ETV Bharat / state

Tokyo Olympics 2020: ಚೀರ್ ಫಾರ್ ಇಂಡಿಯಾ ಅಭಿಯಾನದಲ್ಲಿ ಪಾಲ್ಗೊಳ್ಳಲು ಡಿಸಿಎಂ ಅಶ್ವಥನಾರಾಯಣ್ ಕರೆ

author img

By

Published : Jul 21, 2021, 6:50 PM IST

ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ನಮ್ಮ ಕ್ರೀಡಾಪಟುಗಳಿಗೆ ಚೈತನ್ಯ, ಪ್ರೋತ್ಸಾಹ ತುಂಬುವಂಥ ಬರಹಗಳನ್ನು, ಪೋಸ್ಟ್‌ಗಳನ್ನು ಹಾಕುವ ಮೂಲಕ ದೇಶಪ್ರೇಮ ಮೆರೆಯಬೇಕು ಎಂದು ಡಿಸಿಎಂ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.

ashwatthnarayan
ashwatthnarayan

ಬೆಂಗಳೂರು: ಇದೇ ತಿಂಗಳ 23ರಿಂದ ಶುರುವಾಗಲಿರುವ 'ಟೋಕಿಯೋ ಒಲಿಂಪಿಕ್ಸ್-‌2020' ಕ್ರೀಡಾಕೂಟದಲ್ಲಿನ ಭಾರತೀಯ ಆಟಗಾರರಿಗೆ ಉತ್ತೇಜನೆ ನೀಡುವ "ಚೀರ್ ಫಾರ್ ಇಂಡಿಯಾ" ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಯುವಕರಿಗೆ ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಕರೆ ನೀಡಿದರು.

'ಟೋಕಿಯೋ ಒಲಿಂಪಿಕ್ಸ್' ಕ್ರೀಡಾಕೂಟದಲ್ಲಿನ ಭಾರತೀಯ ಸ್ಫರ್ಧಾಳುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಭಾರತೀಯ ದೈಹಿಕ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮಟ್ಟದ ವೆಬಿನಾರ್‌ನಲ್ಲಿ ಭಾಗವಹಿಸಿ ಮಾತನಾಡಿದ ಅವರು, 15 ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಹಬ್ಬದಲ್ಲಿ ನಮ್ಮ ದೇಶದ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಈ ಅಭಿಯಾನದಲ್ಲಿ ಎಲ್ಲರೂ ಭಾಗಿಯಾಗುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಅಭಿಯಾನದ ಭಾಗವಾಗಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ನಮ್ಮ ಕ್ರೀಡಾಪಟುಗಳಿಗೆ ಚೈತನ್ಯ, ಪ್ರೋತ್ಸಾಹ ತುಂಬುವಂಥ ಬರಹಗಳನ್ನು, ಪೋಸ್ಟ್‌ಗಳನ್ನು ಹಾಕುವ ಮೂಲಕ ದೇಶಪ್ರೇಮ ಮೆರೆಯಬೇಕು ಎಂದು ಡಿಸಿಎಂ ಹೇಳಿದರು.

ಈ ವೆಬಿನಾರ್‌ನಲ್ಲಿ ರಾಜ್ಯದ ಯುವಜನ ಸಬಲೀಕರಣ ಮತ್ತು ಕ್ರೀಡಾ ಖಾತೆ ಸಚಿವ ಡಾ.ಕೆ.ಸಿ. ನಾರಾಯಣ ಗೌಡ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವಾ, ಮಾಜಿ ಒಲಿಂಪಿಕ್‌ ಕ್ರೀಡಾಪಟು ಪ್ರಮೀಳಾ ಅಯ್ಯಪ್ಪ, ಅರ್ಜುನ ಪ್ರಶಸ್ತಿ ವಿಜೇತ ಜೂಡ್ ಫೆಲಿಕ್ಸ್, ಭಾರತದ ದೈಹಿಕ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಪಿಯೂಷ್ ಜೈನ್ ಮುಂತಾದವರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.