ETV Bharat / state

‌‌ಡಿಜಿಟಲ್​​ನತ್ತ ಉನ್ನತ ಶಿಕ್ಷಣ ಇಲಾಖೆ : ಸ್ಮಾರ್ಟ್ ಆಗಲಿದೆ ಕ್ಲಾಸ್ ರೂಮ್ಸ್..

author img

By

Published : Jul 10, 2021, 5:08 PM IST

3.5 ಲಕ್ಷ ತರಗತಿಗಳನ್ನು ನಮ್ಮದೇ ಬೋಧಕರು ಅಪ್‌ಲೋಡ್‌ ಮಾಡಿದ್ದಾರೆ. ಈ ಯೋಜನೆಗೆ ಸರ್ಕಾರ ಖರ್ಚು ಮಾಡಿದ್ದು ಕೇವಲ 4 ಕೋಟಿ ರೂ. ಮಾತ್ರ. ಇದನ್ನ ಸರಿಯಾದ ರೀತಿಯಲ್ಲಿ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ವಿದ್ಯಾಭ್ಯಾಸ ಮಾಡಬೇಕು ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ ಹೇಳಿದರು..

DCM Ashwath Narayan
ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಿಸಿ ಡಿಸಿಎಂ ಅಶ್ವತ್ಥ್​ ನಾರಾಯಣ

ಬೆಂಗಳೂರು : ಕೋವಿಡ್​​​ನಿಂದಾಗಿ ಇದೀಗ ಶೈಕ್ಷಣಿಕ ಕ್ಷೇತ್ರವೂ ಡಿಜಿಟಲ್ ಮಯವಾಗಿರುವುದು ಗೊತ್ತಿರುವ ವಿಷಯ. ಇದಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ಸ್ಮಾರ್ಟ್ ಕ್ಲಾಸ್​​ನತ್ತ ಮುಖ ಮಾಡ್ತಿದೆ. ಕೋವಿಡ್‌ ಕಾರಣಕ್ಕೆ ಸದ್ಯಕ್ಕೆ ಭೌತಿಕ ತರಗತಿಗಳು ಆರಂಭವಾಗಿಲ್ಲ. ಇತ್ತ ವಿದ್ಯಾರ್ಥಿಗಳ ಆರೋಗ್ಯದ ಜತೆಗೆ ಕಲಿಕೆಯು ಮುಖ್ಯವಾಗಿದ್ದು, ಇದರ ಮೇಲೆ ದುಷ್ಪರಿಣಾಮ ಉಂಟಾಗದಂತೆ ರಾಜ್ಯ ಸರ್ಕಾರ ಡಿಜಿಟಲ್‌ ಕಲಿಕೆಗೆ ಹೆಚ್ಚು ಒತ್ತು ನೀಡಿದೆ.

ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಿಸಿ ಡಿಸಿಎಂ ಅಶ್ವತ್ಥ್​ ನಾರಾಯಣ

ಈ ನಿಟ್ಟಿನಲ್ಲಿ ಇಂದು ನಗರದ ಮಲ್ಲೇಶ್ವರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಡಿಸಿಎಂ ಅಶ್ವತ್ಥ್​ ನಾರಾಯಣ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಿಸಿ ಬಳಿಕ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದರು. ಈ ವೇಳೆ ಮಾತಾನಾಡಿದ ಅವರು, ಕೆಲ ದಿನಗಳಲ್ಲೇ ರಾಜ್ಯದ ಉನ್ನತ ಶಿಕ್ಷಣ ವಿಭಾಗದಲ್ಲಿರುವ 8,500 ತರಗತಿ ಕೊಠಡಿಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಸ್ಮಾರ್ಟ್‌ಕ್ಲಾಸ್‌ ರೂಂಗಳನ್ನಾಗಿ ಪರಿವರ್ತಿಸಲಾಗುತ್ತದೆ.

ಈ ಪೈಕಿ 2,500 ಕೊಠಡಿಗಳನ್ನು ಈಗಾಗಲೇ ಸ್ಮಾರ್ಟ್‌ಕ್ಲಾಸ್‌ ರೂಂಗಳನ್ನಾಗಿ ಅಭಿವೃದ್ಧಿಪಡಿಸಲಾಗಿದೆ. ಜತೆಗೆ ಮಲ್ಲೇಶ್ವರಂ ಸರ್ಕಾರಿ ಕಾಲೇಜಿನಲ್ಲಿಯೂ ಎಲ್ಲ ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್‌ ರೂಂಗಳನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದರು. ಕಳೆದ ಶೈಕ್ಷಣಿಕ ವರ್ಷದಲ್ಲಿ 1.10 ಲಕ್ಷ ಲ್ಯಾಪ್‌ ಟಾಪ್‌ಗಳನ್ನು ಎಲ್ಲ ಪದವಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿತ್ತು.

ಹಾಗೇ ಇದಕ್ಕೆ 330 ಕೋಟಿ ರೂ. ಖರ್ಚು ಮಾಡಲಾಗಿತ್ತು. ಅದೇ ರೀತಿ ಈ ಶೈಕ್ಷಣಿಕ ವರ್ಷದಲ್ಲಿ 1.60 ಲಕ್ಷದಷ್ಟು ಎಂಜಿನಿಯರಿಂಗ್‌, ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಣೆ ಮಾಡಲಾಗಿದೆ.‌ ಅತ್ಯುತ್ತಮ ಕಂಟೆಂಟ್‌ ಜತೆಗೆ ಪರಿಣಾಮಕಾರಿ ಕಲಿಕೆ ಎಲ್ಲ ಆಯಾಮಗಳಲ್ಲೂ ಸಹಕಾರಿಯಾದ ವ್ಯವಸ್ಥೆ ಇದಾಗಿದೆ.

3.5 ಲಕ್ಷ ತರಗತಿಗಳನ್ನು ನಮ್ಮದೇ ಬೋಧಕರು ಅಪ್‌ಲೋಡ್‌ ಮಾಡಿದ್ದಾರೆ. ಈ ಯೋಜನೆಗೆ ಸರ್ಕಾರ ಖರ್ಚು ಮಾಡಿದ್ದು ಕೇವಲ 4 ಕೋಟಿ ರೂ. ಮಾತ್ರ. ಇದನ್ನ ಸರಿಯಾದ ರೀತಿಯಲ್ಲಿ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ವಿದ್ಯಾಭ್ಯಾಸ ಮಾಡಬೇಕು ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ ಹೇಳಿದರು.

ಇದನ್ನೂ ಓದಿ: ಶಿವಮೊಗ್ಗದ 1.7 ಲಕ್ಷ ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ. ನೆರವು : ಸಚಿವ ಈಶ್ವರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.