ETV Bharat / state

ವೈಜ್ಞಾನಿಕವಾಗಿ SSLC ಪರೀಕ್ಷೆ ನಡೆಯಲಿದೆ, ಯಾವುದೇ ಭಯ ಬೇಡ : ಡಿಸಿಎಂ ಅಶ್ವತ್ಥ್​​​ ನಾರಾಯಣ್ ಅಭಯ

author img

By

Published : Jul 17, 2021, 3:09 PM IST

dcm-ashwath-narayan-react-on-sslc-exam
ಡಿಸಿಎಂ ಅಶ್ವತ್ಥ್​​​ ನಾರಾಯಣ್

ಭವಿಷ್ಯವನ್ನು ರೂಪಿಸಿಕೊಳ್ಳಲು ಪರೀಕ್ಷೆ ಬಹಳ ಮುಖ್ಯ. ಇದಕ್ಕೆ ಪೂರಕವಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ವೈಜ್ಞಾನಿಕ ಕ್ರಮಗಳನ್ನ ವಹಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ತಯಾರಿ ನಡೆಸಲಾಗಿದೆ. ಎಲ್ಲರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ..

ಬೆಂಗಳೂರು : ರಾಜ್ಯದಾದ್ಯಂತ ಜುಲೈ 19-22ರಂದು ಎಸ್ಎಸ್ಎಲ್​ಸಿ ಪರೀಕ್ಷೆ ನಡೆಯುತ್ತಿವೆ. ಅದಕ್ಕಾಗ ಈಗಾಗಲೇ ಸಿದ್ಧತೆ ನಡೆದಿದೆ. ಈ ನಡುವೆ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ಕಾರ್ಯವೂ ಆಗುತ್ತಿದೆ.

ಈ ಕುರಿತು ಈಟಿವಿ ಭಾರತದೊಂದಿಗೆ ಮಾತನಾಡಿದ ಡಿಸಿಎಂ ಅಶ್ವತ್ಥ್ ನಾರಾಯಣ್, ಪರೀಕ್ಷೆಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕೊರೊನಾ ಸೋಂಕಿನ ಭಯ ಬಿಟ್ಟು ಪರೀಕ್ಷೆಯನ್ನ ಉತ್ತಮವಾಗಿ ಬರೆಯಿರಿ ಎಂದು ಸಲಹೆ ನೀಡಿದ್ದಾರೆ.

SSLC ಪರೀಕ್ಷೆಗೆ ಡಿಸಿಎಂ ಅಶ್ವತ್ಥ್​​​ ನಾರಾಯಣ್ ಪ್ರತಿಕ್ರಿಯೆ..

ಭವಿಷ್ಯವನ್ನು ರೂಪಿಸಿಕೊಳ್ಳಲು ಪರೀಕ್ಷೆ ಬಹಳ ಮುಖ್ಯ. ಇದಕ್ಕೆ ಪೂರಕವಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ವೈಜ್ಞಾನಿಕ ಕ್ರಮಗಳನ್ನ ವಹಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ತಯಾರಿ ನಡೆಸಲಾಗಿದೆ. ಎಲ್ಲರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ ಎಂದು ಶುಭ ಹಾರೈಸಿದ್ದಾರೆ.

ಓದಿ : SSLC ಮಾದರಿ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಯತ್ನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.