ETV Bharat / state

ಅಧಿಕಾರಿಗಳೊಂದಿಗೆ ಡಿಸಿಎಂ ಡಿಕೆಶಿ ಬಿಎಂಟಿಸಿ ಬಸ್ಸಲ್ಲಿ ಬೆಂಗಳೂರು ರೌಂಡ್ಸ್​

author img

By

Published : Jun 8, 2023, 1:43 PM IST

Updated : Jun 9, 2023, 9:47 AM IST

ಡಿಸಿಎಂ ಡಿಕೆ ಶಿವಕುಮಾರ್​ ಅವರು ಇಂದು ಬೆಂಗಳೂರಿನ ಕೆಲ ಪ್ರದೇಶಗಳಿಗೆ ಬಿಎಂಟಿಸಿ ಬಸ್​ನಲ್ಲಿ ರೌಂಡ್ಸ್​ ಹಾಕಿ ಚರಂಡಿ ವ್ಯವಸ್ಥೆಯನ್ನು ವೀಕ್ಷಿಸಿದರು. ಅಧಿಕಾರಿಗಳೂ ಜೊತೆಗಿದ್ದರು.

ಡಿಕೆಶಿ ಬಿಬಿಎಂಪಿ ಬಸ್ಸಲ್ಲಿ ಬೆಂಗಳೂರು ರೌಂಡ್ಸ್​
ಡಿಕೆಶಿ ಬಿಬಿಎಂಪಿ ಬಸ್ಸಲ್ಲಿ ಬೆಂಗಳೂರು ರೌಂಡ್ಸ್​

ಡಿಕೆಶಿ ಬಿಬಿಎಂಪಿ ಬಸ್ಸಲ್ಲಿ ಬೆಂಗಳೂರು ರೌಂಡ್ಸ್​

ಬೆಂಗಳೂರು: ಮಳೆಗಾಲದಲ್ಲಿ ನೀರು ತುಂಬಿಕೊಂಡು ತೊಂದರೆಗೀಡಾಗುವ ಪ್ರದೇಶಗಳನ್ನು ಗುರುತಿಸಿ ಶೀಘ್ರವೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ಅಧಿಕಾರಿಗಳಿಗೆ ಖಡಕ್​ ಎಚ್ಚರಿಕೆ ನೀಡಿದರು.

ಇಂದು ಅಧಿಕಾರಿಗಳೊಂದಿಗೆ ಬಸ್​ ಮೂಲಕ ನಗರದ ಕೆಲವು ಭಾಗಗಗಳಲ್ಲಿ ಸಂಚಾರ ನಡೆಸಿದ ಡಿಸಿಎಂ ಅವರು, ಮಳೆಗಾಲ ಸಮೀಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತೆ ಅನಾಹುತಕ್ಕೀಡಾಗುವುದನ್ನು ತಪ್ಪಿಸಲು ಪೂರ್ವ ಸಿದ್ಧತೆ ನಡೆಸಬೇಕಿದೆ. ಹೀಗಾಗಿ ಅಧಿಕಾರಿಗಳು ಯಾವೆಲ್ಲಾ ಸಿದ್ಧತೆ ನಡೆಸಿದ್ದಾರೆ ಎಂಬುದನ್ನು ಪರಿಶೀಲನೆ ಮಾಡುತ್ತಿದ್ದೇನೆ ಎಂದರು.

ಇಂದು ನಗರದ ಕೆಲ ಪ್ರದೇಶಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಿದ್ದೇನೆ. ಅಧಿಕಾರಿಗಳನ್ನೂ ಜೊತೆಗಿಟ್ಟುಕೊಂಡು ಸಂಚರಿಸಿದ್ದೇನೆ. ಬೆಂಗಳೂರಿನ ಹಲವು ಒಳಚರಂಡಿ ವ್ಯವಸ್ಥೆಯನ್ನು ಪರಿಶೀಲಿಸಲಾಗಿದೆ. ಬಿಬಿಎಂಪಿ ಆಯುಕ್ತರು ಕೆಲವೊಂದು ವಿಷಯಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ ಎಂದರು.

ಕಾರಂತ್​ ಬಡಾವಣೆ ಅಭಿವೃದ್ಧಿ: ಶಿವರಾಮ ಕಾರಂತ್​ ಬಡಾವಣೆಯನ್ನು ಪುನರ್​ ಅಭಿವೃದ್ಧಿ ಮಾಡಲಾಗುತ್ತಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ಕ್ಕೆ 3 ಸಾವಿರ ಜಾಗದಷ್ಟು ಜಾಗ ಸಿಕ್ಕಿದೆ. ಅದರಲ್ಲಿ ಕೆಲಸ ಯಾವ ಪ್ರಮಾಣದಲ್ಲಿ ನಡೆಯುತ್ತಿದೆ ಎಂಬುದನ್ನು ಪರಿಶೀಲಿಸಲು ಸಭೆ ನಡೆಸಿದ್ದೇನೆ. ಇದಕ್ಕಾಗಿ ಆಸ್ತಿ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಲೂ ಸೂಚಿಸಲಾಗಿದೆ ಎಂದರು.

