ETV Bharat / state

ನಾಳೆ ನಿಗದಿಯಾಗಿದ್ದ ಪದವಿ ಪರೀಕ್ಷೆ ಮುಂದೂಡಿಕೆ: SSLC ಪೂರಕ ಪರೀಕ್ಷೆ ಅಬಾಧಿತ

author img

By

Published : Sep 26, 2021, 4:43 PM IST

Degree Examination Postponed
ಭಾರತ್ ಬಂದ್ ಹಿನ್ನೆಲೆ ಪದವಿ ಪರೀಕ್ಷೆ ಮುಂದೂಡಿಕೆ

ಭಾರತ್​ ಬಂದ್ ಹಿನ್ನೆಲೆಯಲ್ಲಿ ತೃತೀಯ ಬಿ.ಎಸ್ಸಿ/ಬಿಸಿಎ 6ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಆದರೆ ನಿಗದಿಯಂತೆ ಎಸ್ಎಸ್​ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ.

ಬೆಂಗಳೂರು: ಭಾರತ್​ ಬಂದ್​ ಕಾರಣ ನಾಳೆ ನಡೆಯಬೇಕಿದ್ದ ತೃತೀಯ ಬಿ.ಎಸ್ಸಿ/ಬಿಸಿಎ 6ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಎಸ್ಎಸ್ಎಲ್​​ಸಿ ಪೂರಕ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ನೃಪತುಂಗ ವಿಶ್ವವಿದ್ಯಾಲಯ ತಿಳಿಸಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ನಾಳೆ ಭಾರತ್ ಬಂದ್​ಗೆ ಕರೆ ಕೊಟ್ಟಿದ್ದಾರೆ‌. ಈ ಹಿನ್ನೆಲೆಯಲ್ಲಿ ನಾಳೆ ನಿಗದಿಯಾಗಿದ್ದ ತೃತೀಯ ಬಿ.ಎಸ್ಸಿ/ಬಿಸಿಎ 6ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳು ಸೆ.30ರ ಗುರುವಾರ ನಡೆಯುತ್ತವೆ.

ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸಲು ಮಂಡಳಿ ನಿರ್ಧರಿಸಿದ್ದು, ಬಂದ್​​ ನಡುವೆಯೇ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸಜ್ಜಾಗಿದ್ದಾರೆ. ಕೋವಿಡ್ ಭಯದಿಂದ ಹಲವು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದರು. ಹೀಗಾಗಿ ಈ ವಿದ್ಯಾರ್ಥಿಗಳಿಗೆ ನಾಳೆ ಹಾಗೂ 29ರಂದು ಪರೀಕ್ಷೆ ನಡೆಯಲಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ಫ್ರೆಶರ್ಸ್ ಎಂದೇ ಪರಿಗಣಿಸಲಾಗುತ್ತದೆ. ನಾಳೆ ಸಮಾಜ ವಿಜ್ಞಾನ, ವಿಜ್ಞಾನ, ಗಣಿತ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಮೂರು ವಿಷಯಗಳನ್ನು ಸೇರಿಸಿ 120 ಅಂಕಗಳಿಗೆ ಬಹು ಆಯ್ಕೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ‌

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಹಾಗೂ ಕೆಎಸ್ಆರ್​​ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರವೇಶ ಪತ್ರವನ್ನು ತೋರಿಸಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಸಂಚರಿಸಬಹುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.