ETV Bharat / state

ಗುತ್ತಿಗೆದಾರ ಸಂಘದ ಕೆಂಪಣ್ಣ ನಿಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ: ಬಾಕಿ ಬಿಲ್ ಬಿಡುಗಡೆಗೆ ಮನವಿ

author img

By

Published : Jun 2, 2023, 1:16 PM IST

Kempanna delegation met  CM Siddaramaiah
ಗುತ್ತಿಗೆದಾರ ಸಂಘದ ಕೆಂಪಣ್ಣ ನಿಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ

ಪಂಚ ಗ್ಯಾರಂಟಿಗಳ ಜಾರಿ ಹಿನ್ನೆಲೆಯಲ್ಲಿ ಹಣಕಾಸಿನ ಕೊರತೆ ಎದುರಾಗುವ ಭೀತಿ ಎದುರಾಗಿದೆ. ಹೀಗಾಗಿ ಗುತ್ತಿಗೆದಾರರ ಸಂಘದ ಕೆಂಪಣ್ಣ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘ ಅಧ್ಯಕ್ಷ ಕೆಂಪಣ್ಣ‌ ನೇತೃತ್ವದ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ. ಸಿಎಂ ಸರ್ಕಾರಿ ಕಚೇರಿಗೆ ಬಂದ ನಿಯೋಗ ಚರ್ಚೆ ನಡೆಸಿದರು. ಈ ಭೇಟಿ ಕುತೂಹಲವನ್ನೂ ಕೆರಳಿಸಿತು. ಫ್ರೀ ಸ್ಕೀಮ್ ನಿಂದ ಕಾಮಗಾರಿ ಬಾಕಿ ಬಿಲ್ ಬಗ್ಗೆ ಗುತ್ತಿಗೆದಾರರು ಆತಂಕಕ್ಕೊಳಗಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ಕಾಮಗಾರಿಗಳ ಬಿಲ್ ತಡೆ ಹಿಡಿಯಲಾಗಿದೆ. ಹೀಗಾಗಿ ಬಾಕಿ ಕಾಮಗಾರಿಗಳ ಬಿಲ್ ಪಾವತಿ ಮಾಡುವಂತೆ ಸಿಎಂ ಬಳಿ ಕೋರಿದ್ದಾರೆ ಎಂದು ತಿಳಿದು ಬಂದಿದೆ.

ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಸುತ್ತೋಲೆ ಹೊರಡಿಸಲಾಗಿದೆ. ಪೂರ್ಣಗೊಂಡಿರುವ ಕಾಮಗಾರಿಗಳ ಬಾಕಿ ಮೊತ್ತವನ್ನೂ ಬಿಡುಗಡೆ ಮಾಡದಂತೆಯೂ ಸುತ್ತೋಲೆಯಲ್ಲಿ ಹೇಳಲಾಗಿದೆ. ಇದರಿಂದ ಗುತ್ತಿಗೆದಾರರಿಗೆ ತೀವ್ರ ತೊಂದರೆಯಾಗಲಿದೆ. ಜತೆಗೆ ಆರ್ಥಿಕ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಕಾಮಗಾರಿಗಳನ್ನು ಕೈಗೊಳ್ಳಲು ಅಸಾಧ್ಯವಾಗುತ್ತದೆ ಎಂದು ಆತಂಕ ಹೊರಹಾಕಿದ್ದಾರೆ.

