ETV Bharat / state

ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿಕೆಶಿ

author img

By

Published : Mar 25, 2023, 2:15 PM IST

Updated : Mar 25, 2023, 4:38 PM IST

DK Shivakumar
ಅಧ್ಯಕ್ಷ ಡಿ.ಕೆ ಶಿವಕುಮಾರ್

ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡಲಾಗಿದೆ. ನಾವು ಇದನ್ನು ಖಂಡಿಸುತ್ತೇವೆ. ನ್ಯಾಯಾಲಯದಲ್ಲಿ ಈ ವಿಚಾರವಾಗಿ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇದೆ-.

ಬೆಂಗಳೂರು: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದರು. ಸದಾಶಿವ ನಗರ ನಿವಾಸ ಹಾಗೂ ಶಾಂಗ್ರಿಲಾ ಹೋಟೆಲ್ ಬಳಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಕರ್ನಾಟಕದಲ್ಲಿ ಇಬ್ಬರು ಬಿಜೆಪಿ ಶಾಸಕರು ಚೆಕ್ ಬೌನ್ಸ್ ಹಾಗೂ ಇತರೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅವರನ್ನು ಯಾಕೆ ಅನರ್ಹಗೊಳಿಸಿಲ್ಲ? ಅವರಿಗೆ ಬೇರೆ, ನಮಗೆ ಬೇರೆ ಕಾನೂನು ಇದೆಯೇ ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡಲಾಗಿದೆ. ನಾವು ಇದನ್ನು ಖಂಡಿಸುತ್ತೇವೆ. ನ್ಯಾಯಾಲಯದಲ್ಲಿ ಈ ವಿಚಾರವಾಗಿ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದರು.

ಚಂದ್ರನ ಹಿಂದೆ ಸೂರ್ಯನ ಬೆಳಕು ಬರಲಿದೆ: ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಮಾತನಾಡಿದ ಶಿವಕುಮಾರ್ ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ 2ನೇ ಪಟ್ಟಿ ಪ್ರಕಟಿಸಲಾಗುವುದು. ಆ ಮೂಲಕ ಚಂದ್ರನ ಹಿಂದೆ ಸೂರ್ಯನ ಬೆಳಕು ಆಗಮಿಸಲಿದೆ ಎಂದು ಡಿಕೆಶಿ ತಿಳಿಸಿದರು.

ಬಹುತೇಕ ಶೇ.95 ರಷ್ಟು ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ. ಕೆಲವು ಕ್ಷೇತ್ರಗಳಲ್ಲಿ ಮಾತುಕತೆ-ಸಂಧಾನ ನಡೆಯುತ್ತಿದೆ. 2ನೇ ಪಟ್ಟಿಯಲ್ಲಿ ಉಳಿದ ಹೆಸರು ಪ್ರಕಟವಾಗಲಿದೆ ಎಂದು ತಿಳಿಸಿದರು. ಧ್ರುವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಈ ಕ್ಷೇತ್ರದಲ್ಲಿ ಧ್ರುವನಾರಾಯಣ ಅವರು ಸ್ಪರ್ಧಿಸಬೇಕಿತ್ತು. ಆದರೆ ಅವರು ನಮ್ಮನ್ನು ಅಗಲಿದ್ದಾರೆ. ಹೀಗಾಗಿ ಯುವಕರಾದ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆ. ವಿರೋಧದ ನಡುವೆ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಿರುವ ಬಗ್ಗೆ ಕೇಳಿದಾಗ ಪುಟ್ಟಣ್ಣ ಅವರು ನಾಲ್ಕೂವರೆ ವರ್ಷಗಳ ಕಾಲ ಪರಿಷತ್ ಅಧಿಕಾರ ತ್ಯಜಿಸಿ ಪಕ್ಷ ಸೇರಿದ್ದಾರೆ. ಹೀಗಾಗಿ ಅವರಿಗೆ ಒಂದು ಅವಕಾಶ ಕಲ್ಪಿಸಲು ಪಕ್ಷ ತೀರ್ಮಾನಿಸಿದೆ ಎಂದು ಡಿ ಕೆ ಶಿವಕುಮಾರ್​ ಸ್ಪಷ್ಟನೆ ನೀಡಿದರು.

ತೀರ್ಥಹಳ್ಳಿ ಸೇರಿದಂತೆ ಪ್ರಮುಖ ಸಂಧಾನ ಕ್ಷೇತ್ರಗಳಲ್ಲಿ ಟಿಕೆಟ್ ಪ್ರಕಟಿಸದಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ ಎಲ್ಲವೂ ಸರಿ ಹೋಗಲಿದೆ ಎಂದರು. ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವಾಗಿ ಮಾತನಾಡುತ್ತ, ಕ್ಷೇತ್ರ ಆಯ್ಕೆಯನ್ನು ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅವರು ವರುಣಾದಿಂದ ಸ್ಪರ್ಧಿಸಲು ಇಚ್ಛಿಸಿದ್ದು, ಪಕ್ಷ ಟಿಕೆಟ್ ನೀಡಿದೆ ಎಂದು ಡಿಕೆಶಿ ತಿಳಿಸಿದರು. ಕೋಲಾರ ಹಾಗೂ ಬಾದಾಮಿ ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸಬಹುದೇ ಎಂಬ ಪ್ರಶ್ನೆಗೆ ಈ ಪ್ರಶ್ನೆಯನ್ನು ಹೈಕಮಾಂಡ್​​ಗೆ ಕೇಳಬೇಕು ಎಂದು ಅವರು ಹೇಳಿದರು.

  • ಬೆಂಗಳೂರಿನ ಅಪಾರ್ಟ್‌ಮೆಂಟ್ ಜನತೆಗೆ ರಕ್ಷಣೆ ನೀಡಬೇಕು. ಅದಕ್ಕಾಗಿ ನಾವು ಸಿದ್ದರಿದ್ದೇವೆ. ಮೇಕೆದಾಟು ಯೋಜನೆ‌ ಮೂಲಕ ಬೆಂಗಳೂರಿನ ಜನರಿಗೆ ಕುಡಿಯುವ ನೀರು, ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಗಲಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ. ಉತ್ತಮ ಬೆಂಗಳೂರು ನಿರ್ಮಾಣಕ್ಕೆ, ಸಮೃದ್ಧ ಕರ್ನಾಟಕ್ಕೆ ನಾವೆಲ್ಲರೂ ಕೈ ಜೋಡಿಸೋಣ.
    2/2

    — DK Shivakumar (@DKShivakumar) March 25, 2023 " class="align-text-top noRightClick twitterSection" data=" ">

ಅಪಾರ್ಟ್ಮೆಂಟ್ ನಿವಾಸಿಗಳ ಸಭೆ ಕುರಿತು ಮಾತನಾಡಿದ ಅವರು ಬೆಂಗಳೂರು ಅಭಿವೃದ್ಧಿಯಾಗುತ್ತಿರುವ ಪ್ರದೇಶ. ಇಲ್ಲಿ ಸಂಚಾರ ದಟ್ಟಣೆ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಅವರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ರೂಪಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು. ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯಿಸಿ ಇದೆಲ್ಲವೂ ಬೋಗಸ್ ಘೋಷಣೆ. ರಾಜ್ಯದ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿರುವ ವೈಶಿಷ್ಟ್ಯಗಳೇನು ಗೊತ್ತಾ?

Last Updated :Mar 25, 2023, 4:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.