರದಾಯವಿಲ್ಲ. ಪಂಚ ರಾಜ್ಯಗಳ ಚುನಾವಣೆಯಲ್ಲಿ ಅನಿವಾರ್ಯವಾದ ಕಾರಣ ಪಂಜಾಬ್​ನಲ್ಲಿ ಮಾತ್ರ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದ್ರು. ಕರ್ನಾಟಕದಲ್ಲಿ ಆ ಸನ್ನಿವೇಶ ಇಲ್ಲ. ಆದರೂ ಪಕ್ಷದ ಹೈ ಕಮಾಂಡ್ ಆ ಸಂದರ್ಭದಲ್ಲಿ ಏನು ತೀರ್ಮಾನ ಕೈಗೊಳ್ಳುತ್ತದೋ ಅದರಂತೆ ನಡೆಯುತ್ತೇವೆ ಎಂದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಿ.ಎಂ.ಪಾಟೀಲ್

ನಮ್ಮಲ್ಲಿ ಚುನಾವಣಾ ಪೂರ್ವ ಸಿಎಂ ಅಭ್ಯರ್ಥಿ ಘೋಷಣೆ ಮಾಡುವುದಿಲ್ಲ. ಪಂಜಾಬ್ ಬಿಟ್ಟು ಕಾಂಗ್ರೆಸ್ ಇತಿಹಾಸದಲ್ಲಿ ಸಿಎಂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಈ ಬಗ್ಗೆ ಹೈ ಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ಅಂತಾರಾಜ್ಯ ಜಲವಿವಾದ ಸಂಬಂಧ ನಿನ್ನೆ ನಡೆದ ಸರ್ವಪಕ್ಷ ಸಭೆಯಲ್ಲಿ ಸರ್ವಪಕ್ಷ ನಿಯೋಗವನ್ನು ಕೇಂದ್ರ ಜಲಶಕ್ತಿ ಸಚಿವರು ಮತ್ತು ಪ್ರಧಾನ ಮಂತ್ರಿಯವರ ಬಳಿ ಕರೆದೊಯ್ಯಬೇಕು ಎಂದು ನಾವು ಒತ್ತಾಯ ಮಾಡಿದ್ದೆವು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆ ಸಭೆಯಲ್ಲಿ ಮೂರು ಬಾರಿ ಈ ಸಂಬಂಧ ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಬೇಕು ಎಂದು ಒತ್ತಾಯಿಸಿದ್ದಾರೆ. ಅದಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದರು. ಆದರೆ, ಈಗ ಸಿಎಂ ನಾವು ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯುತ್ತಿಲ್ಲ ಎಂದು ಏಕೆ ಹೇಳುತ್ತಿದ್ದಾರೆ ಅಂತ ಗೊತ್ತಿಲ್ಲ ಎಂದರು.

ಎಂ.ಬಿ.ಪಾಟೀಲ್ ಪದಗ್ರಹಣ: ಮಾರ್ಚ್ 28 ರಂದು ಮಧ್ಯಾಹ್ನ 3 ಗಂಟೆಗೆ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್ ಪದಗ್ರಹಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ‌ ಖರ್ಗೆ ಸೇರಿದಂತೆ ರಾಜ್ಯದ ಎಲ್ಲ ಕಾಂಗ್ರೆಸ್ ನಾಯಕರು ಭಾಗಿಯಾಗುತ್ತಾರೆ.

ಇದನ್ನೂ ಓದಿ: ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರ ಹಿಂದೇಟು? ಮೂರು ದಿನದಲ್ಲಿ ರಾಜ್ಯದಲ್ಲಿ ನೀಡಿದ ಡೋಸ್​ ಎಷ್ಟು ಗೊತ್ತಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.