ETV Bharat / state

ಪದೇ ಪದೆ ನಮಗೆ ಯಾಕೆ ಇಡಿ ನೊಟೀಸ್ ನೀಡಿ ಹಿಂಸೆ ನೀಡುತ್ತಿದೆಯೋ ಗೊತ್ತಿಲ್ಲ : ಡಿ.ಕೆ.ಶಿವಕುಮಾರ್ ಬೇಸರ

author img

By

Published : Nov 5, 2022, 5:34 PM IST

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸಿಬಿಐ ಹಾಗೂ ಇಡಿ ಪ್ರಕರಣ ದಾಖಲಿಸಿದ್ದು, ಈ ರೀತಿ ದಾಖಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಗೆ ಅರ್ಜಿ ಹಾಕಿದ್ದೇನೆ. ಕಾನೂನು ಮೇಲೆ ಗೌರವ ಇದೆ. ಅವರು ಏನು ಹೇಳುತ್ತಾರೋ ನೋಡೋಣ. ಪದೇ ಪದೇ ನಮಗೆ ಯಾಕೆ ನೊಟೀಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

dk-shivakumar-statement-on-ed-notice
ಪದೇ ಪದೇ ನಮಗೆ ಯಾಕೆ ಇಡಿ ನೊಟೀಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ : ಡಿ.ಕೆ.ಶಿವಕುಮಾರ್ ಬೇಸರ

ಬೆಂಗಳೂರು : ಇಡಿ ಅವರಿಗೆ ನಾನು ಎಲ್ಲ ಉತ್ತರ ನೀಡಿದ್ದೆ. ಆದರೆ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖಾಧಿಕಾರಿ ಬದಲಾಗಿದ್ದಾರೆ ಎಂಬ ಕಾರಣದಿಂದ ನ. 7 ರಂದು ವಿಚಾರಣೆಗೆ ಹಾಜರಾಗುವಂತೆ ನನಗೆ ಹಾಗೂ ನನ್ನ ಸಹೋದರನಿಗೆ ನೊಟೀಸ್ ನೀಡಿದ್ದಾರೆ. ಅವರು ಕೆಲವು ದಾಖಲೆ ಕೇಳಿದ್ದು ಅವುಗಳನ್ನು ಸಲ್ಲಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಇಡಿ ಸಮನ್ಸ್ ವಿಚಾರವಾಗಿ ಮಾತನಾಡಿ, ಇನ್ನು ಕೆಲವು ದಾಖಲೆ ಕಳುಹಿಸಬೇಕು. ಮುಂದಿನ ದಿನಗಳಲ್ಲಿ ಕಳಿಸುತ್ತೇನೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸಿಬಿಐ ಹಾಗೂ ಇಡಿ ಪ್ರಕರಣ ದಾಖಲಿಸಿದ್ದು, ಈ ರೀತಿ ದಾಖಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​​​ಗೆ ಅರ್ಜಿ ಹಾಕಿದ್ದೇನೆ. ಕಾನೂನು ಮೇಲೆ ಗೌರವ ಇದೆ. ಅವರು ಏನು ಹೇಳುತ್ತಾರೋ ನೋಡೋಣ. ಪದೇ ಪದೇ ನಮಗೆ ಯಾಕೆ ನೊಟೀಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ ಎಂದರು.

ಪದೇ ಪದೇ ನಮಗೆ ಯಾಕೆ ಇಡಿ ನೊಟೀಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ : ಡಿ.ಕೆ.ಶಿವಕುಮಾರ್ ಬೇಸರ

ಪಾವಗಡ ಸೋಲಾರ್ ಪಾರ್ಕ್ ಯೋಜನೆ ಮೆಚ್ಚಿ ಕೇಂದ್ರ ಸರ್ಕಾರ ಪ್ರಶಸ್ತಿ: ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿನ ರೈತಪರ ನೀತಿಯನ್ನು ಕೇಂದ್ರ ಸರ್ಕಾರ ಮೆಚ್ಚಿ ಪ್ರಶಸ್ತಿ ನೀಡಿದೆ. ಇದನ್ನು ಕರ್ನಾಟಕ ಮಾಡೆಲ್ ಎಂದೂ ಬಣ್ಣಿಸಿ, ಇತರ ರಾಜ್ಯಗಳಿಗೂ ಇದನ್ನು ಅನುಸರಿಸುವಂತೆ ಹೇಳಿತ್ತು. ಈಗ ರಾಜ್ಯ ಸರ್ಕಾರ ಈ ಯೋಜನೆ ಬಗ್ಗೆ ಯಾವುದೇ ತನಿಖೆ ನಡೆಸಿದರೂ ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು.

