ETV Bharat / state

D K Shivakumar case: ಪ್ರಾಥಮಿಕ ತನಿಖೆ 3 ತಿಂಗಳಲ್ಲಿ ಮುಗೀಬೇಕು, 7 ತಿಂಗಳು ನಡೆಸಲಾಗಿದೆ: ಡಿ.ಕೆ.ಶಿವಕುಮಾರ್ ಪರ ವಕೀಲರ ವಾದ

author img

By

Published : Jul 27, 2023, 6:53 AM IST

D K Shivakumar Disproportionate assets case: ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ಗುರುವಾರ ಹೈಕೋರ್ಟ್‌ನಲ್ಲಿ ನಡೆಯಿತು.

dk shivakumar
ಡಿ ಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ

ಬೆಂಗಳೂರು : ಸಾಮಾನ್ಯವಾಗಿ ಪ್ರಕರಣದ ಪ್ರಾಥಮಿಕ ತನಿಖೆಯನ್ನು ಮೂರು ತಿಂಗಳು ನಡೆಸಲಾಗುತ್ತದೆ. ಆದರೆ, ಡಿ.ಕೆ.ಶಿವಕುಮಾರ್ ಪ್ರಕರಣದಲ್ಲಿ ಏಳು ತಿಂಗಳು ನಡೆಸಿದ್ದು, ಸಿಬಿಐ ಕೈಪಿಡಿ ಪಾಲಿಸಿಲ್ಲ. ಇಷ್ಟು ಸುದೀರ್ಘ ಅವಧಿ ಏಕೆ ಎನ್ನುವುದು ಗೊತ್ತಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಸಂಬಂಧ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ಮತ್ತು ತನಿಖೆ ರದ್ದುಪಡಿಸುವಂತೆ ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಪ್ರಕರಣದಲ್ಲಿ ಆರೋಪಿಯಾಗಿರುವ ಡಿ.ಕೆ.ಶಿವಕುಮಾರ್ ಅವರು ರಾಜಕೀಯ ದುರುದ್ದೇಶ ಎಂದು ಹೇಳುವ ಬದಲಾಗಿ ಯಾರು ಅದನ್ನು ಮಾಡುತ್ತಿದ್ದಾರೆ ಎಂಬುದನ್ನು ಉಲ್ಲೇಖಿಸಿ, ಅವರನ್ನು ತಮ್ಮ ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿಸಬೇಕಿತ್ತು ಎಂಬ ಕೇಂದ್ರೀಯ ತನಿಖಾ ದಳದ (ಸಿಬಿಐ) ವಾದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ ಪರ ವಕೀಲರು, "ರಾಜಕೀಯ ಎದುರಾಳಿಗಳನ್ನು ಹಲವು ರೀತಿಯ ದಾವೆಯಲ್ಲಿ ಸಿಲುಕಿಸುವುದು ರಾಜಕೀಯ ದುರುದ್ದೇಶವೇ ಆಗಿರಲಿದೆ. ಹೀಗಾಗಿ, ಇಲ್ಲಿ ಯಾರನ್ನೂ ಪ್ರತಿವಾದಿ ಮಾಡುವ ಅಗತ್ಯವಿಲ್ಲ. ನಮ್ಮ ಕಕ್ಷಿದಾರರ ಬಳಿ ಅಕ್ರಮ ಹಣ ಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ವಿಚಾರಣೆ, ಈಗ ಸಿಬಿಐಯಿಂದ ತನಿಖೆ ನಡೆಸಲಾಗುತ್ತಿದೆ. ಈ ಅರ್ಥದಲ್ಲಿ ರಾಜಕೀಯ ದುರುದ್ದೇಶ" ಎಂದು ಕರೆದಿರುವುದಾಗಿ ವಿವರಿಸಿದರು.

ಇದನ್ನೂ ಓದಿ : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಹಲವು ವರ್ಷಗಳ ಬಳಿಕ ದೋಷಾರೋಪ ಪಟ್ಟಿ ಸಲ್ಲಿಕೆ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಎಫ್‌ಐಆರ್ ದಾಖಲಿಸುವುದಕ್ಕೂ ಮುನ್ನ ನಡೆಸಿರುವ ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಮಾಹಿತಿ ಉಲ್ಲೇಖಿಸಿಲ್ಲ. ಇದು ಗಂಭೀರ ಅನುಮಾನಕ್ಕೆ ಕಾರಣವಾಗಿದೆ. ಚುನಾವಣಾ ಆಯೋಗಕ್ಕೆ 2013ರಲ್ಲಿ ಸಲ್ಲಿಸಿರುವ ಅಫಿಡವಿಟ್ ಬೆನ್ನು ಬಿದ್ದಿದ್ದಾರೆ. ಆದರೆ, ಯಾವುದೇ ರೀತಿಯಲ್ಲಿಯೂ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ತೋರಿಸಲು ಅವರಿಗೆ ಸಾಧ್ಯವಾಗಿಲ್ಲ ಎಂದರು.

ಇದನ್ನೂ ಓದಿ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪ : ಡಿಕೆಶಿ ವಿರುದ್ದದ ಪ್ರಕರಣದ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆ ಮತ್ತೆ ವಿಸ್ತರಣೆ

ಪ್ರಕರಣ ಸಂಬಂಧ ಕೇಸ್ ಡೈರಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಿಬಿಐಗೆ ಆದೇಶಿಸಬೇಕು ಎಂದು ಅವರು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಕೇಸ್ ಡೈರಿ ಸಲ್ಲಿಸುವುದು ಅಗತ್ಯವೇ?, ಅದು ಅಗತ್ಯವಾದರೆ ಅದನ್ನು ತರಿಸಿಕೊಂಡು ಪರಿಶೀಲಿಸಲಾಗುತ್ತದೆ. ಕೇಸ್ ಡೈರಿ ಸಮನ್ಸ್​ ಮಾಡಿ ಎಂಬ ಅಂಶವನ್ನು ಒತ್ತಿ ಹೇಳಬೇಡಿ ಎಂದು ತಿಳಿಸಿತು. ನಮಗೆ ಅನುಮಾನ ಬಂದರೆ ಸಮನ್ಸ್​ ನೀಡಿ ಸಿಬಿಐ ಸರಿಯಾದ ದಾರಿಯಲ್ಲಿ ಹೋಗುತ್ತಿದೆಯೇ, ಇಲ್ಲವೇ ಎಂದು ಪರಿಶೀಲಿಸಲಾಗುವುದು ಎಂದು ಹೇಳಿದ ಕೋರ್ಟ್ ವಿಚಾರಣೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.