ETV Bharat / state

ಇಲಾಖೆ ಮುಂಬಡ್ತಿ ಸಮಿತಿ ಸಭೆ: ಸ್ಥಗಿತಗೊಳಿಸಿದ್ದ ಸುತ್ತೋಲೆ ವಾಪಸ್..

author img

By

Published : Dec 31, 2022, 7:39 PM IST

department-promotion-committee-meeting-suspended-circular-returned
ಇಲಾಖೆ ಮುಂಬಡ್ತಿ ಸಮಿತಿ ಸಭೆ: ಸ್ಥಗಿತಗೊಳಿಸಿದ್ದ ಸುತ್ತೋಲೆ ವಾಪಸ್..

ಮೀಸಲಾತಿಗೆ ರೋಸ್ಟರ್ ಅಂತಿಮಗೊಳಿಸುವ ಪ್ರಕ್ರಿಯೆ ಮುಕ್ತಾಯ- ನೇರ ನೇಮಕಾತಿ ಮತ್ತು ಬಡ್ತಿ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಹೊರಡಿಸಿದ್ದ ಸುತ್ತೋಲೆ ಹಿಂಪಡೆದ ಸರ್ಕಾರ.

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ಪ್ರಮಾಣಕ್ಕೆ ಅನುಗುಣವಾಗಿ ರೋಸ್ಟರ್‌ ಬಿಂದುಗಳನ್ನು ಗುರುತಿಸುವವರೆಗೂ ಎಲ್ಲಾ ಇಲಾಖೆಗಳಲ್ಲಿ ನೇರ ನೇಮಕಾತಿ ಮತ್ತು ಬಡ್ತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಿ ಹೊರಡಿಸಲಾಗಿದ್ದ ಸುತ್ತೋಲೆಯನ್ನು ಹಿಂಪಡೆಯಲಾಗಿದೆ.

ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದ ಹಿನ್ನೆಲೆಯಲ್ಲಿ ಪರಿಷ್ಕೃತ ಮೀಸಲಾತಿ ಅನುಷ್ಠಾನಗೊಳ್ಳುವವರೆಗೆ ನೇರ ನೇಮಕಾತಿ ತಡೆಹಿಡಿದು, ಮೀಸಲಾತಿ ಅನ್ವಯ ಮುಂಬಡ್ತಿ ನೀಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇಲಾಖೆ ಮುಂಬಡ್ತಿ ಸಮಿತಿ ಸಭೆ ನಡೆಸಬಾರದು ಎಂದು ನವೆಂಬರ್​ 18 ರಂದು ಸುತ್ತೋಲೆ ಹೊರಡಿಸಿದ್ದರು.

ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿ, ಪರಿಶಿಷ್ಟರಿಗೆ ಶೈಕ್ಷಣಿಕ ಸಂಸ್ಥೆಗಳು, ಸರ್ಕಾರಿ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲು ಹೆಚ್ಚಿಸುವ ಸುಗ್ರೀವಾಜ್ಞೆ ನವೆಂಬರ್ 1 ರಿಂದ ಜಾರಿಗೆ ಬಂದಿದೆ.

ನೇರ ನೇಮಕಾತಿ ಪದೋನ್ನತಿಯಲ್ಲಿ ಪರಿಶಿಷ್ಟರಿಗೆ ಮೀಸಲಾತಿಗೆ ರೋಸ್ಟರ್ ಅಂತಿಮಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಪ್ರಕ್ರಿಯೆ ಅಂತಿಮವಾಗಿ ಅಧಿಕೃತವಾಗಿ ಪ್ರಕಟವಾಗುವವರೆಗೆ ನೇರ ನೇಮಕಾತಿ ಪ್ರಕ್ರಿಯೆ ಮತ್ತು ಮುಂಬಡ್ತಿ ತಡೆ ಹಿಡಿಯಬೇಕು ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ನಿರ್ದೇಶನ ನೀಡಿದ್ದರು.

ಇದೀಗ ನೇರ ನೇಮಕಾತಿ ಪದೋನ್ನತಿಯಲ್ಲಿ ಪರಿಶಿಷ್ಟರಿಗೆ ಮೀಸಲಾತಿಗೆ ರೋಸ್ಟರ್ ಅಂತಿಮಗೊಳಿಸುವ ಪ್ರಕ್ರಿಯೆ ಮುಕ್ತಾಯವಾಗಿದ್ದು, ಈ ಪ್ರಕ್ರಿಯೆ ಅಂತಿಮವಾಗಿ ಅಧಿಕೃತವಾಗಿ ಪ್ರಕಟವಾಗಿರುವ ಕಾರಣ ಸುತ್ತೋಲೆಯನ್ನು ಹಿಂಪಡೆಯಲಾಗಿದೆ.

ಇದನ್ನೂ ಓದಿ: ಹಿರಿಯ ಪೊಲೀಸ್ ಅಧಿಕಾರಿಗಳ ಬಡ್ತಿ, ವರ್ಗಾವಣೆ ಮಾಡಿ ಸರ್ಕಾರ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.