ಸೋಲಾರ್ ಪಾರ್ಕ್ ಯೋಜನೆಯಲ್ಲಿ ಅಕ್ರಮ ನಡೆದಿದೆ, ಇದರ ತನಿಖೆ ಮಾಡುತ್ತೇವೆ ಎನ್ನುವ ರಾಜ್ಯ ಸರ್ಕಾರವು ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಈ ಯೋಜನೆ ಪ್ರಸ್ತಾಪಿಸಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು, 'ಚರಿತ್ರೆ ಯಾರೂ ಬದಲಿಸಲು ಸಾಧ್ಯವಿಲ್ಲ.

ನಾನು ಯಾವ ಯೋಜನೆ ಮಾಡಿದ್ದೇನೆ, ಎಷ್ಟು ಪಾರದರ್ಶಕವಾಗಿ ಮಾಡಿದ್ದೇನೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿದಿದೆ. ಸೋಲಾರ್ ಪಾರ್ಕ್ ಯೋಜನೆಯಲ್ಲಿ ಬಳಕೆಯಾದ ಜಮೀನು ರೈತರ ಬಳಿಯೇ ಉಳಿದುಕೊಂಡು, ರೈತರೇ 20 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವಂತಾಗಿದೆ ಎಂದು ಹೇಳಿದರು.

ಸಣ್ಣ ತಪ್ಪು ಮಾಡಿದ್ದರೂ ಶಿಕ್ಷೆಗೆ ಬದ್ಧ : ಇನ್ನು ಈ ಯೋಜನೆಗೆ 6 ತಿಂಗಳ ಮುಂಚಿತವಾಗಿ ಜಾಹೀರಾತು ನೀಡಿ ಟೆಂಡರ್ ಕರೆಯಲಾಗಿತ್ತು. ಇದೆಲ್ಲವನ್ನೂ ರಾಜ್ಯದ ಅಧಿಕಾರಿಗಳು ಮಾಡಿದ್ದರು. ಈಗಿನ ಇಲಾಖೆ ಕಾರ್ಯದರ್ಶಿಗಳು, ಸರ್ಕಾರ ಯಾರನ್ನೂ ಕೆಆರ್ ಸಿ ಮುಖ್ಯಸ್ಥರನ್ನಾಗಿ ಮಾಡಿದೆಯೋ ಅವರೂ ಈ ಯೋಜನೆ ಭಾಗವಾಗಿದ್ದರು. ಅವರನ್ನೇ ಈ ಯೋಜನೆ ಬಗ್ಗೆ ಕೇಳಲಿ, ತನಿಖೆ ಮಾಡಲಿ. ಈ ಯೋಜನೆಯಲ್ಲಿ ನಾನು ಸಣ್ಣ ತಪ್ಪು ಮಾಡಿದ್ದರೂ ಎಂತಹುದೇ ಶಿಕ್ಷೆಗೆ ನಾನು ಬದ್ಧ ಎಂದರು.

ಈಗ ಇಡೀ ರಾಜ್ಯದಲ್ಲಿ ಯಾವ್ಯಾವ ಹಗರಣ ನಡೆದಿವೆ, ಬಿಟ್ ಕಾಯಿನ್ ಪ್ರಕರಣದಿಂದ ಹಿಡಿದು ಏನೆಲ್ಲ ಪ್ರಕರಣಗಳನ್ನು ಅವರು ಹೇಗೆಲ್ಲ ಮುಚ್ಚಿಹಾಕಿದ್ದಾರೆ ಎಂದು ಗೊತ್ತಿದೆ. ಅವರು ಏನು ಮಾಡುತ್ತಾರೋ ಮಾಡಲಿ, ಸಮಯ ಬಂದಾಗ ನಾನು ಮಾತನಾಡುತ್ತೇನೆ ಎಂದು ತಿಳಿಸಿದರು.