ಇದನ್ನೂ ಓದಿ: ಲಂಚ ಸ್ವೀಕರಿಸಲ್ಲ ಅಂತ ನಿಮ್ಮ & ಸಚಿವರ ಕಚೇರಿ ಮನೆ ಮುಂದೆ ಫಲಕ ಹಾಕಿಸಿ: ಸಿಎಂಗೆ ಸಿದ್ದರಾಮಯ್ಯ ಸಲಹೆ

ಇದರಿಂದ ರಾಜ್ಯದ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಧಕ್ಕೆ ಉಂಟಾಗುತ್ತದೆ. ಕಾನೂನು ಬದ್ದವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಮುಂದುವರಿಸಲು ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಲು ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಗುತ್ತಿಗೆದಾರರ ಸಂಘ ಅಧ್ಯಕ್ಷ ಕೆಂಪಣ್ಣ‌ ಹಿಂದಿನ ಬೊಮ್ಮಾಯಿ ಸರ್ಕಾರದ ವಿರುದ್ಧ 40 ಪರ್ಸೆಂಟ್​ ಕಮಿಷನ್ ಆರೋಪ ಮಾಡಿತ್ತು. ಇದರ ವಿರುದ್ಧ ಕಾಂಗ್ರೆಸ್ ಚುನಾವಣೆ ವೇಳೆ ಜನಭಿಪ್ರಾಯ ಮೂಡಿಸಿತ್ತು. ಕಮಿಷನ್ ಆರೋಪವನ್ನೇ ಚುನಾವಣಾ ಅಸ್ತ್ರವಾಗಿ ಬಳಸಿ ಕಾಂಗ್ರೆಸ್ ಬಿಜೆಪಿಗೆ ಸೋಲುಣಿಸಿತ್ತು.

ಇದೀಗ ಪಂಚ ಗ್ಯಾರಂಟಿಗಳ ಜಾರಿ ಹಿನ್ನೆಲೆ ಹಣಕಾಸಿನ ಕೊರತೆ ಎದುರಾಗುವ ಭೀತಿ ಎದುರಾಗಿದೆ. ಈಗಾಗಲೇ ಸಾವಿರಾರು ಕೋಟಿ ಬಾಕಿ ಬಿಲ್ ಇದ್ದು, ಅದರ ಪಾವತಿಗೆ ಹಣದ ಕೊರತೆಯ ಭೀತಿ ಗುತ್ತಿಗೆದಾರರನ್ನು ಕಾಡುತ್ತಿದೆ. ಹೀಗಾಗಿ ಗುತ್ತಿಗೆದಾರರ ಸಂಘ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಕೂಡಲೇ ಬಿಲ್ ಬಿಡುಗಡೆ ಮಾಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: ಶಾಸಕಿ ವಿರುದ್ಧ 40 % ಕಮಿಷನ್ ಆರೋಪ: ಕಾರವಾರದಲ್ಲಿ ಆಣೆ ಪ್ರಮಾಣ ಮುನ್ನೆಲೆಗೆ

ಕಾಂಗ್ರೆಸ್​ನಿಂದ ಅಭಿಯಾನ: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅನೇಕರು ಈ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳಲು ಹಿಂಜರಿಯುತ್ತಾರೆ. ಹೀಗಾಗಿ, ಕಾಂಗ್ರೆಸ್ ಪಕ್ಷದ ವತಿಯಿಂದ ಸಹಾಯವಾಣಿ ಆರಂಭಿಸಿದ್ದೇವೆ. ಜನರು ಈ ಸಹಾಯವಾಣಿ ಸಂಖ್ಯೆ 8447704040ಕ್ಕೆ ಕರೆ ಮಾಡಿ ವಾಟ್ಸ್​ ಆ್ಯಪ್ ಮೂಲಕ ಅಭಿಪ್ರಾಯ ತಿಳಿಸಬಹುದು ಎಂದು ಈ ಹಿಂದೆ ಕಾಂಗ್ರೆಸ್​ ಅಭಿಯಾನ ಆರಂಭಿಸಿತ್ತು.

ಇದನ್ನೂ ಓದಿ: 'ಬಿಜೆಪಿ ಅಂದ್ರೆ ಭ್ರಷ್ಟಾಚಾರ - 40 ಪರ್ಸೆಂಟ್​ ಕಮಿಷನ್ ಸರ್ಕಾರ'.. ಕಾಂಗ್ರೆಸ್​ನಿಂದ ಅಭಿಯಾನ ಆರಂಭ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.