ETV Bharat / state

ಮುಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಬಿಜೆಪಿ ಸೇರಿ ಪಾವನನಾಗಬಹುದು: ಕಾಂಗ್ರೆಸ್ ಟ್ವೀಟ್​

author img

By

Published : Nov 28, 2022, 11:06 PM IST

ವಾಂಟೆಡ್ ಕ್ರಿಮಿನಲ್‌ಗಳೆಲ್ಲ ಈಗ ಬಿಜೆಪಿಗೆ ವಾಂಟೆಡ್​. ರೌಡಿ ಶೀಟರ್‌ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ ಎಂದು ಕಾಂಗ್ರೆಸ್ ಪಕ್ಷ ಟ್ವೀಟ್​ ಮಾಡಿದೆ.

ಕಾಂಗ್ರೆಸ್
ಕಾಂಗ್ರೆಸ್

ಬೆಂಗಳೂರು: ಬಿಜೆಪಿ ಕಳ್ಳರು, ಸುಳ್ಳರು, ಭ್ರಷ್ಟರು ಮತ್ತು ರೌಡಿಗಳಿಗೆ ಸೂರು ಕಲ್ಪಿಸಿದೆ ಎಂದು ಕಾಂಗ್ರೆಸ್ ಪಕ್ಷ ಗಂಭೀರ ಆರೋಪ ಮಾಡಿದೆ. ಸರಣಿ ಟ್ವೀಟ್ ಮಾಡಿ ಬಿಜೆಪಿ ಪಕ್ಷದ ವಿರುದ್ಧ ಲೇವಡಿ ಮಾಡಿರುವ ಕಾಂಗ್ರೆಸ್, ವಾಂಟೆಡ್ ಲಿಸ್ಟ್‌ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ. ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ. ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು - ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ? ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ? ಎಂದು ಪ್ರಶ್ನಿಸಿದೆ.

  • ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು, ಈಗ ರಿಯಲ್ ರೌಡಿಗಳು ಸೇರಿದ್ದಾರೆ.

    ಮುಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಬಿಜೆಪಿ ಸೇರಿ ಪಾವನನಾಗಬಹುದು!

    ಪಾತಕಿಗಳು, ದರೋಡೆಕೋರರು, ಡ್ರಗ್ ಪೆಡ್ಲರ್‌ಗಳು, ಕ್ರೀಮಿನಲ್‌ಗಳು, ಭ್ರಷ್ಟರು, ರೇಪಿಸ್ಟರು ಎಲ್ಲರಿಗೂ @BJP4Karnataka ಪಕ್ಷ ತವರು ಮನೆ ಇದ್ದಂತೆ!

    — Karnataka Congress (@INCKarnataka) November 28, 2022 " class="align-text-top noRightClick twitterSection" data=" ">
  • ವಾಂಟೆಂಡ್ ಕ್ರಿಮಿನಲ್‌ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್!

    ರೌಡಿ ಶೀಟರ್‌ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ @BJP4Karnataka ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ.

    ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ! pic.twitter.com/aUtfFTrsxN

    — Karnataka Congress (@INCKarnataka) November 28, 2022 " class="align-text-top noRightClick twitterSection" data=" ">

ಕ್ರಿಮಿನಲ್‌ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ? ಆರಗ ಜ್ಞಾನೇಂದ್ರ ಅವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ? ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ರಾಜ್ಯ ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ?

  • ವಾಂಟೆಡ್ ಲಿಸ್ಟ್‌ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ!

    ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು - ಬಿಜೆಪಿ.

    ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ @BJP4Karnataka?
    ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ?

    — Karnataka Congress (@INCKarnataka) November 28, 2022 " class="align-text-top noRightClick twitterSection" data=" ">

ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನೀಲ್​​ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್. ಆರಗ ಜ್ಞಾನೇಂದ್ರ ಅವರೇ ಸೈಲೆಂಟ್ ಸುನೀಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರಿರಲಿಲ್ಲವೇ? ಬಂಧಿಸದಂತೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದಿದೆ.

ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆ: ವಾಂಟೆಡ್ ಕ್ರಿಮಿನಲ್‌ಗಳೆಲ್ಲ ಈಗ ಬಿಜೆಪಿಗೆ ವಾಂಟೆಡ್​. ರೌಡಿ ಶೀಟರ್‌ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ. ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ ಎಂದು ಆರೋಪ ಮಾಡಿದೆ.

  • ಕ್ರಿಮಿನಲ್‌ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ?@JnanendraAraga ಅವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ?

    ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ @BJP4Karnataka ನಾಯಕರ ಕೈಗೆ ಸಿಕ್ಕಿದ್ದು ಹೇಗೆ?

    — Karnataka Congress (@INCKarnataka) November 28, 2022 " class="align-text-top noRightClick twitterSection" data=" ">

ಎಲ್ಲರಿಗೂ ಬಿಜೆಪಿ ಪಕ್ಷ ತವರು ಮನೆ ಇದ್ದಂತೆ: ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು. ಈಗ ರಿಯಲ್ ರೌಡಿಗಳು ಸೇರಿದ್ದಾರೆ. ಮುಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಬಿಜೆಪಿ ಸೇರಿ ಪಾವನನಾಗಬಹುದು. ಪಾತಕಿಗಳು, ದರೋಡೆಕೋರರು, ಡ್ರಗ್ ಪೆಡ್ಲರ್‌ಗಳು, ಕ್ರಿಮಿನಲ್‌ಗಳು, ಭ್ರಷ್ಟರು, ರೇಪಿಸ್ಟರು ಎಲ್ಲರಿಗೂ ಬಿಜೆಪಿ ಪಕ್ಷ ತವರು ಮನೆ ಇದ್ದಂತೆ ಎಂದಿದೆ.

ಓದಿ: ಸಂವಿಧಾನ ಬದಲಾವಣೆ ಬಿಜೆಪಿ ಅಜೆಂಡಾ: ಸತೀಶ್​ ಜಾರಕಿಹೊಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.