ಸರ್ಕಾರದ ವೈಫಲ್ಯ : ತುಮಕೂರು ಆಸ್ಪತ್ರೆ ಅಧಿಕಾರಿಗಳಿಂದಾಗಿ ಗರ್ಭಿಣಿ ಹಾಗೂ ಅವಳಿ ಮಕ್ಕಳ ಸಾವು ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಇದು ಸರ್ಕಾರದ ವೈಫಲ್ಯ. ಈ ಸರ್ಕಾರಕ್ಕೆ ಕಣ್ಣು, ಕಿವಿ ಹಾಗೂ ಹೃದಯವಿಲ್ಲ ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ. ಅದಕ್ಕೆ ಇದೇ ಸಾಕ್ಷಿ. ಸರ್ಕಾರಕ್ಕೆ ಜನರ ನೋವು, ಭಾವನೆ ಗೊತ್ತಿಲ್ಲ. ಜನರ ಕಷ್ಟಕ್ಕೆ ಸ್ಪಂದಿಸುವುದು ತಿಳಿದಿಲ್ಲ.

ಸರ್ಕಾರ ಈಗ ಅಧಿಕಾರಿಗಳನ್ನು ಅಮಾನತು ಮಾಡುವುದಾದರೆ, ಆಕ್ಸಿಜನ್ ದುರಂತ ಸಂದರ್ಭದಲ್ಲಿ 36 ಜನ ಸತ್ತಾಗ ಯಾಕೆ ಅಮಾನತು ಮಾಡಲಿಲ್ಲ. ಆಗ ಯಾವುದೇ ಅಧಿಕಾರಿ ವಿರುದ್ಧ ಕ್ರಮವೂ ಇಲ್ಲ, ಸಚಿವರ ರಾಜೀನಾಮೆಯೂ ಇಲ್ಲ. ನಾನು ಸಂತ್ರಸ್ತ ಕುಟುಂಬಗಳಿಗೆ ಹೋಗಿ ತಲಾ 1 ಲಕ್ಷ ಚೆಕ್ ನೀಡಿ ಸಾಂತ್ವನ ಹೇಳಿದೆ. ಕೋವಿಡ್ ನಿಂದ ಸತ್ತವರಿಗೂ ಸರ್ಕಾರ ಈವರೆಗೂ ಪರಿಹಾರ ಹಣ ನೀಡಿಲ್ಲ. ಇದು ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲ, ಇಡೀ ಸರ್ಕಾರದ ವೈಫಲ್ಯ ' ಎಂದು ಕಿಡಿಕಾರಿದರು.

ಕಾನೂನು ಮೂಲಕ ಎದುರಿಸುತ್ತೇವೆ : ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ಕೆಜಿಎಫ್ 2 ಚಿತ್ರದ ಹಾಡಿನ ಬಳಕೆ ವಿಚಾರವಾಗಿ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಹಾಗೂ ಇತರ ನಾಯಕರ ವಿರುದ್ಧ ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೇಶದೆಲ್ಲೆಡೆ ಜನ ಸಿನಿಮಾ ಹಾಡುಗಳನ್ನು ತಮ್ಮ ವಿಡಿಯೋಗಳಿಗೆ ಬಳಸುತ್ತಾರೆ.

ಅದರಲ್ಲಿ ಯಾವ ಅಪರಾಧ ಇದೆಯೋ ಎಂದು ತಿಳಿಯುತ್ತಿಲ್ಲ. ಇಂತಹ ಪ್ರಕರಣಗಳ ಅನೇಕ ಉದಾಹರಣೆ ಪಟ್ಟಿ ನೀಡಬಹುದು. ಇದನ್ನು ನಾವು ಕಾನೂನಿನ ಮೂಲಕ ಎದುರಿಸುತ್ತೇವೆ ' ಎಂದು ಹೇಳಿದರು.

ಇದನ್ನೂ ಓದಿ : ಡಿಕೆಶಿ, ಸಹೋದರ ಡಿಕೆ ಸುರೇಶ್​ಗೆ ಇಡಿಯಿಂದ ಮತ್ತೆ ಸಮನ್ಸ್ ಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.