ETV Bharat / state

ಎಂ ಬಿ ಪಾಟೀಲ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ ಕೆ ಶಿವಕುಮಾರ್​ !

author img

By

Published : May 23, 2023, 3:27 PM IST

ಸಚಿವ ಎಂ ಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್ ಯಾರಾದರೂ ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಆ ಬಗ್ಗೆ ಏನೂ ಮಾತಾಡುವುದಿಲ್ಲ ಎಂದು ಹೇಳಿದ್ದಾರೆ.

dcm-dk-shivakumar-reaction-on-mb-patil-statement
ಎಂಬಿ ಪಾಟೀಲ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ ಕೆ ಶಿವಕುಮಾರ್​ !

ಬೆಂಗಳೂರು: ಸಿದ್ಧರಾಮಯ್ಯ 5 ವರ್ಷವೂ ಸಿಎಂ ಆಗಿರುತ್ತಾರೆ ಎಂದು ಸಚಿವ ಎಂ ಬಿ ಪಾಟೀಲ್ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ನಾಯಕರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ವೇಣುಗೋಪಾಲ್ ಏನು ಹೇಳಿದ್ದಾರೋ ಅದನ್ನೇ ನಾನು ಹೇಳಿದ್ದೆ. ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ನನಗೆ ಗೊತ್ತಿಲ್ಲ. ವೇಣುಗೋಪಾಲ್ ಪವರ್ ಶೇರಿಂಗ್ ಇಲ್ಲ ಎಂದಿದ್ರು. ಪವರ್ ಶೇರಿಂಗ್ ಇದ್ದರೆ ಅದು ಜನರ ಜೊತೆ ಮಾತ್ರ ಎಂದಿದ್ದರು. ನಾನು ವೈಯಕ್ತಿಕವಾಗಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಎಂ ಬಿ ಪಾಟೀಲ್ ತಿಳಿಸಿದ್ದರು.

ಎಐಸಿಸಿ ನೋಡಿಕೊಳ್ಳಲಿದೆ - ಡಿಕೆಶಿ: ನಿನ್ನೆ ರಾತ್ರಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಯಾರಾದರೂ ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಆ ಬಗ್ಗೆ ಏನೂ ಮಾತಾಡುವುದಿಲ್ಲ. ಅಧಿಕಾರ ಮತ್ತಿತರ ಪಕ್ಷದ ವಿಚಾರಗಳನ್ನು ನೋಡಿಕೊಳ್ಳಲು ಎಐಸಿಸಿ ಇದೆ. ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು ಇದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾತ್ರ ನಮ್ಮ ಆದ್ಯತೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ, ಸಿಎಂ ಅಧಿಕಾರ ಹಂಚಿಕೆ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರಲ್ಲ ಎಂದು ಮಾಧ್ಯಮದವರು ಪ್ರಶ್ನೆಗೆ ಶಿವಕುಮಾರ್ ಈ ರೀತಿ ಪ್ರತಿಕ್ರಿಯಿಸಿದರು.

ಸರ್ಕಾರ ಚೆನ್ನಾಗಿ ನಡೆಯಬೇಕು - ಸಲೀಂ: ಎಂ ಬಿ ಪಾಟೀಲ್ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿರೋಧ ವ್ಯಕ್ತಪಡಿಸಿದ್ದಾರೆ.
ಡಿಕೆ ಸುರೇಶ್ ನಿವಾಸದ ಬಳಿ ಸಲೀಂ ಅಹ್ಮದ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಎಂಬಿ ಪಾಟೀಲ್ ಹೇಳಿಕೆ ನಾನು ನೋಡಿಲ್ಲ. ಆದರೆ ಏನೇ ಮಾತುಕತೆ ಆಗಿದ್ರೂ ಅದು ನಾಲ್ವರು ನಾಯಕರ ಮಧ್ಯೆ ಆಗಿರುವುದು. ಎಐಸಿಸಿ ಅಧ್ಯಕ್ಷರು, ಉಸ್ತುವಾರಿ ಹಾಗೂ ಇಬ್ಬರು ನಾಯಕರ ನಡುವೆ ಆಗಿರುವ ಮಾತುಕತೆ. ಏನೇ ಇದ್ದರೂ ಅದು ಅವರಿಗೆ ಮಾತ್ರ ಗೊತ್ತಿದೆ. ನಮಗೆ ಸರ್ಕಾರ ಚೆನ್ನಾಗಿ ನಡೆಸಬೇಕು, ಜನರ ನಿರೀಕ್ಷೆ ಈಡೇರಿಸಬೇಕು. ವರಿಷ್ಟರ ತೀರ್ಮಾನದಂತೆ ಎಲ್ಲವೂ ನಡೆಯುತ್ತದೆ ಎಂದರು.

ಈ ಸಂಬಂಧ ಸಚಿವ ಪ್ರಿಯಾಂಕ್​ ಖರ್ಗೆ ಸಹ ಮಾತನಾಡಿದ್ದಾರೆ. ಈಗ ಆ ವಿಚಾರ ಬೇಡ, ಹೈಕಮಾಂಡ್​ ಎಲ್ಲದರ ಬಗ್ಗೆ ತೀರ್ಮಾನ ಮಾಡುತ್ತೆ. ಸಚಿವ ಎಂ ಬಿ ಪಾಟೀಲ್​ ಯಾವ ವಿಚಾರದಲ್ಲಿ ಹೀಗೆ ಹೇಳಿದ್ದಾರೆ ಗೊತ್ತಿಲ್ಲ ಎಂದಿದ್ದಾರೆ. ಮತ್ತೊಂದು ಕಡೆ ಈ ಬಗ್ಗೆ ಮಾತನಾಡಿರುವ ಡಿ ಕೆ ಶಿವಕುಮಾರ್​ ಸಹೋದರ ಹಾಗೂ ಸಂಸದ ಡಿ ಕೆ ಸುರೇಶ್​ ಮಾತನಾಡಿ, ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರನ್ನೇ ಕೇಳಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ಆಯ್ಕೆ: ಇಂದು ನಾಮಪತ್ರ ಸಲ್ಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.