ETV Bharat / state

4 ಸಾವಿರ ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ನೀಡಲು ಕ್ರಮ: ಸಿಎಂ ಸಿದ್ದರಾಮಯ್ಯ

author img

By ETV Bharat Karnataka Team

Published : Dec 3, 2023, 5:37 PM IST

Disability Day 2023 program: ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಶೇಷ ಚೇತನರಿಗೆ, ಸಂಸ್ಥೆಗಳಿಗೆ ಹಾಗೂ ವಿಶೇಷ ಶಿಕ್ಷಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಿದರು.

Disability Day 2023 program inaugurated by CM Siddaramaiah
ವಿಕಲಚೇತನರ ದಿನಾಚರಣೆ 2023 ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2023-24ನೇ ಸಾಲಿನಲ್ಲಿ 4,000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭಾನುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆ 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. "ಇಂದು ವಿಶ್ವ ವಿಶೇಷ ಚೇತನರ ದಿನವಾಗಿದೆ. 2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ 13,24,205 ವಿಶೇಷ ಚೇತನರಿದ್ದಾರೆ. ಇವರು ಸಮಾಜಕ್ಕೆ ಹೊರೆ ಅಲ್ಲ. ಬೇರೆಯವರಂತೆ ಅವರಿಗೂ ಈ ಸಮಾಜದಲ್ಲಿ ಎಲ್ಲಾ ಅವಕಾಶಗಳೂ ಅವರಿಗಿವೆ. ಉದ್ಯೋಗ, ಬದುಕಿನ ಹಕ್ಕುಗಳನ್ನು ಅವರೂ ಪಡೆದಿದ್ದಾರೆ. ವಿಶೇಷ ಚೇತನರಿಗೆ ಶಿಕ್ಷಣ, ಉದ್ಯೋಗಗಳಲ್ಲಿ ಸಮಾನ ಅವಕಾಶ ದೊರಕಿಸುವುದು ಸರ್ಕಾರದ ಕರ್ತವ್ಯ" ಎಂದರು.

Disability Day 2023 program
ವಿಕಲಚೇತನರ ದಿನಾಚರಣೆ 2023 ಕಾರ್ಯಕ್ರಮ

"ಇತ್ತೀಚೆಗೆ ನಡೆಸಲಾದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ವಿಶೇಷ ಚೇತನರು ಆಗಮಿಸಿದ್ದರು. ಉದ್ಯೋಗ, ಶಿಕ್ಷಣ ಹಾಗೂ ವಾಹನ ಖರೀದಿಗೆ ನೆರವು ಸೇರಿದಂತೆ ಹಲವು ಬೇಡಿಕೆಗಳಿಗೆ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ಪ್ರಸಕ್ತ ಸಾಲಿನಲ್ಲಿ 10 ವಿಶೇಷ ಚೇತನ ಮಕ್ಕಳ ವಸತಿ ಶಾಲೆಗಳನ್ನು 2 ಕೋಟಿ ವೆಚ್ಚದಲ್ಲಿ ಏಳು ಜಿಲ್ಲೆಗಳಲ್ಲಿ ನಿರ್ಮಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ವಿಶೇಷ ಚೇತನರ ಶೈಕ್ಷಣಿಕ, ವೈದ್ಯಕೀಯ, ಪುನರ್ವಸತಿ, ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿಗಾಗಿ 284.27 ಕೋಟಿ ರೂ. ಇಡಲಾಗಿದೆ. ಮರಣ ಹೊಂದಿದ ವಿಕಲಚೇತನರಿಗೆ ನೀಡುವ ಪರಿಹಾರವನ್ನು 50 ಸಾವಿರದಿಂದ 1 ಲಕ್ಷಕ್ಕೆ ಏರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ವಿಶೇಷ ಚೇತನರು ಕ್ರೀಡೆಯೂ ಸೇರಿದಂತೆ ಎಲ್ಲಾ ರಂಗಗಳಲ್ಲಿ ಅಪ್ರತಿಮ ಸಾಧನೆ ತೋರುತ್ತಿದ್ದಾರೆ. ಆದ್ದರಿಂದ ಅವರು ಸಮಾಜಕ್ಕೆ ಹೊರೆ ಎನ್ನುವ ಭಾವನೆಯನ್ನು ದೂರ ಮಾಡಬೇಕಿದೆ" ಎಂದು ಹೇಳಿದರು.

Disability Day 2023 program
ವಿಕಲಚೇತನರ ದಿನಾಚರಣೆ 2023 ಕಾರ್ಯಕ್ರಮ

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವಿಶೇಷ ಚೇತನರಿಗೆ, ಸಂಸ್ಥೆಗಳಿಗೆ ಹಾಗೂ ವಿಶೇಷ ಶಿಕ್ಷಕರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಿದರು.

Disability Day 2023 program
ವಿಕಲಚೇತನರ ದಿನಾಚರಣೆ 2023 ಕಾರ್ಯಕ್ರಮ

ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ. ಜಿ.ಸಿ. ಪ್ರಕಾಶ್, ವಿಶೇಷ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಎನ್. ಸಿದ್ದೇಶ್ವರ, ವಿಶೇಷ ಚೇತನ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ, ಕರ್ನಾಟಕ ಬೌದ್ಧಿಕ ವಿಕಲಚೇತನ ಮಕ್ಕಳ ಪಾಲಕರ ಸಂಸ್ಥೆಯ ಮಾಜಿ ಅಧ್ಯಕ್ಷ ಜೆ.ಪಿ ಗಡ್ಕರಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಜಯಭೇರಿ ಹಿಂದೆ ರಾಜ್ಯ ಕೈ ನಾಯಕರ ತಂತ್ರಗಾರಿಕೆ: ಹೈದರಾಬಾದ್​​ನಲ್ಲೇ ಬೀಡುಬಿಟ್ಟ ಡಿಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.