ETV Bharat / state

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬೇಡಿಕೆ ಬಗ್ಗೆ ಸುರ್ಜೇವಾಲರನ್ನೇ ಕೇಳಿ: ಡಿಸಿಎಂ ಡಿಕೆಶಿ

author img

By ETV Bharat Karnataka Team

Published : Jan 10, 2024, 3:16 PM IST

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್​ ಸಿಂಗ್​ ಸುರ್ಜೇವಾಲ ಅವರನ್ನು ಕೇಳಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

d-k-shivakumar-reaction-on-additional-dcm-demand
ಡಿಸಿಎಂ ಡಿ ಕೆ ಶಿವಕುಮಾರ್

ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : ಹೆಚ್ಚುವರಿ ಡಿಸಿಎಂ ಬೇಡಿಕೆ ವಿಚಾರವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್​ ಸಿಂಗ್​​ ಸುರ್ಜೇವಾಲ ಅವರನ್ನು ಕೇಳಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೆಲ‌ ಸಚಿವರಿಂದ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬೇಡಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಸುರ್ಜೇವಾಲ ಅವರನ್ನೆ ಕೇಳಿ. ಅವರೇ ಈ ಬಗ್ಗೆ ಹೇಳುತ್ತಾರೆ ಎಂದರು.

ಇಂದು ಲೋಕಸಭೆ ಚುನಾವಣೆಯ ಪೂರ್ವಭಾವಿ ಸಭೆ ಕರೆಯಲಾಗಿದೆ. ಬೆಳಗ್ಗೆ ಪಕ್ಷದ ಎಲ್ಲ ಶಾಸಕರು, ಪದಾಧಿಕಾರಿಗಳು, ಚುನಾವಣೆ ಸ್ಪರ್ಧಿಸಿದ್ದ ನಾಯಕರ ಸಭೆ ನಡೆಸಲಾಗುವುದು. ಮಧ್ಯಾಹ್ನ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಜತೆ ಸಭೆ ಮಾಡುತ್ತೇವೆ ಎಂದು ತಿಳಿಸಿದರು.

ಸಭೆಯಲ್ಲಿ ಪಕ್ಷದ ಸಂಘಟನೆ, ಬೂತ್ ಮಟ್ಟದಲ್ಲಿ ಬಿಎಲ್ಎಗಳು, ಮತದಾರರ ಹೆಸರು ಸೇರ್ಪಡೆ, ಪರಿಷ್ಕರಣೆ, ಗ್ಯಾರಂಟಿ ಅನುಷ್ಠಾನ, ಜಿಲ್ಲಾ ಮಟ್ಟದ ಸಭೆ, ವಿಧಾನಸಭೆ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆ, ಕಾರ್ಯಕರ್ತರ ಸಮಾವೇಶ, ರಾಜ್ಯ ಮಟ್ಟದ ಸಮಾವೇಶದ ಬಗ್ಗೆ ಚರ್ಚೆ ಮಾಡಲಿದ್ದೇವೆ ಎಂದು ತಿಳಿಸಿದರು.

ನಾನು ಡಿಸಿಎಂ ಆಕಾಂಕ್ಷಿಯಲ್ಲ: ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಎಐಸಿಸಿ ಅಧ್ಯಕ್ಷರು ಸ್ವಷ್ಟವಾದ ಸಂದೇಶ ನೀಡಿದ್ದಾರೆ. ಡಿಸಿಎಂ ಹುದ್ದೆಯ ಪ್ರಶ್ನೆಯೇ ಅಪ್ರಸ್ತುತ. ನಾನು ಡಿಸಿಎಂ ಆಕಾಂಕ್ಷಿ ಅಲ್ಲ ಎಂದು ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು. ಚುನಾವಣೆಗೆ ಸನ್ನದ್ಧರಾಗಲು ಸಭೆ ಆಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಗ್ಯಾರಂಟಿ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ‌‌ ಎಂದರು.

ಮೂರು ಡಿಸಿಎಂ ಹುದ್ದೆ ಸೃಷ್ಟಿ ವಿಷಯ ಪ್ರಸ್ತಾಪ : ಲೋಕಸಭೆ ಚುನಾವಣೆ ಸಂಬಂಧ ಚರ್ಚೆ ನಡೆಸಲು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದ ರಣದೀಪ್ ಸಿಂಗ್​ ಸುರ್ಜೇವಾಲ ರಾತ್ರಿ ಸಚಿವರ ಜೊತೆ ಸಭೆ ನಡೆಸಿದ್ದರು.‌ ಈ ಸಭೆಯಲ್ಲಿ ಡಿಸಿಎಂ ಹುದ್ದೆ ಸೃಷ್ಟಿಯ ಬಗ್ಗೆ ಕೆಲ ಸಚಿವರು ವಿಷಯ ಪ್ರಸ್ತಾಪಿಸಿದ್ದರು ಎಂದು ತಿಳಿದು ಬಂದಿದೆ. ಖಾಸಗಿ ಹೋಟೆಲ್​ನಲ್ಲಿ ಸಚಿವರಾದ ಹೆಚ್ ಸಿ ಮಹದೇವಪ್ಪ, ಕೆ ಹೆಚ್ ಮುನಿಯಪ್ಪ, ಸತೀಶ್ ಜಾರಕಿಹೊಳಿ, ಕೆ ಎನ್ ರಾಜಣ್ಣ ಭೇಟಿಯಾಗಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಪ್ರಸ್ತಾಪಿಸಿದ್ದರು.

ಅಲ್ಲದೇ ಸಮುದಾಯವಾರು ಮೂರು ಡಿಸಿಎಂ ಹುದ್ದೆ ಸೃಷ್ಟಿಸುವುದರಿಂದ ಹೆಚ್ಚಿನ ಸ್ಥಾನ ಗೆಲ್ಲಲು ಅನುಕೂಲವಾಗಲಿದೆ. ಬಿಜೆಪಿಯು ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಸಮುದಾಯವಾರು ಡಿಸಿಎಂ ಹುದ್ದೆ ನೀಡಿದೆ. ಅದೇ ರೀತಿ ರಾಜ್ಯದಲ್ಲೂ ಮೂರು ಡಿಸಿಎಂ ಹುದ್ದೆ ನೀಡಿದರೆ ಲಾಭವಾಗಲಿದೆ ಎಂದು ಸುರ್ಜೇವಾಲ ಸಚಿವರು ಮುಂದೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ : ಸುರ್ಜೇವಾಲ - ಸಚಿವರ ಸಭೆ; ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಕೆಲ ಸಚಿವರಿಂದ ಬೇಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.