ETV Bharat / state

ಜುಲೈ ಮೊದಲ ವಾರ/ಎರಡನೇ ವಾರದಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ: ಡಿಸಿಎಂ ಅಶ್ವಥ್ ನಾರಾಯಣ್

author img

By

Published : Jun 23, 2021, 1:21 PM IST

ಬೋಧಕರು, ಬೋಧಕೇತರರು ಹಾಗು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿದ ಬಳಿಕ ತರಗತಿಗಳು ಆರಂಭವಾಗುತ್ತವೆ. ಅದಕ್ಕೂ ಮುನ್ನ ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ.

DCM Ashwath narayan statement on covid vaccine to students
ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ

ಬೆಂಗಳೂರು: ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್‌ ಲಸಿಕೆ ಕೊಡಲು ಕ್ರಮ ಕೈಗೊಳ್ಳಲಾಗುವುದು. ಬೋಧಕರು, ಬೋಧಕೇತರರು ಹಾಗು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿದ ಬಳಿಕ ಕಾಲಕ್ರಮೇಣ ತರಗತಿಗಳು ಆರಂಭವಾಗುತ್ತವೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಡಿಸಿಎಂ, ಕೋವಿಡ್ ಹೆಚ್ಚು ಹರಡುವ ಮೂಲಕ ರೂಪಾಂತರ ಆಗಲಿದೆ. ಇದಕ್ಕೆ ಲಸಿಕೆಯೇ ರಾಮಬಾಣ. ಡೆಲ್ಟಾ, ಡೆಲ್ಟಾ ಪ್ಲಸ್ ವೈರಸ್‌ಗಳಿಗೆ ಲಸಿಕೆಯೇ ಸಂಜೀವಿನಿ. ನಿನ್ನೆ ಡಾ.ದೇವಿಶೆಟ್ಟಿ ನೇತೃತ್ವದ ಸಮಿತಿ ವರದಿ ಕೊಟ್ಟಿದೆ. ಆದ್ಯತೆಯ ಆಧಾರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ‌ ಲಸಿಕೆ ಕೊಡುವ ಗುರಿ ಇದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ನಮ್ಮಲ್ಲಿ ಮೂಲ ಮತ್ತು ವಲಸಿಗರೆಂಬ ಭಿನ್ನಾಭಿಪ್ರಾಯವಿಲ್ಲ, ಅದೇನಿದ್ದರು ಕಾಂಗ್ರೆಸ್​​ನಲ್ಲಿ: ಕಟೀಲ್ ತಿರುಗೇಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.