ETV Bharat / state

ನನ್ನ ಜನ್ಮದಿನದಂದು ಶುಭಾಶಯದ ಬದಲು ಬಿಜೆಪಿ ವಿರುದ್ಧದ ಹೋರಾಟದ ಜಾಹೀರಾತು ನೀಡಿ: ಡಿಕೆಶಿ

author img

By

Published : May 6, 2022, 4:57 PM IST

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಳ್ಳುವ ಹೋರಾಟ, ಪ್ರತಿಭಟನೆಗಳ ಬಗ್ಗೆ ಜಾಹೀರಾತು ನೀಡಬೇಕೆಂದು ವಿನಂತಿಸುತ್ತೇನೆ. ಅದನ್ನೇ ನೀವು ನನಗೆ ಸಲ್ಲಿಸುವ ಜನ್ಮದಿನದ ಶುಭಾಶಯ ಎಂದು ಪರಿಗಣಿಸುತ್ತೇನೆ ಎಂದು ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

dk-shivakumar-appealed-not-to-celebrate-his-birthday
ನನ್ನ ಜನ್ಮದಿನ ಶುಭಾಶಯದ ಬದಲು ಬಿಜೆಪಿ ವಿರುದ್ಧದ ಹೋರಾಟದ ಜಾಹೀರಾತು ನೀಡಿ: ಡಿಕೆಶಿ

ಬೆಂಗಳೂರು: ಯಾರೂ ಕೂಡ ತಮ್ಮ ಜನ್ಮದಿನ ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ತಮ್ಮ ಜನ್ಮದಿನವನ್ನು ಆಚರಿಸಬಾರದು. ಫ್ಲೆಕ್ಸ್, ಕಟೌಟ್, ಭಿತ್ತಿಚಿತ್ರ, ಪೋಸ್ಟರ್ ಯಾವುದನ್ನೂ ಹಾಕಬಾರದು ಎಂದು ತಿಳಿಸಿದ್ದಾರೆ.

ಈ ತಿಂಗಳು 12ರಿಂದ 18ರವರೆಗೆ ತಾವು ಊರಿನಲ್ಲಿ ಇರುವುದಿಲ್ಲ. ರಾಜಸ್ಥಾನದ ಉದಯಪುರದಲ್ಲಿ ನಡೆಯುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಪಾಲ್ಗೊಳ್ಳಲು ತೆರಳಲಿದ್ದೇನೆ. ಹೀಗಾಗಿ ಜನ್ಮದಿನ ಮೇ 15ರಂದು ಯಾರಿಗೂ ಸಿಗುವುದಿಲ್ಲ. ಆ ದಿನ ಯಾರೂ ಕೂಡ ಶುಭಾಶಯ ಹೇಳಲು, ಅಭಿನಂದಿಸಲು ಮನೆ ಬಳಿ ಬರಬಾರದು ಎಂದು ವಿನಮ್ರವಾಗಿ ವಿನಂತಿಸುತ್ತೇನೆ. ಇದನ್ನು ಯಾರೂ ತಪ್ಪಾಗಿ ಭಾವಿಸಬಾರದು ಎಂದು ಹೇಳಿದ್ದಾರೆ.

ಜನ್ಮದಿನದ ನಿಮಿತ್ತ ಯಾರೂ ಕೂಡ ಮಾಧ್ಯಮಗಳಲ್ಲಿ ಶುಭಾಶಯಗಳ ಜಾಹೀರಾತು ನೀಡಬಾರದು. ಒಂದೊಮ್ಮೆ ಕೊಡಲೇಬೇಕು ಎಂದೆನಿಸಿದರೆ ಮುಂದೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಳ್ಳುವ ಹೋರಾಟ, ಪ್ರತಿಭಟನೆಗಳ ಬಗ್ಗೆ ಜಾಹೀರಾತು ನೀಡಬೇಕು ಎಂದು ವಿನಂತಿಸುತ್ತೇನೆ. ಅದನ್ನೇ ನೀವು ನನಗೆ ಸಲ್ಲಿಸುವ ಜನ್ಮದಿನದ ಶುಭಾಶಯ ಎಂದು ಪರಿಗಣಿಸುತ್ತೇನೆ ಎಂದು ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 'ನಿಮ್ಮನ್ನು ಸಿಎಂ ಮಾಡ್ತೀವಿ, 2,500 ಕೋಟಿ ರೆಡಿ ಮಾಡಿಡಿ ಅಂದಿದ್ರು': ಯತ್ನಾಳ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.