ಅಧಿಕಾರಿಗಳೊಂದಿಗೆ ಸಭೆ: ಇದಕ್ಕೂ ಮೊದಲು ಜೂನ್​ 5 ರಂದು ಬೆಂಗಳೂರು ಅಭಿವೃದ್ಧಿ ಕುರಿತಂತೆ ವಿಶೇಷ ಸಭೆ ನಡೆಸಿದ್ದ ಡಿಸಿಎಂ ಡಿಕೆ ಶಿವಕುಮಾರ್​, ದೇಶದ ಅರ್ಥ ವ್ಯವಸ್ಥೆಗೆ ಕರ್ನಾಟಕ ಅದರಲ್ಲೂ ವಿಶೇಷವಾಗಿ ಬೆಂಗಳೂರಿನ ಕೊಡುಗೆ ಅಪಾರವಾಗಿದೆ. ಜಿಎಸ್​ಟಿ, ಸೆಸ್, ನಾನಾ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ಹೆಚ್ಚು ಹಣ ನೀಡುತ್ತಿದೆ. ರಾಜ್ಯಕ್ಕೆ ಬರಬೇಕಾದ ಪಾಲು ತಂದು ಅಭಿವೃದ್ಧಿ ಮಾಡೋಣ. ಬೆಂಗಳೂರು ಅಭಿವೃದ್ಧಿಯಲ್ಲಿ ಅಧಿಕಾರಿಗಳ ಪಾತ್ರ ಬಹಳ ಮುಖ್ಯ. ಆದರೆ, ಕೆಲವರು ಈ ಬಗ್ಗೆ ಗಮನ ಹರಿಸದೆ, ಅವರವರ ಮೂಗಿನ ನೇರಕ್ಕೆ, ಅನುಕೂಲಕ್ಕೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ. ಕೆಲವರು ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದ್ದರು.

ನಾವು ಪ್ರತಿಯೊಂದನ್ನೂ ಪರಾಮರ್ಶಿಸಬೇಕು. ಅಭಿವೃದ್ಧಿ ವಿಚಾರದಲ್ಲಿ ಅಧಿಕಾರಿಗಳು ಆಟ ಆಡಲು ನೋಡಿದರೆ, ದಿಕ್ಕು ತಪ್ಪಿಸಲು ಯತ್ನಿಸಿದರೆ ಸಹಿಸುವುದಿಲ್ಲ. ಅಂತಹವರು ಜಾಗ ಖಾಲಿ ಮಾಡಬೇಕಾಗುತ್ತದೆ. ನಿಮ್ಮ ವೈಯಕ್ತಿಕ ಹಿತ ಪಕ್ಕಕ್ಕಿಡಿ. ನಿಜ ಅರ್ಥದಲ್ಲಿ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ತನ್ನಿ. ಹಿಂದಿನ ದಿನಗಳಲ್ಲಿ ಏನಾಯಿತು ಎಂಬ ಬಗ್ಗೆ ಚರ್ಚೆ, ಪರಾಮರ್ಶೆಯಲ್ಲಿ ಸಮಯ ವ್ಯಯಿಸುವುದು ನನಗೆ ಬೇಕಿಲ್ಲ. ಭವಿಷ್ಯದ ಬಗ್ಗೆ ಸಕಾರಾತ್ಮಕ ಚಿಂತನೆ ಮಾಡೋಣ. ಬೆಂಗಳೂರು ಪರಿವರ್ತನೆ ಮಾಡೋಣ ಎಂದರು.

ಬೆಂಗಳೂರು ಅಭಿವೃದ್ಧಿಗೆ ನಿಮ್ಮ ಸಂಪೂರ್ಣ ಸಹಕಾರ, ಸಲಹೆ ಅಗತ್ಯ. ಬೆಂಗಳೂರು ಅಭಿವೃದ್ಧಿಗೆ ಎಲ್ಲರೂ ಸಲಹೆ ಕೊಡಿ. ಮಾಜಿ ಪ್ರಧಾನಿ ವಾಜಪೇಯಿ ಅವರು ಬಹಳ ಹಿಂದೆಯೇ ವಿಶ್ವಮಟ್ಟದಲ್ಲಿ ಬೆಂಗಳೂರು ನಗರದ ಘನತೆ, ಪ್ರಾಮುಖ್ಯತೆ ಬಗ್ಗೆ ಒತ್ತಿ ಹೇಳಿದ್ದರು. ಈಗಿನ ಪ್ರಧಾನಿಯವರೂ ಅದನ್ನು ಬಹಳ ಸಾರಿ ಹೇಳಿದ್ದಾರೆ. ಹೀಗಾಗಿ ನಾವು-ನೀವೆಲ್ಲಾ ಸೇರಿ ಬೆಂಗಳೂರಿನ ಘನತೆ, ಗೌರವ, ಹೆಚ್ಚಿಸೋಣ ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ: ಪ್ರೀತಿಗೂ ರೆಡಿ, ಸಂಘರ್ಷಕ್ಕೂ ರೆಡಿ, ನನಗೆ ದ್ವೇಷದ ರಾಜಕೀಯ ಬೇಕಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

Last Updated :Jun 9, 2023, 9:47 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.