ETV Bharat / state

ತೈಲ, ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ಮುಖಂಡರ ಎತ್ತಿನಗಾಡಿ ಚಲೋ

author img

By

Published : Sep 13, 2021, 10:20 AM IST

Updated : Sep 13, 2021, 11:18 AM IST

ರಾಜ್ಯ ವಿಧಾನ ಮಂಡಲ ಅಧಿವೇಶನ ಹಿನ್ನೆಲೆ ತೈಲ ಹಾಗೂ ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಪಕ್ಷ ನಾಯಕರು ಎತ್ತಿನಗಾಡಿ ಚಲೋ ಪ್ರತಿಭಟನೆ ನಡೆಸುತ್ತಿದ್ದಾರೆ.

congress-leaders-protest-in-bengaluru
ತೈಲ, ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ನಾಯಕರಿಂದ ಎತ್ತಿನಗಾಡಿ ಚಲೋ

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಹಿನ್ನೆಲೆ ತೈಲ ಹಾಗೂ ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಪಕ್ಷ ನಾಯಕರು ಎತ್ತಿನಗಾಡಿ ಚಲೋ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮಾಜಿ ಗೃಹ ಸಚಿವ ಎಂ‌.ಬಿ. ಪಾಟೀಲ್, ಪರಿಷತ್ ಸದಸ್ಯ ನಜಿರ್ ಅಹಮದ್ ಸಾಥ್ ನೀಡಿದ್ದಾರೆ.

ಕಾಂಗ್ರೆಸ್​ ಮುಖಂಡರ ಎತ್ತಿನಗಾಡಿ ಚಲೋ

ಮುಂದಿನ ದಿನಗಳಲ್ಲಿ ಪ್ರಯಾಣಕ್ಕೆ ಎತ್ತಿನಗಾಡಿಯೇ ಗಟ್ಟಿ ಎಂಬ ಸಂದೇಶ ರವಾನಿಸಲಾಗುತ್ತಿದೆ. ನಗರದ ಶಿವಾನಂದ ಸರ್ಕಲ್​ನ ಸರ್ಕಾರಿ ನಿವಾಸದಿಂದ ಸಿದ್ದರಾಮಯ್ಯ ಹಾಗೂ ಸದಾಶಿವನಗರ ನಿವಾಸದಿಂದ ಡಿ.ಕೆ.ಶಿವಕುಮಾರ್​ ಪ್ರತಿಭಟನೆ ಆರಂಭಗೊಂಡಿದೆ. ಎತ್ತಿನಗಾಡಿ ಮೂಲಕವೇ ವಿಧಾನಸೌಧಕ್ಕೆ ತೆರಳಲಿದ್ದಾರೆ.

ಡಿಕೆಶಿ ಹೇಳಿಕೆ:

ನಾನು ದೇಶದ ಧ್ವನಿಯಾಗಿ ಕೆಲಸ ಮಾಡುತ್ತಿದ್ದು, ರಾಜ್ಯದಲ್ಲಿ ಸರ್ಕಾರದಿಂದ ಪಿಕ್​ ಪಾಕೆಟ್​ ನಡೆಯುತ್ತಿದೆ. ನಮ್ಮ ಹೋರಾಟವು ನಿರಂತರವಾಗಿರಲಿದೆ. ಬೆಲೆ ಏರಿಕೆ ಬಗ್ಗೆ ಸದನದೊಳಗೂ ಚರ್ಚೆ ಮಾಡುತ್ತೇವೆ. ನಮ್ಮ ಹೋರಾಟವು ಬಿಜೆಪಿ ಹಾಗೂ ಸರ್ಕಾರಕ್ಕೆ ತಟ್ಟಲಿದೆ ಎಂದು ಡಿಕೆಶಿ ಹೇಳಿದರು.

ಯಾದಗಿರಿ ಮಹಿಳೆ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆ ಅಂತಾನೇ ಗೊತ್ತಿಲ್ಲ ಎಂದು ಹರಿಹಾಯ್ದರು.

ಇದನ್ನೂ ಓದಿ: ಬೆಳಗಾವಿಯ ಪಾಲಿಕೆ ನೂತನ ಸದಸ್ಯರು ಬೆಂಗಳೂರಿಗೆ.. ಸಿಎಂ ಭೇಟಿ ಮಾಡಲಿರುವ ಕಾರ್ಪೋರೇಟರ್ಸ್

Last Updated :Sep 13, 2021, 11:18 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.