ETV Bharat / state

ಹಿರಿಯ ಕಾಂಗ್ರೆಸ್ ಮುಖಂಡ ಬಿ ಕೆ ಪುಟ್ಟಸ್ವಾಮಿ ನಿಧನಕ್ಕೆ ಡಿ ಕೆ ಶಿವಕುಮಾರ್ ಸಂತಾಪ

author img

By

Published : Sep 24, 2022, 10:48 AM IST

ಹಿರಿಯ ಕಾಂಗ್ರೆಸ್​​ ಮುಖಂಡ ಹಾಗು ಮಂಡ್ಯ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ ಕೆ ಪುಟ್ಟಸ್ವಾಮಿ ನಿಧನಕ್ಕೆ ಡಿಕೆಶಿ ಸಂತಾಪ ಸೂಚಿಸಿದ್ದಾರೆ.

KN_BNG
ಡಿ ಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ವಿಜೇತ ಹಿರಿಯ ಕಾಂಗ್ರೆಸ್ ಮುಖಂಡ, ಮಂಡ್ಯ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ ಕೆ ಪುಟ್ಟಸ್ವಾಮಿ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಳವಳ್ಳಿ ಪಿಎಲ್​ಡಿ ಬ್ಯಾಂಕ್ ಮಾಜಿ ನಿರ್ದೇಶಕರು, ತಾಲೂಕು ಬೋರ್ಡ್ ಮಾಜಿ ಸದಸ್ಯರು, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷರು ಆಗಿದ್ದ ಪುಟ್ಟಸ್ವಾಮಿ ಅವರು ನೇರ ನಡೆ, ನುಡಿಯ ವ್ಯಕ್ತಿತ್ವ ಹೊಂದಿದ್ದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿದ್ದರು. ಹಿರಿಯ ಮಾರ್ಗದರ್ಶಕರೂ ಆಗಿದ್ದರು. ಅವರ ನಿಧನ ಅತೀವ ನೋವು ತಂದಿದೆ. ಪಕ್ಷಕ್ಕೆ ನಷ್ಟವಾಗಿದೆ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪುಟ್ಟಸ್ವಾಮಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಬಂಧುಗಳು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪುತ್ರಿಯ ಅಂಗಾಂಗ ದಾನ: ರಕ್ಷಿತಾ ಕುಟುಂಬಕ್ಕೆ 8 ಲಕ್ಷ ರೂ ಪರಿಹಾರ ಘೋಷಿಸಿದ ಸರ್ಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.